ಬೆಂಗಳೂರು : ಸುಂದರ ಪ್ರಕಾಶನ ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ನೀಡಲಾಗುವ ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ 2026’ ಪ್ರದಾನ ಸಮಾರಂಭವನ್ನು ದಿನಾಂಕ 15 ಮಾರ್ಚ್ 2026ರಂದು ಬೆಳಗ್ಗೆ 10-30 ಗಂಟೆಗೆ ಬೆಂಗಳೂರಿನ ಬಸವನಗುಡಿ ಬಿ.ಪಿ. ವಾಡಿಯ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇಲ್ಲಿ ಆಯೋಜಿಸಲಾಗಿದೆ.
2026ನೇ ಸಾಲಿನ ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ಯನ್ನು ಸುಗಮ ಸಂಗೀತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಗಾಯಕ ಸಂಗೀತ ನಿರ್ದೇಶಕ ಮೃತ್ಯುಂಜಯ ದೊಡ್ಡವಾಡ ಇವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ಕವಿ ಬಿ.ಆರ್. ಲಕ್ಷ್ಮಣರಾವ್ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕವಿ ನಾ. ದಾಮೋದರ ಶೆಟ್ಟಿ ಮತ್ತು ಗಾಯಕ ವೈ.ಕೆ. ಮುದ್ದುಕೃಷ್ಣ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಮೃತ್ಯುಂಜಯ ದೊಡ್ಡವಾಡ ಹಾಗೂ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

