ಉಡುಪಿ : ಯಕ್ಷಗಾನ ಕಲಾರಂಗದ ಈ ಬಾರಿಯ ತಾಳಮದ್ದಲೆ ಸಪ್ತಾಹವು ಮೇ 21, 2023ರಂದು ಸಂಜೆ 5.00 ಗಂಟೆಗೆ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಖ್ಯಾತ ವೈದ್ಯ ಡಾ. ಕಬ್ಯಾಡಿ ಹರಿರಾಮ ಆಚಾರ್ಯರು ಸಪ್ತಾಹವನ್ನು ದೀಪ ಬೆಳಗಿ ಉದ್ಘಾಟಿಸಿ “ಅರ್ಥಧಾರಿಗಳು ಪುರಾಣದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ವಾಹಕರು” ಎಂದರು.
ಉಡುಪಿಯ ಮಾನ್ಯ ಶಾಸಕರಾದ ಯಶ್ಪಾಕಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಷಿ, ಎ.ಜಿ.ಎಂ. ಕರ್ಣಾಟಕ ಬ್ಯಾಂಕ್ನೆ ಬಿ. ರಾಜಗೋಪಾಲ, ಪರ್ಕಳದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ದಿಲೀಪ್ರಾಾಜ್ ಹೆಗ್ಡೆ ಹಾಗೂ ಪಾಟೀಲ್ ಕ್ಲೋತ್ ಸ್ಟೋರ್‌ನ ಮಾಲಕರಾದ ಗಣೇಶ ಪಾಟೀಲ್, ಸಂಸ್ಥೆಯ ಉಪಾಧ್ಯಕ್ಷ ಎಸ್.ವಿ. ಭಟ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ 21-05-2023ರಂದು ಒಂದೇ ದಿನದಲ್ಲಿ ನಿಧನರಾದ ಸಂಸ್ಥೆಯ ಆಜೀವ ಸದಸ್ಯರಾಗಿದ್ದ ಮಾಜಿ ಶಾಸಕ ಯು.ಆರ್. ಸಭಾಪತಿ ಹಾಗೂ ಯಕ್ಷಗಾನ ಕಲಾವಿದ ರಾಮಕೃಷ್ಣ ಶೆಟ್ಟಿಗಾರ್ ಇವರಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ನುಡಿನಮನ ಸಲ್ಲಿಸಿದರು.
ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿಗಳಾದ ಹೆಚ್.ಎನ್.ಶೃಂಗೇಶ್ವರ ವಂದಿಸಿ, ನಾರಾಯಣ ಎಂ.ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ಬಳಿಕ ‘ಭೀಷ್ಮಾರ್ಜುನ’ ತಾಳಮದ್ದಲೆ ಪ್ರಸ್ತುತಗೊಂಡಿತು. ಸಪ್ತಾಹವು ಮೇ 21ರಿಂದ 27ರವರೆಗೆ ವಿವಿಧ ಸ್ಥಳಗಳಲ್ಲಿ ನಡೆಯಲಿದೆ.