Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪತ್ರಕರ್ತ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಆಯ್ಕೆ
    Literature

    ಪತ್ರಕರ್ತ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಆಯ್ಕೆ

    May 24, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ 2023ನೇ ಸಾಲಿನ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000(ಹತ್ತು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸ್ವಾತಂತ್ರ್ಯಹೋರಾಟಗಾರಾದ ಶ್ರೀ  ನಾಗಡಿಕೆರೆ ಕಿಟ್ಟಪ್ಪಗೌಡ ಅವರು ಈ ದತ್ತಿ ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ

    ರಾಜ್ಯಮಟ್ಟದ ಈ ಪುರಸ್ಕಾರವನ್ನು ಕನ್ನಡ ಪತ್ರಿಕೋದ್ಯಮದಲ್ಲಿ ನಿರ್ಭಿತವಾಗಿ ಯಾವುದೇ ಆಮಿಷಗಳಿಗೂ ಒಳಗಾಗದೆ ಪ್ರಾಮಾಣಿಕವಾಗಿ ವಿಮರ್ಶಿಸಿ, ಸರ್ಕಾರದ, ರಾಜಕಾರಣಿಗಳ, ಸರಕಾರಿ ನೌಕರರ. ಸಮಾಜದ ನ್ಯೂನತೆಗಳನ್ನು ಎತ್ತಿ ಹಿಡಿದು ತೋರಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡಬೇಕು ಎನ್ನುವುದು ದತ್ತಿ ದಾನಿಗಳ ಆಶಯವಾಗಿದೆ.

    ಈವರೆಗೆ ಕನ್ನಡ ಪತ್ರಿಕೋದ್ಯಮದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ 13 ಜನರಿಗೆ ಈ ಪ್ರಶಸ್ತಿʼಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರದಾನ ಮಾಡಲಾಗಿದ್ದು ಈ ಬಾರಿ 2023ನೇ ಸಾಲಿನ ಪ್ರಶಸ್ತಿಯು 14ನೇ ಪ್ರಶಸ್ತಿಯಾಗಿದೆ. ಪ್ರಸ್ತುತ ಕನ್ನಡದ ಪ್ರಮುಖ ದಿನಪತ್ರಿಕೆಯಾಗಿರುವ ʻವಿಜಯ ಕರ್ನಾಟಕʼ ದಿನಪತ್ರಿಕೆಯಲ್ಲಿ ಇವರು ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಆಯ್ಕೆಯಾಗಿರುವ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ ಎಂದು ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ, ಮಹೇಶ ಜೋಶಿ ಅವರು ತಿಳಿಸಿದ್ದಾರೆ.

    ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕದ್ರಿಯಲ್ಲಿ ‘ಸರಯೂ ಸಪ್ತಾಹ -2023’ | ಮೇ 25ರಿಂದ 31
    Next Article ಡಾ.ಪುನೀತ್ ರಾಜಕುಮಾರ ಕೋಚಿಂಗ್ ಸೆಂಟರ್ ನಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಕನ್ನಡ ಪ್ರವೇಶ ಪರೀಕ್ಷಾ ತರಗತಿಗಳ ಉದ್ಘಾಟನೆ’ 
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.