ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ಕೂಟ ಗೇರುಸೊಪ್ಪೆ ಶಾಂತಪ್ಪಯ್ಯ ವಿರಚಿತ ‘ಶಲ್ಯ ಸಾರಥ್ಯ’ ಎಂಬ ಆಖ್ಯಾನದೊಂದಿಗೆ ದಿನಾಂಕ 21 ಏಪ್ರಿಲ್ 2026ನೇ ಮಂಗಳವಾರ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಆನಂದ ಸವಣೂರು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅನೀಶ ಕೃಷ್ಣ ಪುಣಚ, ಸಮರ್ಥ ವಿಷ್ಣು ಕಡಂಬಳಿಕೆ ಭಾಗವಹಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಮಾಂಬಾಡಿ ವೇಣುಗೋಪಾಲ್ ಭಟ್ (ಕೌರವ), ಗುಡ್ಡಪ್ಪ ಬಲ್ಯ (ಶಲ್ಯ), ಬಡೆಕ್ಕಿಲ ಚಂದ್ರಶೇಖರ ಭಟ್ (ಕರ್ಣ) ಸಹಕರಿಸಿದರು. ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಪಾಲಾರ್ ಕನ್ಸ್ಟ್ರಕ್ಷನ್ ನ ವಿಜಯ ಪಾಲಾರ್ ಪ್ರಾಯೋಜಿಸಿದರು. ಶ್ರೀ ದೇವಳದ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ಸಹಕರಿಸಿದರು.
