ಮೈಸೂರು: ನಟನ ರಂಗಶಾಲೆಯಲ್ಲಿ ರಂಗಭೂಮಿ ‘ಡಿಪ್ಲೊಮಾ 2023-24’ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿಯ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ಜೂನ್ 11 ರಂದು ನಡೆಯಲಿದೆ.
ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ.
ತನ್ನ ಚಟುವಟಿಕೆಯ ಭಾಗವಾಗಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ಮಾನ್ಯತೆಯಡಿಯಲ್ಲಿ 16ರಿಂದ 30ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ರಂಗಭೂಮಿ ಡಿಪ್ಲೊಮಾ ಕೋರ್ಸ್ ಅನ್ನು ನಡೆಸುತ್ತಿದ್ದು, 2023-24ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ ದಿನಾಂಕ 11-06-2023 ರಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ.
ಪ್ರತಿದಿನ ಸಂಜೆ 5.30ರಿಂದ 9ರ ವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾಧನ, ಬೆಳಕು, ರಂಗ ವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ ಮತ್ತು ಪ್ರದರ್ಶನ.. ಹೀಗೆ ರಂಗಭೂಮಿಯ ಬೇರೆ ಬೇರೆ ಆಯಾಮಗಳ ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದೆ.
ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ನಟನ ರಂಗಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ನಟನ ರಂಗಶಾಲೆಯಲ್ಲಿ ತರಬೇತಿ ಪಡೆದ ಸುಮಾರು 500ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ದಿನಾಂಕ ದಂದೇ ಸಂದರ್ಶನದಲ್ಲಿ ಭಾಗವಹಿಸತಕ್ಕದ್ದು. ರಂಗಭೂಮಿಯನ್ನು ಗಂಭೀರವಾಗಿ ಅಭ್ಯಸಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್ (www.natanamysuru.org) ಅಥವಾ ಕಛೇರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಪಡೆದು ಅಂಚೆ ಮುಖಾಂತರ ಅಥವಾ ನೇರವಾಗಿ ತಲುಪಿಸತಕ್ಕದ್ದು. ಆಡಿಷನ್ ಮತ್ತು ಪ್ರವೇಶಾತಿ ಕುರಿತ ಸೂಚನೆಗಳು ಮತ್ತು ಹೆಚ್ಚಿನ ಮಾಹಿತಿಗಳು ವೆಬ್‌ಸೈಟ್ ಅಲ್ಲಿ ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ 7259537777,9480468327,9845595505 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು .
Subscribe to Updates
Get the latest creative news from FooBar about art, design and business.
ನಟನ ರಂಗಶಾಲೆಯ ರಂಗಭೂಮಿ ‘ಡಿಪ್ಲೊಮಾ 2023-24’ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಆಹ್ವಾನ
Previous Articleಮಂಜೇಶ್ವರದಲ್ಲಿ ಚಿಣ್ಣರ ಚಿಲುಮೆ ದ್ವಿದಿನ ಸಹವಾಸ ಶಿಬಿರ
Next Article ಕಾದಂಬರಿ ಪ್ರಶಸ್ತಿಗೆ ಆಹ್ವಾನ