ಕಾರ್ಕಳ : ಕನ್ನಡ ಸಂಘ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಜಂಟಿಯಾಗಿ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆದ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮವು ದಿನಾಂಕ 24-06-2023ರ ಶನಿವಾರದಂದು ನಡೆಯಿತು.
ಖ್ಯಾತ ಸಂಸ್ಕೃತ ವಿದ್ವಾಂಸರು ಹಾಗೂ ಉಪನ್ಯಾಸಕರೂ ಆಗಿರುವ ಶ್ರೀ ಜಿ.ಪಿ.ಪ್ರಭಾಕರ್ ತುಮರಿಯವರು ‘ ಸಂಸ್ಕೃತ ನಾಟಕಗಳು ಮತ್ತು ಆಧುನಿಕ ರಂಗಭೂಮಿ -ಹೊಸ ಸಾಧ್ಯತೆಗಳು ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡುತ್ತಾ “ವೇದಮೂಲವಾದ ನಮ್ಮ ಎಲ್ಲಾ ಕಲಾಪ್ರಕಾರಗಳಲ್ಲಿ ನಾಟಕವೂ ಕೂಡಾ ಒಂದಾಗಿದ್ದು ವೇದಗಳಲ್ಲಿ ನಾಟಕದ ಬೀಜರೂಪದ ಅನೇಕ ಘಟನೆಗಳನ್ನು ಮತ್ತು ಕಥೆಗಳನ್ನು ಗಮನಿಸಬಹುದಾಗಿದ್ದು ಸಂಸ್ಕೃತ ನಾಟಕ ಪರಂಪರೆಯಲ್ಲಿರುವ ಕ್ರಾಂತಿಕಾರಕ ಹೆಜ್ಜೆಗಳನ್ನು ಕೂಡಾ ಗುರುತಿಸಬಹುದಾಗಿದೆ. ಭಾಸ, ಕಾಳಿದಾಸ ಮುಂತಾದ ಅನೇಕ ಕವಿಗಳು ರಚಿಸಿದ ಸಂಸ್ಕೃತ ನಾಟಕಗಳು ರಂಗದಲ್ಲಿ ಯಶಸ್ವಿಯಾಗಿದ್ದು ಭಕ್ತಿ ಚಳವಳಿಯ ಕಾಲಘಟ್ಟದಲ್ಲಿಯೂ ಸಂಸ್ಕೃತ ನಾಟಕಗಳು ಮತ್ತು ಕಾವ್ಯ ಪರಂಪರೆ ಬೆಳೆದು ಬಂದಿದ್ದು ಕನ್ನಡ ಮತ್ತು ಸಂಸ್ಕೃತದ ಉತ್ತಮ ಭಾಂಧವ್ಯದಿಂದಾಗಿ ಅನೇಕ ಕಂಪೆನಿ ನಾಟಕಗಳಲ್ಲಿಯೂ ಸಂಸ್ಕೃತದಿಂದ ಅನುವಾದಿತ ನಾಟಕಗಳು ಕೆಲವು ಮಾರ್ಪಾಡುಗಳೊಂದಿಗೆ ವೃತ್ತಿ ರಂಗಭೂಮಿಯಲ್ಲಿ ಯಶಸ್ವಿಯಾಗಿವೆ ಎಂದರು. ಭರತನ ನಾಟ್ಯ ಶಾಸ್ತ್ರದಲ್ಲಿ ನಾಟಕದ ಬಗ್ಗೆಯೂ ಉಲ್ಲೇಖವಿದ್ದು ಅದನ್ನವರು ಸೋದಾಹರಣವಾಗಿ ವಿವರಿಸಿದರು.
ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ, ಅ.ಭಾ.ಸಾ.ಪ.ಕಾರ್ಕಳ ತಾಲೂಕಿನ ಗೌರವಾಧ್ಯಕ್ಷರಾದ ಶ್ರೀ ನಿತ್ಯಾನಂದ ಪೈ, ಉಪಾಧ್ಯಕ್ಷರಾದ ಕ್ಯಾ.ರಮೇಶ್ ಕಾರ್ಣಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಶ್ರೀಮತಿ ಗೀತಾ ಮಲ್ಯ ಅವರು ಪ್ರಾರ್ಥಿಸಿದರು. ಶ್ರೀಮತಿ ವೀಣಾ ರಾಜೇಶ್ ಉಪನ್ಯಾಸಕರನ್ನು ಪರಿಚಯಿಸಿ. ಸತೀಶ್ ಕುಮಾರ್ ಕೆಮ್ಮಣ್ಣು ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ ವಂದಿಸಿದರು.
Subscribe to Updates
Get the latest creative news from FooBar about art, design and business.
ಕಾರ್ಕಳದಲ್ಲಿ ‘ಅರಿವು ತಿಳಿವು’ ತಿಂಗಳ ಉಪನ್ಯಾಸ – ಶ್ರೀ ಜಿ.ಪಿ.ಪ್ರಭಾಕರ್ ತುಮರಿಯವರಿಂದ
Previous Articleಮಂಜೇಶ್ವರದಲ್ಲಿ ‘ಗಡಿನಾಡಿನಲ್ಲಿ ಕನ್ನಡೋತ್ಸವ’
Next Article ನಿರ್ದೇಶಕ, ಗೀತ ರಚನೆಕಾರ ಸಿ.ವಿ.ಶಿವಶಂಕರ್ ನಿಧನ