ಮಡಿಕೇರಿ: ದಿನಾಂಕ 14-07-2023 ರಂದು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ರವರನ್ನು ಆಯ್ಕೆಗೊಳಿಸಲಾಗಿದೆ. ಗೌರವ ಕಾರ್ಯದರ್ಶಿಗಳಾಗಿ ಪುದಿಯನೆರವನ ರಿಶೀತ್ ಮಾದಯ್ಯ ಮತ್ತು ಶ್ರೀಮತಿ ಬಾಳೆಯಡ ದಿವ್ಯ ಮಂದಪ್ಪ ಹಾಗೂ ಕೋಶಾಧಿಕಾರಿಯಾಗಿ ಸಿದ್ದರಾಜು ಬೆಳ್ಳಯ್ಯರವರನ್ನು ನೇಮಕಗೊಳಿಸಲಾಗಿದೆ. ಸಂಘಟನಾ ಕಾರ್ಯದರ್ಶಿಯಾಗಿ ಚೊಕ್ಕಾಡಿ ಪ್ರೇಮಾ ರಾಘವಯ್ಯ ಮತ್ತು ತಳೂರು ದಿನೇಶ್ ಕರುಂಬಯ್ಯರವರನ್ನು ಆಯ್ಕೆಗೊಳಿಸಲಾಗಿದ್ದು ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಎಚ್.ಟಿ. ಅನಿಲ್, ಮಹಿಳಾ ಪ್ರತಿನಿಧಿಗಳಾಗಿ ಶ್ರೀಮತಿ ಶೋಭಾ ಸುಬ್ಬಯ್ಯ, ಶ್ರೀಮತಿ ಗೌರಮ್ಮ ಮಾದಮಯ್ಯ, ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ ಬಿ.ಎಲ್. ಸಂದೇಶ್ ಮತ್ತು ಶ್ರೀಮತಿ ಎಚ್.ಪಿ. ಜಯಮ್ಮ, ಪರಿಶಿಷ್ಟ ಪಂಗಡ ಪ್ರತಿನಿಧಿಯಾಗಿ ಬಿ.ಎಸ್. ರಂಗಪ್ಪ, ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಎಂ.ಎಂ. ಅಬ್ದುಲ್ಲಾ, ನಿಕಟ ಪೂರ್ವ ಅಧ್ಯಕ್ಷರಾಗಿ ಶ್ರೀ ಅಂಬೇಕಲ್ ನವೀನ್ ಕಾರ್ಯನಿರ್ವಹಿಸಲಿದ್ದಾರೆ.
ಪದನಿಮಿತ್ತ ಪ್ರತಿನಿಧಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಡಿಕೇರಿ. ಶಿಕ್ಷಣಾಧಿಕಾರಿಗಳು ಮಡಿಕೇರಿ ತಾಲೂಕು ಕ್ಷೇತ್ರ, ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರು, ಶ್ರೀ ರಾಜರಾಜೇಶ್ವರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿಗಳಾದ ಪುರುಷೊತಮ್, ಸಂಜೀವಿನಿ, ಒಕ್ಕೂಟದ ತಾಲೂಕು ಅಧ್ಯಕ್ಷರಾದ ಶ್ರೀಮತಿ ರೇಖಾ, ಅಂಗನವಾಡಿ ಕಾರ್ಯಕರ್ತೆಯ ಸಂಸ್ಥೆಯ ತಾಲೂಕು ಅಧ್ಯಕ್ಷರಾದ ಶ್ರೀಮತಿ ಸಿ.ಯು. ಪವಿತ್ರ ಕಾರ್ಯನಿರ್ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕುಡೆಕಲ್ ಸಂತೋಷ್, ಶ್ರೀಮತಿ ಪಿ.ಪಿ. ಸೋನಾ ಪ್ರೀತು, ಶ್ರೀಮತಿ ಪೂರ್ಣಿಮಾ ಜೋಶಿ, ಸುನಿಲ್ ಲೋಬೊ, ಮೆಹಬೂಬ್ ಖಾನ್, ಕೆ.ಯು. ರಂಜಿತ್, ಶ್ರೀಮತಿ ಗೀತಾ ಗಿರೀಶ್, ಎಂ.ಎಂ ಅಹಮದ್ ಆಲಿ, ಶ್ರೀಮತಿ ಯು.ಸಿ. ದಮಯಂತಿ, ಹರೀಶ್ ಸರಳಾಯ, ವಿ. ಜಯರಾಜ್, ಜೆ. ಮಹೇಶ್ವರ್, ವಿನೋದ್ ಮೂಡಗೆದ್ದೆ ಮತ್ತು ಶ್ರೀಮತಿ ಚಿತ್ರ ಆರ್ಯನ್ ರವರನ್ನು ನೇಮಿಸಿ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಆದೇಶಿಸಿದ್ದಾರೆ. ನಿಕಟ ಪೂರ್ವ ಅಧ್ಯಕ್ಷರಾಗಿದ್ದ ಅಂಬೆಕಲ್ ನವೀನ್ ರವರು ತಮ್ಮ ಕಾರ್ಯಬಾಹುಳ್ಯದ ನಿಮಿತ್ತ ರಾಜೀನಾಮೆ ನೀಡಿದ್ದರು. ಶ್ರೀಮತಿ ಕಡ್ಲೇರ ತುಳಸಿ ಮೋಹನ್ ರವರ ನೇತೃತ್ವದ ನೂತನ ಕಾರ್ಯಕಾರಿ ಮಂಡಳಿಯನ್ನು ಘೋಷಿಸಲಾಗಿದೆ. ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಮೊದಲ ಮಹಿಳಾ ಅಧ್ಯಕ್ಷೆ ಯಾಗಿ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಕಾರ್ಯನಿರ್ವಹಿಸಲಿದ್ದಾರೆ.