ಮೂಡಬಿದ್ರಿ: ಹೊಸ ಹೊಸ ಪ್ರಯೋಗಗಳನ್ನು ಹಚ್ಚಿಕೊಂಡು, ಸಮಾಜಕ್ಕೆ ತನ್ನದೇ ಆದ ರೀತಿಯಲ್ಲಿ ಹಲವಾರು ಕೊಡುಗೆಗಳನ್ನು ನೀಡಿರುವ ಆಳ್ವಾಸ್ ವಿದ್ಯಾಸಂಸ್ಥೆಯ ಪದವಿ ಕಾಲೇಜಿನಲ್ಲಿ ದಿನಾಂಕ : 15-07-2023ರಂದು “ಭರತನಾಟ್ಯದಲ್ಲಿ ತಾಳಾವಧಾನ” ಎಂಬ ಹೊಸ ಪ್ರಯೋಗಗಳನ್ನು ಒಳಗೊಂಡ ಶೈಕ್ಷಣಿಕ ಸರ್ಟಿಫಿಕೇಟ್ ಕೋರ್ಸಿನ ಸಮಾರೋಪ ಸಮಾರಂಭ ನಡೆಯಿತು. ಇದನ್ನು ಭರತನಾಟ್ಯ ಕ್ಷೇತ್ರಕ್ಕೆಂದೇ ಅನ್ವೇಷಿಸಿ, ರೂಪಿಸಿದವರು ಯುವ ವಿದ್ವಾಂಸರಾದ ಭರತನಾಟ್ಯ ಕಲಾವಿದ ವಿದ್ವಾನ್ ಮಂಜುನಾಥ ಎನ್. ಪುತ್ತೂರು. ಈ ಕೋರ್ಸಿನಲ್ಲಿ ನಾಲ್ಕು ಅಧ್ಯಾಯಗಳಿದ್ದು, ಹೊಸ ಪ್ರಯೋಗಗಳನ್ನು ಮತ್ತು ಹಲವಾರು ಚಟುವಟಿಕೆಗಳನ್ನು ಒಳಗೊಂಡಿದೆ. ಆಳ್ವಾಸ್ ಪದವಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುರಿಯನ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀಮತಿ ಅಂಜಲಿ ಹಾಗೂ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಉಪಸ್ಥಿತರಿದ್ದರು.