ಮಂಗಳೂರು: ಮೈಸೂರಿನಲ್ಲಿರುವ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಜೊತೆ ರಾಜ್ಯದ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ, ಮತ್ತು ಇತರ ಪ್ರದರ್ಶಕ ಕಲೆಗಳ ಕೋರ್ಸ್ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಗೀತ ಹಾಗೂ ಕಲಾಸಂಸ್ಥೆಗಳು 30-07-2023ರೊಳಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ಡಾ.ಗಂಗೂಬಾಯಿ ಹಾನಗಲ್ ವಿ.ವಿಯ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಇವರು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ವಿ.ವಿ ಜೊತೆ ಒಡಂಬಡಿಕೆ ಮಾಡಿಕೊಂಡ ಸಂಸ್ಥೆಗಳು ನಡೆಸುವ ವಿವಿಧ ಕಲಾ ಪ್ರಕಾರಗಳಿಗೆ ಸಂಬಂಧಿಸಿ ನೀಡುವ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಅಥವಾ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ನಿಯಮಾನುಸಾರ ಪರೀಕ್ಷೆಗಳನ್ನು ನಡೆಸಲಿದೆ. ಈವರೆಗೆ ಕರ್ನಾಟಕ ಸರಕಾರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುತ್ತಿದ್ದ ಸಂಗೀತ ಪರೀಕ್ಷೆ ಮತ್ತು ಪ್ರದರ್ಶಕ ಕಲೆಗಳ ಪರೀಕ್ಷೆಗಳ ಸಂಪೂರ್ಣ ಜವಾಬ್ದಾರಿಯನ್ನು ಗಂಗೂಬಾಯಿ ಹಾನಗಲ್ ವಿ.ವಿ ವಹಿಸಲಿದೆ. ವಿವಿಯು ಈವರೆಗೆ ಕೇಂದ್ರ ಸ್ಥಾನದಲ್ಲಿ ಮಾತ್ರವೇ ನಡೆಸುತ್ತಿದ್ದ ಕೋರ್ಸ್ ಗಳನ್ನು ರಾಜ್ಯವ್ಯಾಪಿ ನಡೆಸುವ ಪ್ರಕ್ರಿಯೆಗೆ ಚಾಲನೆ ದೊರಕಿದ್ದು, ರಾಜ್ಯಪಾಲರಿಂದ ಅಂಕಿತ ದೊರಕಿದೆ ಹಾಗೂ ಈಗಾಗಲೇ 10 ಸಂಸ್ಥೆಗಳು ಒಡಂಬಂಡಿಕೆ ಮಾಡಿಕೊಂಡಿವೆ ಎಂದು ಹೇಳಿದರು .
ಪಠ್ಯ ಕ್ರಮಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ಜೊತೆಗೆ ಆಧುನಿಕ ತಾಂತ್ರಿಕತೆಯನ್ನು ಸದ್ಬಳಕೆ ಮಾಡಿಕೊಂಡು, ಪಾರದರ್ಶಕತೆಯಿಂದ ಪರೀಕ್ಷೆಗಳನ್ನು ವಿಶ್ವವಿದ್ಯಾಲಯದಲ್ಲಿ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಥಮ ಪರೀಕ್ಷೆ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
Subscribe to Updates
Get the latest creative news from FooBar about art, design and business.
Previous Articleಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ‘ರಂಗ ಸಂಗಮ’