Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯಶವಂತ ಚಿತ್ತಾಲರಿಗೆ ಪುಷ್ಪ ನಮನ
    Literature

    ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯಶವಂತ ಚಿತ್ತಾಲರಿಗೆ ಪುಷ್ಪ ನಮನ

    August 8, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯಶವಂತ ಚಿತ್ತಾಲರ 95ನೆಯ ಜನ್ಮ ದಿನದ ಹಿನ್ನೆಯಲ್ಲಿ ಹಮ್ಮಿಕೊಂಡ ಪುಷ್ಪನಮನ ಕಾರ್ಯಕ್ರಮ ದಿನಾಂಕ 03-08-2023ರಂದು ನಡೆಯಿತು.
    ಚಿತ್ತಾಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು “ಕನ್ನಡ ಕಥಾಲೋಕಕ್ಕೆ ಬಹಳ ದೊಡ್ಡ ಕೊಡುಗೆಯನ್ನು ನೀಡಿದ ಯಶವಂತ ಚಿತ್ತಾಲರು. ಅದುವರೆಗೂ ಕನ್ನಡ ಸಾಹಿತ್ಯಕ್ಕೆ ಅಪರಿಚಿತವಾಗಿದ್ದ ಕಾರ್ಪೂರೇಟ್ ಲೋಕದ ಅನುಭವವನ್ನು ಪರಿಚಯಿಸಿದವರು. ಹನೇಹಳ್ಳಿಯ ಹುಲುಸಾದ ಅನುಭವವನ್ನು ಮತ್ತು ಮುಂಬೈ ಮಾಯಾನಗರಿಯ ಆತಂಕಗಳನ್ನು ತಮ್ಮ ವಿಶಿಷ್ಟ ಕಥನದ ಮೂಲಕ ಹಿಡಿದಿಟ್ಟ ಚಿತ್ತಾಲರು ಕನ್ನಡ ಸಾಹಿತ್ಯ ಲೋಕದ ಸೀಮೆಯನ್ನು ವಿಸ್ತರಿಸಿದರು. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಳಿ ಇರುವ ಸಣ್ಣ ಊರು ಹನೇಹಳ್ಳಿಯಲ್ಲಿ ದಿನಾಂಕ 03-08-1928 ರಂದು ಹುಟ್ಟಿ ಬೆಳೆದವರು ಯಶವಂತ ವಿಠೋಬಾ ಚಿತ್ತಾಲರು.
    ಕುಮಟಾ, ಧಾರವಾಡ, ಮುಂಬಯಿ, ನ್ಯೂಜರ್ಸಿ (ಅಮೆರಿಕಾ)ಗಳಲ್ಲಿ ಓದು ಮುಗಿಸಿದ ಇವರು ರಸಾಯನ ವಿಜ್ಞಾನದ ಶಾಖೆಯಾದ ಪಾಲಿಮಾರ್ ತಂತ್ರಜ್ಞಾನದಲ್ಲಿ ತಜ್ಞತೆಯ ಸಂಪಾದನೆಯ ಜೊತೆಗೆ ಮುಂಬಯಿ ವಿಶ್ವವಿದ್ಯಾನಿಲಯದ ಪ್ಲ್ಯಾಸ್ಟಿಕ್ ವಿಭಾಗದಲ್ಲಿ ಪದವಿಯನ್ನು ಮುಗಿಸಿ, ಸ್ಟೀಫನ್ಸ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ನಾತಕೋತ್ತರ ಪದವಿಯನ್ನು ಪಡೆದ ನಂತರ ಬೇಕ್‌ಲೈಟ್ ಹೈಲಾಂ ಸಂಸ್ಥೆಯಲ್ಲಿ ಉದ್ಯೋಗ ಮಾಡಿ ನಿವೃತ್ತಿಯನ್ನು ಪಡೆದರು. ದೂರದರ್ಶನದ ನಿರ್ದೇಶಕರಾಗಿದ್ದಾಗ ಯಶವಂತ ಚಿತ್ತಾಲರ ‘ಶಿಕಾರಿ’ ಕಾದಂಬರಿ ಟಿ.ವಿ ಧಾರವಾಹಿಯಾಗಿ ಪ್ರಸಾರವಾಗಿತ್ತು.” ಎಂದು ಅಭಿಮಾನದಿಂದ ಹೇಳಿದರು.
    ಇದೇ ಸಂದರ್ಭದಲ್ಲಿ ಯಶವಂತ ಚಿತ್ತಾಲರ ಜೊತೆಗಿನ ತಮ್ಮ ಒಡನಾಟವನ್ನು ಹಂಚಿ ಕೊಂಡ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ.ಎನ್.ಎಸ್.ಶ್ರೀಧರ ಮೂರ್ತಿಯವರು “ಚಿತ್ತಾಲರ ಶಿಕಾರಿ ಕಾದಂಬರಿ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮವನ್ನು ನೀಡಿದೆ. ಅವರ ವಿಶಿಷ್ಟ ಕಥೆಗಳಾದ ‘ಕತೆಯಾದಳು ಹುಡುಗಿʼ, ʻಆಟʼ, ʻಅಬೋಲಿನʼ ಮೊದಲಾದವುಗಳ ಮಹತ್ತ್ವವನ್ನು ಹೇಳಿ ತಮ್ಮ ಅನಾರೋಗ್ಯದ ಸಂದರ್ಭದಲ್ಲಿಯೂ ‘ದಿಗಂಬರ’ ಕಾದಂಬರಿಯನ್ನು ಬರೆದ ಕ್ರಮವನ್ನು ವರ್ಣಿಸಿದರು.”
    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಯಶವಂತ ಚಿತ್ತಾಲರ 95ನೆಯ ಜನ್ಮ ಜನ್ಮದಿನದ ಹಿನ್ನೆಲೆಯಲ್ಲಿ ಪರಿಷತ್ತಿನಲ್ಲಿ ಹಮ್ಮಿಕೊಂಡ ಪುಷ್ಪನಮನ ಕಾರ್ಯಕ್ರಮದಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ.ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷರಾದ ಡಾ.ಬಿ.ಎಮ್‌.ಪಟೇಲ್‌ ಪಾಂಡು ಸೇರಿದಂತೆ ಇತರ ಪದಾಧಿಕಾರಿಗಳು ಹಾಗೂ ಪರಿಷತ್ತಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾಶ್ರೀ ಕುಸಾಲ್ದ ಕಲಾವಿದೆರ್ ಕುಡ್ಲ-ಬೆದ್ರ ಇವರಿಂದ ಹೊಸ ನಾಟಕದ ಶೀರ್ಷಿಕೆ ಬಿಡುಗಡೆ | ಆಗಸ್ಟ್ 11ರಂದು
    Next Article ಮಂಗಳೂರು ಅಬ್ಬಕ್ಕ ಪ್ರತಿಷ್ಠಾನದಿಂದ ‘ಆಷಾಢದ ಆಶಯ’ ಸಂವಾದ ಕಾರ್ಯಕ್ರಮ
    roovari

    Add Comment Cancel Reply


    Related Posts

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ಸವಿತಾ ಮಾಧವ ಶಾಸ್ತ್ರಿ ಮಹಿಳಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.