9 ಮಾರ್ಚ್ 2023, ಬೆಂಗಳೂರು: ರಾಣಿ ಅಬ್ಬಕ್ಕ ಉತ್ಸವ ಸಮಿತಿ ಬೆಂಗಳೂರು ಇದರ ವತಿಯಿಂದ ಇದೇ ಮಾರ್ಚ್ 12 ಭಾನುವಾರದಂದು ‘ರಾಣಿ ಅಬ್ಬಕ್ಕ ಉತ್ಸವ’ವನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ‘ರಾಣಿ ಅಬ್ಬಕ್ಕ ಕ್ರೀಡಾಂಗಣ’ದಲ್ಲಿ ಆಯೋಜಿಸಲಾಗಿದೆ.
ದಿನಾಂಕ 07-03-2023 ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ವೀರರಾಣಿ ಅಬ್ಬಕ್ಕನ ಹೆಸರು, ಕೆಚ್ಚೆದೆಯ ಹೋರಾಟ ಮತ್ತು ಕೀರ್ತಿಯನ್ನು ನಾಡಿನೆಲ್ಲೆಡೆ ಪಸರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಸಂಘ ಸಂಸ್ಥೆಗಳು ಸೇರಿ ಈ ಕಾರ್ಯಕ್ರಮ ಆಯೋಜಿಸಿವೆ. ಅಂದು ಪೂರ್ವಾಹ್ನ 9 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಅಬಕಾರಿ ಸಚಿವ ಗೋಪಾಲಯ್ಯ, ಶಾಸಕ ಯು.ಟಿ. ಖಾದರ್ ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸುಮಾರು 20 ಸಾವಿರ ಮಂದಿ ಭಾಗವಹಿಸುವ ಈ ಉತ್ಸವದಲ್ಲಿ ಮೂಡಬಿದರೆಯ ಆಳ್ವಾಸ್ ತಂಡ ಪ್ರದರ್ಶನ ನೀಡಲಿದೆ. ಕರಾವಳಿ ಸೇರಿದಂತೆ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೋತ್ಸವಗಳು ಉತ್ಸವದ ಆಕರ್ಷಣೆಯಾಗಲಿವೆ. ಆಹಾರ ಮೇಳ ಸೇರಿದಂತೆ ಸುಮಾರು 150ರಷ್ಟು ಮಳಿಗೆಗಳು ಇರುತ್ತವೆ ಎಂದವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಬ್ಬಕ್ಕ ಉತ್ಸವದ ಬೆಂಬಲಿಗರಾದ ಕದ್ರಿ ನವನೀತ ಶೆಟ್ಟಿ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು
Subscribe to Updates
Get the latest creative news from FooBar about art, design and business.
Previous Article“ಟಿ. ಸುನಂದಮ್ಮ ಪ್ರಶಸ್ತಿ” – ಭುವನೇಶ್ವರಿ ಹೆಗಡೆ ಆಯ್ಕೆ
Next Article ಕಾಸರಗೋಡಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ