Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ಅಭಿನಯ ಕಾರ್ಯಾಗಾರ’ಕ್ಕೆ ಚಾಲನೆ
    Theatre

    ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ಅಭಿನಯ ಕಾರ್ಯಾಗಾರ’ಕ್ಕೆ ಚಾಲನೆ

    July 6, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ಕಾಲೇಜು (ಸ್ವಾಯತ್ತ) ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ, ರಂಗಭೂಮಿ, ಸಿನಿಮಾ, ಧಾರಾವಾಹಿ ಮತ್ತು ಕಿರುಚಿತ್ರಗಳಲ್ಲಿ ಅಭಿನಯಿಸಲು ಆಸಕ್ತಿ ಹೊಂದಿರುವವರಿಗಾಗಿ ಆಯೋಜಿಸಲಾದ ಎರಡು ದಿನಗಳ ಅಭಿನಯ ಸೂಕ್ಷ್ಮತೆಗಳ ತರಬೇತಿ ಕಾರ್ಯಾಗಾರಕ್ಕೆ ದಿನಾಂಕ 06 ಜುಲೈ 2026ರಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ಚಾಲನೆ ದೊರೆಯಿತು.

    ಕೇಂದ್ರದ ನಿರ್ದೇಶಕ ಡಾ. ಜೀವನ್‌ರಾಮ್ ಸುಳ್ಯರವರ ಮಾರ್ಗದರ್ಶನದಲ್ಲಿ ದಿನಾಂಕ 6 ಮತ್ತು 07 ಜುಲೈ 2026ರಂದು ನಡೆಯಲಿರುವ ಈ ಕಾರ್ಯಾಗಾರದಲ್ಲಿ ಅಭಿನಯದ ವಿವಿಧ ಆಯಾಮಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ “ಅಭಿನಯವು ಕೇವಲ ರಂಗಭೂಮಿ ಅಥವಾ ಸಿನಿಮಾಕ್ಕೆ ಸೀಮಿತವಾಗಿಲ್ಲ. ಶಿಕ್ಷಕರು, ವೃತ್ತಿಪರರು, ಆಡಳಿತಗಾರರು ಸೇರಿದಂತೆ ಪ್ರತಿಯೊಬ್ಬರ ಬದುಕಿನಲ್ಲೂ ಪರಿಣಾಮಕಾರಿ ಅಭಿವ್ಯಕ್ತಿಗೆ ಅಭಿನಯದ ಕೌಶಲ್ಯ ಅತ್ಯಗತ್ಯ. ಇಂದಿನ ಯುವಜನರಲ್ಲಿ ದೇಹದ ಚಲನವಲನವು ಸಹಜತೆಯನ್ನು ಕಳೆದುಕೊಂಡು ಬಿಗಿತ ಹೆಚ್ಚಾಗಿದೆ. ಅದನ್ನು ನಿವಾರಿಸಿ ದೇಹಭಾಷೆ, ಆತ್ಮವಿಶ್ವಾಸ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗುತ್ತವೆ. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕಾದರೆ ಪ್ರತಿಭೆಯ ಜೊತೆಗೆ ಪ್ಯಾಷನ್, ಸಂಪೂರ್ಣ ತೊಡಗಿಸಿಕೊಳ್ಳುವಿಕೆ ಹಾಗೂ ಅಭಿರುಚಿಯೂ ಮುಖ್ಯ. ಡಾ. ಜೀವನ್‌ರಾಮ್ ಸುಳ್ಯರವರು ಅತ್ಯುತ್ತಮ ತರಬೇತುದಾರರಾಗಿದ್ದು, ಅವರ ಮಾರ್ಗದರ್ಶನದಲ್ಲಿ ಅನೇಕ ಕಲಾವಿದರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ರಂಗಕಲೆಯ ಎಲ್ಲಾ ಆಯಾಮಗಳನ್ನು ವ್ಯವಸ್ಥಿತವಾಗಿ ಕಲಿಯಲು ಈ ಕಾರ್ಯಾಗಾರ ಉತ್ತಮ ವೇದಿಕೆಯಾಗಿದ್ದು, ತರಗತಿ ಕೊಠಡಿಯಲ್ಲಿ ದೊರೆಯುವ ಸೈದ್ಧಾಂತಿಕ ಕಲಿಕೆಗೆ ಹೋಲಿಸಿದರೆ ಪ್ರಾಯೋಗಿಕ ಅನುಭವದಿಂದ ಹತ್ತು ಪಟ್ಟು ಹೆಚ್ಚಿನ ಅರಿವು ದೊರೆಯುತ್ತದೆ ಎಂದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಬೆಳವಣಿಗೆಯಲ್ಲಿ ಡಾ. ಜೀವನ್‌ರಾಮ್ ಸುಳ್ಯ ರವರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.

    ಕಾರ್ಯಾಗಾರದ ನಿರ್ದೇಶಕ ಡಾ. ಜೀವನ್‌ರಾಮ್ ಸುಳ್ಯ ಮಾತನಾಡಿ, “ಅಭಿನಯವು ವೈಯಕ್ತಿಕ ಪ್ರದರ್ಶನವಲ್ಲ, ಅದು ಸಮೂಹದೊಂದಿಗೆ ಬೆಳೆಯುವ ಕಲೆಯಾಗಿದೆ. ಕಲಾವಿದನು ಯಾವ ಪಾತ್ರವನ್ನು ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಈ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ದೇಹಭಾಷೆ, ಧ್ವನಿ ನಿಯಂತ್ರಣ, ಭಾವಾಭಿವ್ಯಕ್ತಿ, ಪಾತ್ರ ವಿಶ್ಲೇಷಣೆ ಹಾಗೂ ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯಗಳನ್ನು ಪ್ರಾಯೋಗಿಕವಾಗಿ ಕಲಿಸಲಾಗುತ್ತಿದೆ” ಎಂದರು.

    ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, “ನಾಟಕವೆಂದರೆ ಕೇವಲ ರಂಗಭೂಮಿಗೆ ಸೀಮಿತವಾದ ಕಲೆಯಲ್ಲ. ಬದುಕಿನಲ್ಲಿ ಪ್ರತಿಯೊಬ್ಬರೂ ತಮ್ಮ ಭಾವನೆ, ಆಲೋಚನೆ ಮತ್ತು ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ ಅಭಿವ್ಯಕ್ತಪಡಿಸುವುದನ್ನು ಕಲಿಯಬೇಕು. ಆ ನಿಟ್ಟಿನಲ್ಲಿ ಅಭಿನಯ ತರಬೇತಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಕಲೆಯನ್ನು ಕೇವಲ ನೋಡುವವರಾಗದೆ ಅದನ್ನು ಆಸ್ವಾದಿಸುವವರಾಗಬೇಕು. ರಂಗಭೂಮಿ ಭಾಷಾ ಪ್ರೌಢಿಮೆ, ಅಭಿವ್ಯಕ್ತಿ, ಆತ್ಮವಿಶ್ವಾಸ ಹಾಗೂ ಸಂವಹನ ಕೌಶಲ್ಯಗಳನ್ನು ವೃದ್ಧಿಸುತ್ತದೆ” ಎಂದರು.

    ಎರಡು ದಿನಗಳ ಈ ಕಾರ್ಯಾಗಾರದಲ್ಲಿ ರಂಗಭೂಮಿ, ಸಿನಿಮಾ, ಧಾರಾವಾಹಿ ಹಾಗೂ ಕಿರುಚಿತ್ರಗಳಲ್ಲಿ ಅಭಿನಯಿಸಲು ಅಗತ್ಯವಾದ ಮೂಲಭೂತ ಮತ್ತು ಉನ್ನತ ಮಟ್ಟದ ಅಭಿನಯ ತಂತ್ರಗಳನ್ನು ಪ್ರಾಯೋಗಿಕ ಚಟುವಟಿಕೆಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ದಿವ್ಯಾ ಭಂಡಾರಿ ಉಪಸ್ಥಿತರಿದ್ದರು.

    baikady roovari theatre workshop
    Share. Facebook Twitter Pinterest LinkedIn Tumblr WhatsApp Email
    Previous Articleಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಅರ್ಥಾಂಕುರ-23’
    Next Article ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.