ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳುಓದುಗ’ ಅಭಿಯಾನದ ಐದನೇ ಕೂಟ ದಿನಾಂಕ 30 ಜೂನ್ 2025 ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ವಿದ್ವಾಂಸ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಮಾತನಾಡಿ “ಭಾಷೆ ಮತ್ತು ಸಂಸ್ಕೃತಿ ಪರಸ್ಪರ ಪೂರಕವಾಗಿರುವಂತಹದ್ದು, ಕಾಲೇಜಿನ ವಿದ್ಯಾರ್ಥಿಗಳಿಗೆ ತುಳು ಭಾಷೆಯ ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ವಿದ್ಯಾರ್ಥಿಗಳಲ್ಲಿದೆ. ಹೊಸ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣವನ್ನು ತುಳುವಿನ ಪ್ರಸರಣಕ್ಕೆ ವೇದಿಕೆಯಾಗಿ ರೂಪಿಸುವಲ್ಲಿ ವಿದ್ಯಾರ್ಥಿಗಳು ಪ್ರಯತ್ನಶೀಲರಾಗಬೇಕು” ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಳು ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮೀ ರೈ ಮಾತನಾಡಿ “ತುಳು ಭಾಷೆ, ಸಾಹಿತ್ಯದ ಸಂಸ್ಕೃತಿ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಕಾರ್ಯಕ್ರಮ ಒಂದು ವಿಶಿಷ್ಟ ಪರಿಕಲ್ಪನೆಯ ಯಶಸ್ವಿ ಕಾರ್ಯಕ್ರಮ” ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ “ತುಳು ಭಾಷೆಯಲ್ಲಿ ಅಗಾಧವಾದ ಸಾಹಿತ್ಯ ಕೃತಿಗಳು ಪ್ರಕಟಗೊಂಡಿವೆ. ಈ ಸಾಹಿತ್ಯದ ಪರಿಚಯ ವಿದ್ಯಾರ್ಥಿಗಳಿಗೆ ಆಗಬೇಕು ಅನ್ನುವ ಆಶಯದೊಂದಿಗೆ ‘ಬಲೆ ತುಳು ಓದುಗ’ ಕಾರ್ಯಕ್ರಮ: ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.
ಅಲೋಶಿಯಸ್ ಪರಿಗಣಿತ ವಿ. ವಿ. ಯ ಕನ್ನಡ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ಇರುವೈಲು, ಹಿರಿಯ ಛಾಯಾಚಿತ್ರಗ್ರಾಹಕ ವಿಶ್ವನಾಥ್ ಸುವರ್ಣ, ಅಕಾಡೆಮಿ ಸದಸ್ಯ ಬಾಬು ಪಾಂಗಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸದಸ್ಯ ಸಂಚಾಲಕ ಸಂತೋಷ್ ಶೆಟ್ಟಿ ಹಿರಿಯಡ್ಕ ಸ್ವಾಗತಿಸಿ, ಅಕಾಡೆಮಿಯ ಸದಸ್ಯೆ ಅಕ್ಷಯ ಶೆಟ್ಟಿ ನಿರೂಪಿಸಿ, ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ವಂದಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂತ ಅಲೋಶಿಯಸ್ ಕಾಲೇಜಿನ 25 ವಿದ್ಯಾರ್ಥಿಗಳು ಅಕಾಡೆಮಿಯ ಗ್ರಂಥಾಲಯದ ಪುಸ್ತಕಗಳನ್ನು ಓದಿ ಸಂಜೆಯ ಸಮಾರೋಪ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
Subscribe to Updates
Get the latest creative news from FooBar about art, design and business.
ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕಾರ್ಯಕ್ರಮ
No Comments1 Min Read
Previous Articleಲೇಖನ – ಪರಿಷತ್ತಿನ ಇನ್ನೊಂದು ನಡಿಗೆ ಬಾಯಾರು ಕಡೆಗೆ