Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಡಾ. ರಮಾನಂದ ಬನಾರಿ ಮತ್ತು ಶ್ರೀಮತಿ ಶಾಂತಕುಮಾರಿ ದತ್ತಿಗೆ ಅಕ್ಷತಾ ರಾಜ್ ಪೆರ್ಲರ ‘ಅವಲಕ್ಕಿ ಪವಲಕ್ಕಿ’ ಕೃತಿ ಆಯ್ಕೆ
    Awards

    ಡಾ. ರಮಾನಂದ ಬನಾರಿ ಮತ್ತು ಶ್ರೀಮತಿ ಶಾಂತಕುಮಾರಿ ದತ್ತಿಗೆ ಅಕ್ಷತಾ ರಾಜ್ ಪೆರ್ಲರ ‘ಅವಲಕ್ಕಿ ಪವಲಕ್ಕಿ’ ಕೃತಿ ಆಯ್ಕೆ

    February 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪುರಸ್ಕಾರ ಪ್ರಕಟವಾಗಿದ್ದು, ಕಾಸರಗೋಡು ಜಿಲ್ಲೆಯ ಲೇಖಕರಿಗೆ ಮೀಸಲಾದ ಡಾ. ರಮಾನಂದ ಬನಾರಿ ಮತ್ತು ಶಾಂತಾಕುಮಾರಿ ದತ್ತಿನಿಧಿಗೆ ಲೇಖಕಿ ಅಕ್ಷತಾ ರಾಜ್ ಪೆರ್ಲರ ‘ಅವಲಕ್ಕಿ ಪವಲಕ್ಕಿ’ ಅಂಕಣ ಬರೆಹಗಳ ಸಂಕಲನ ಆಯ್ಕೆಯಾಗಿದೆ. ಕೃತಿಯ ಹಸ್ತಪ್ರತಿಯು ಮಂಗಳೂರಿನ ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ) ದ ಚಂದ್ರಭಾಗೀ ರೈ ದತ್ತಿನಿಧಿಗೂ ಭಾಜನವಾಗಿತ್ತು.

    ಅಕ್ಷತಾ ರಾಜ್ ಪೆರ್ಲರು ಕಾಸರಗೋಡಿನ ಪೆರ್ಲದವರಾಗಿದ್ದು ತುಳು, ಕನ್ನಡ, ಹವ್ಯಕ ಭಾಷೆಯ ಲೇಖಕಿಯಾಗಿದ್ದು ಕತೆ, ಕವಿತೆ, ನಾಟಕ, ಅಂಕಣ ಬರಹ, ಸಂಕಲನ ಸೇರಿದಂತೆ ಒಟ್ಟು 12 ಕೃತಿಗಳು ಪ್ರಕಟವಾಗಿದೆ. ಇವರ ಕೃತಿಗಳಿಗೆ ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ, ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ತುಳು ನಾಟಕ ಪ್ರಶಸ್ತಿ, ಕೊಡಗಿನ ಗೌರಮ್ಮ ದತ್ತಿನಿಧಿ, ಚಂದ್ರಭಾಗೀ ರೈ ದತ್ತಿನಿಧಿ, ನಿರುಪಮಾ ದತ್ತಿನಿಧಿ, ವಾಣಿ ಕತಾ ಪುರಸ್ಕಾರ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಹೀಗೆ ಹಲವು ಪುರಸ್ಕಾರಗಳು ಸಂದಿವೆ. ಮೈಸೂರು ದಸರಾ ಕವಿಗೋಷ್ಠಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿಯ ಕವಿಗೋಷ್ಠಿಗಳಿಗೆ ಆಯ್ಕೆಯಾಗಿರುತ್ತಾರೆ.

    ‘ಅವಲಕ್ಕಿ ಪವಲಕ್ಕಿ’ ಕಾಸರಗೋಡು ಜಿಲ್ಲೆಯಲ್ಲಿ ಪ್ರಕಟವಾಗುತ್ತಿರುವ ಕಾರವಲ್ ದಿನಪತ್ರಿಕೆಗೆ ಬರೆಯುತ್ತಿದ್ದ ಅಂಕಣ ಬರಹಗಳ ಒಟ್ಟು ಸಂಕಲನವಾಗಿದ್ದು ಮಂಗಳೂರಿನ ಸಾಹಿತ್ಯಾ ಪ್ರಕಾಶನ ಕೃತಿಯನ್ನು ಪ್ರಕಟಿಸಿದೆ. ದತ್ತಿನಿಧಿ ಪ್ರದಾನ ಸಮಾರಂಭದ ದಿನಾಂಕ ಶೀಘ್ರದಲ್ಲಿ ಪ್ರಕಟಿಸುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಷಿಯವರು ತಿಳಿಸಿದ್ದಾರೆ.

    award Literature
    Share. Facebook Twitter Pinterest LinkedIn Tumblr WhatsApp Email
    Previous Articleರಾಜ್ಯ ಮಟ್ಟದ ಅಂತರ ಕಾಲೇಜು ರಂಗ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ | ಫೆಬ್ರವರಿ 18
    Next Article ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ‘ಯುವ ಯುಗಳ ನೃತ್ಯ’ ಕಾರ್ಯಕ್ರಮ | ಫೆಬ್ರವರಿ 21
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಳ್ಳದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ವಿಚಾರಗೋಷ್ಠಿ

    February 26, 2026

    ಪುಸ್ತಕ ವಿಮರ್ಶೆ | ಪೌರಾಣಿಕ ಕಥೆಗಳಲ್ಲಿ ಆಸಕ್ತಿ ಮೂಡಿಸುವ ‘ಕಿರಿಯರ ಸಚಿತ್ರ ರಾಮಾಯಣ’

    February 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.