ಮಂಗಳೂರು : ಆಳ್ವಾಸ್ ಎಜುಕೇಷನ್ ಫೌಂಡೇಷನ್, ಆಳ್ವಾಸ್ ನುಡಿಸಿರಿ – ವಿರಾಸತ್ ಮಂಗಳೂರು ಘಟಕ ಇದರ ವತಿಯಿಂದ ಆಳ್ವಾಸ್ ವಿದ್ಯಾರ್ಥಿ ಕಲಾವಿದರಿಂದ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ವನ್ನು ದಿನಾಂಕ 21 ಮಾರ್ಚ್ 2026ರಂದು ಸಂಜೆ ಗಂಟೆ 6-15ಕ್ಕೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಯೋಗದೀಪಿಕ, ಶಾಸ್ತ್ರೀಯ ನೃತ್ಯ- ಅಷ್ಟಲಕ್ಷ್ಮೀ, ಬಡಗುತಿಟ್ಟು ಯಕ್ಷಗಾನ- ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯಾ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ನೃತ್ಯ-ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ – ಹಿರಣಾಕ್ಷ ವಧೆ, ಬೊಂಬೆ ವಿನೋದಾವಳಿಗಳು ಪ್ರಸ್ತುತಗೊಳ್ಳಲಿವೆ.

