Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಳೆ

    May 5, 2026

    ಪ್ರಖ್ಯಾತ ಬಾಲಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ನಾದ ಗಂಗಾ ಲಹರಿ’ | ಮೇ 05 

    May 4, 2026

    ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಸಂಸ್ಥಾಪನಾ ದಿನಾಚರಣೆ’ | ಮೇ 05

    May 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ
    Literature

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

    May 1, 2026Updated:May 5, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣವು ದಿನಾಂಕ 28 ಏಪ್ರಿಲ್ 2026ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಇವರು ಮಾತನಾಡಿ “ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ, ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ” ಎಂದು ಹೇಳಿದರು.

    ಮುದ್ರಣ ಮಾಧ್ಯಮ, ಟೆಲಿವಿಷನ್ ಮಾಧ್ಯಮ, ರೇಡಿಯೊ ಹಾಗೂ ಡಿಜಿಟಲ್ ಮಾಧ್ಯಮದ ಪ್ರಾಯೋಗಿಕ ತರಗತಿಗಳನ್ನು ತಜ್ಞರು ನಡೆಸಿಕೊಟ್ಟರು. ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜು, ಮೂಡುಬಿದಿರೆ ಮಹಾವೀರ ಕಾಲೇಜು, ಕಟೀಲು ಎಸ್‌ಡಿಟಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ವಿಚಾರಸಂಕಿರಣದಲ್ಲಿ ಪಾಲ್ಗೊಂಡರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ನಾರಾಯಣ ಶೆಟ್ಟಿ ಮಾತನಾಡಿ, “ಡಿಜಿಟಲ್ ವೇದಿಕೆಗೆ ವಿದ್ಯಾರ್ಥಿಗಳು ಅಪ್‌ಡೇಟ್ ಆಗಬೇಕಾಗಿರುವುದು ಇಂದಿನ ಅನಿವಾರ್ಯತೆ. ಅಂತಹ ಮೂಲಸೌಕರ್ಯ ಹೊಂದಿದ ಕಾಲೇಜಿನಲ್ಲಿ ಶಿಕ್ಷಣ ಪಡೆದೆ, ಉದ್ಯೋಗದ ಸಾಧ್ಯತೆಗಳು ಹೆಚ್ಚು” ಎಂದರು.

    ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾತನಾಡಿ ಸಮಕಾಲೀನ ಮಾಧ್ಯಮದ ಅವಶ್ಯಕತೆಗೆ ಅನುಗುಣವಾಗಿ ತರಬೇತಿ ಪಡೆಯಲು ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮ ಸಂಯೋಜಕ ಹರ್ಷವರ್ಧನ ಪಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ವಿಚಾರಸಂಕಿರಣ ರೂಪುರೇಷೆ ಹಾಗೂ ಅವಶ್ಯಕತೆ ಬಗ್ಗೆ ತಿಳಿಸಿದರು. ವಿಭಾಗದ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸ ಹೊಡೆಯಾಲ, ದೀಕ್ಷಿತಾ, ಅಕ್ಷಯ್ ಕುಮಾರ್, ಹನ್ನಾ ಫಾತಿಮಾ ತರಬೇತಿ ನೀಡಿದರು ವಿದ್ಯಾರ್ಥಿನಿಯರಾದ ರಕ್ಷಿತಾ ಚಪ್ಪರಿಕೆ ಮತ್ತು ಪ್ರೇರಣಾ ಕಾರ್ಯಕ್ರಮ ನಿರೂಪಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಇಂದ್ರಾಳಿ ಯಕ್ಷಗಾನ ಕೇಂದ್ರದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ
    Next Article ಉಡುಪಿ ತಾಲೂಕು 16ನೆಯ ಕನ್ನಡ ಸಾಹಿತ್ಯ ಸಮ್ಮೇಳನ ‘ಭೀಷ್ಮೋತ್ಸವ’ | ಮೇ 03
    roovari

    Add Comment Cancel Reply


    Related Posts

    ಶ್ರೀ ಮಹಾಲಿಂಗೇಶ್ವರ ದೇವಳದ ರಾಜಗೋಪುರದಲ್ಲಿ ತಿಂಗಳ ಸರಣಿ ತಾಳಮದ್ದಳೆ

    May 5, 2026

    ಪ್ರಖ್ಯಾತ ಬಾಲಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ನಾದ ಗಂಗಾ ಲಹರಿ’ | ಮೇ 05 

    May 4, 2026

    ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಸಂಸ್ಥಾಪನಾ ದಿನಾಚರಣೆ’ | ಮೇ 05

    May 4, 2026

    ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಅಭಿರಾಮ ಧಾಮದ ವಸಂತ ಶಿಬಿರ ಯಶಸ್ವಿ !

    May 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.