Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ
    Awards

    ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ

    December 12, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ವಿದ್ಯಾಗಿರಿ, ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 11 ಡಿಸೆಂಬರ್ 2024ನೇ  ಬುಧವಾರ ಸಂಜೆ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಿತು.
    ಪ್ರಶಸ್ತಿಯನ್ನು ಸ್ವೀಕರಿಸಿದ ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಮಾತನಾಡಿ “ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ. ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ. ಎಂ. ಮೋಹನ ಆಳ್ವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ. ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ. ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ ಹೋಗಬಾರದು.” ಎಂದು ಕಿವಿಮಾತು ಹೇಳಿದರು.
    ಅದಕ್ಕೂ ಮೊದಲು, ಕಲೆ-ಸಂಸ್ಕೃತಿಯ ಸಮ್ಮಿಲನದ ಸ್ವರೂಪದಂತೆ ಅಲಂಕೃತ ಗೊಂಡ ವಿರಾಸತ್‌ ಬಯಲು ರಂಗಮಂದಿರದ ಬೃಹತ್ ವೇದಿಕೆಗೆ ಪಂಡಿತ್ ವೆಂಕಟೇಶ್ ಕುಮಾರ್ ಅವರನ್ನು ಸಾಂಪ್ರದಾಯಿಕ ಗೌರವದ ಅಪ್ಸರೆಯರ ಜೊತೆಯಾದ ಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ  ಕರೆತರಲಾಯಿತು.
    ವೇದಿಕೆಯ ಗೌರವ ಪೀಠದಲ್ಲಿ ಕುಳ್ಳಿರಿಸಿ, ಆರತಿ ಬೆಳಗಿ ಹಾರ ಹಾಕಿ ಗೌರವಿಸಲಾಯಿತು. ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕ ಗೌರವ ನೀಡಲಾಯಿತು.
    ‘ಸ ಎಂದರೆ ಸಂಗೀತ ಸಾಗರ…  ಆರತಿಯು…’ ಹಾಡಿನ ಮೂಲಕ ಅಭಿವಂದನೆ ಸಲ್ಲಿಸಲಾಯಿತು. ಹೂ ಹಾರ, ಶಾಲು, ಹಣ್ಣು-ಹಂಪಲು, ಪ್ರಶಸ್ತಿ ಫಲಕ, ಸ್ಮರಣಿಕೆ ಸಹಿತ ಒಂದು ಲಕ್ಷ ರೂಪಾಯಿಯ ಪುರಸ್ಕಾರ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.
    ಆರಂಭದಲ್ಲಿ ದೀಪ ಪ್ರಜ್ವಲನ ಮಾಡಲಾಯಿತು. ಬೆಂಗಳೂರಿನ ಪ್ರಾರ್ಥನಾ ಶಿಕ್ಷಣ ಸಂಸ್ಥೆಯ ಕರ್ಣ ಬೆಳಗೆರೆ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ. ಜಿ. ಆರ್. ಸಿಂಧ್ಯಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಎಲ್. ಎಚ್. ಮಂಜುನಾಥ್,  ಪ್ರಮುಖರಾದ ನರೇಂದ್ರ ಎಲ್. ನಾಯಕ್, ಉದ್ಯಮಿ ಶ್ರೀಪತಿ ಭಟ್ ಉಪಸ್ಥಿತರಿದ್ದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
    ಸಭಾ ಕಾರ್ಯಕ್ರಮದ ಬಳಿಕ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಇವರಿಂದ ಗಾಯನ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡು ಕನ್ನಡ ಗ್ರಾಮದಲ್ಲಿ ‘ಸಮ್ಮೇಳನದ ವಿವಿಧ ಸ್ಪರ್ಧೆಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ’ | ದಶಂಬರ್ 15
    Next Article ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೊಂದನೇ ಉಪನ್ಯಾಸ
    roovari

    Add Comment Cancel Reply


    Related Posts

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026

    ಶಿಲ್ಪಕಲಾ ಅಕಾಡೆಮಿಯ ‘ಗೌರವ’ ಮತ್ತು ‘ಶಿಲ್ಪಶ್ರೀ’ ಪ್ರಶಸ್ತಿ ಪ್ರಕಟ

    February 21, 2026

    ಇನ್ನೊಂದು ಗಿನ್ನೆಸ್ ದಾಖಲೆಗೆ ಸಜ್ಜಾಗುತ್ತಿದೆ ಮಾಂಡ್ ಸೊಭಾಣ್

    February 21, 2026

    ಕೊಡವ ಸಾಹಿತ್ಯ ಅಕಾಡೆಮಿಯಿಂದ 15 ಸಾಧಕರಿಗೆ ಗೌರವ ಪ್ರಶಸ್ತಿ

    February 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.