Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ
    Cultural

    ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ

    December 12, 2024Updated:January 7, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ ಇದರ ಮೊದಲ ದಿನವಾದ ದಿನಾಂಕ 10 ಡಿಸೆಂಬರ್ 2024ರ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧಾಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ.
     ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತ ತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳೂ ಮಾತ್ರವಲ್ಲ, ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು.
    ಕಾರ್ಯಕ್ರಮದಲ್ಲಿ ಸಾನಿಧ್ಯವಿದ್ದ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಯೋಗಾನಂದ ಸ್ವಾಮೀಜಿ ಕೊಂಡೆವೂರು, ಮಾಣಿಲ ಮೋಹನದಾಸ ಸ್ವಾಮೀಜಿ ಹಾಗೂ ಕಟೀಲು ದೇವಳದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ ಅವರು ವೇದಿಕೆಯ ಬಲಭಾಗದಲ್ಲಿದ್ದ ರಥದಲ್ಲಿ ದೇವರ ಪ್ರತಿಷ್ಠಾಪನೆ ಮಾಡಿ ಭವ್ಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು.
    ನಿಗದಿಯಂತೆ ಕ್ಲಪ್ತ ಸಮಯಕ್ಕೆ ಆರಂಭಗೊಂಡ ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯು ಜಾತ್ರೆಯ ಮೆರುಗನ್ನು ಮೂಡಿಸಿತು. ಇಕ್ಕೆಲೆಗಳಲ್ಲಿ ರಥದ ಸ್ವರೂಪ, ಯಕ್ಷ ಕಿರೀಟ, ಮುಖವಾಡ, ನವಿಲು, ಗಣಪ, ಬೃಹತ್ ಕಾಲುದೀಪಗಳಿಂದ ಶೋಭಾಯಮಾನವಾದ ಸಭಾಂಗಣದಲ್ಲಿ ಸಂಜೆ 6.35ರಿಂದ ರಾತ್ರಿ 8.30ರ ವರೆಗೆ 150ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳಿಂದ 4000ಕ್ಕೂ ಮಿಕ್ಕಿದ ಕಲಾವಿದರನ್ನು ಒಳಗೊಂಡ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.
    ಶಂಖ, ದಾಸಯ್ಯ, ಕೊಂಬು, ರಣ ಕಹಳೆ, ಕಹಳೆ, ಕಾಲ ಭೈರವ, ಕೊರಗಡೋಲು, ಸ್ಯಾಕ್ಸೋಫೋನ್, ಬ್ಲಾಕ್ ಎನಿಮಲ್, ನಂದಿ ಧ್ವಜ, ಸುಗ್ಗಿ ಕುಣಿತ, ಶ್ರೀರಾಮ, ಪರಶುರಾಮ, ಘಟೋತ್ಕಚ, ಊರಿನ ಚೆಂಡೆ, ತಟ್ಟಿರಾಯ, ನಾದಸ್ವರ ತಂಡ, ಕೊಡೆಗಳು, ಪೂರ್ಣಕುಂಭ, ಲಂಗ ದಾವಣಿ ತರುಣಿಯರು, ಅಪ್ಸರೆಯರು, ಯಕ್ಷಗಾನ ವೇಷ, ಗೂಳಿ ಮತ್ತು ಕಟ್ಟಪ್ಪ, ಗೊರವರ ಕುಣಿತ, ಕಿಂದರಿ ಜೋಗಿ, ಸೋಮನ ಕುಣಿತ, ಆಂಜನೇಯ ಮತ್ತು ವಾನರ ಸೇನೆ, ಮಹಾಕಾಳೇಶ್ವರ, ಶಿವ, ಮರಗಾಲು, ತಮಟೆ ವಾದನ, ಆಂಜನೇಯ, ಮಹಿಳಾ ಪಟ ಕುಣಿತ, ಕಂಬಳ ಚಿತ್ರಣ, ಹುಲಿವೇಷ , ತೆಯ್ಯಮ್, ಚಿಟ್ಟೆ ಮೇಳ, ಶಿವ ಮತ್ತು ಅಘೋರಿಗಳು, ಕಿಂಗ್ ಕಾಂಗ್, ಶಿಲ್ಪಾ ಗೊಂಬೆ ಬಳಗ, ಆಳ್ವಾಸ್ ಗೊಂಬೆ ಬಳಗ, ಚೈನೀಸ್ ಡ್ರ‍್ಯಾಗನ್, ಚೈನಾ ಲಯನ್, ಬ್ಯಾಂಡ್ ಸೆಟ್, ಆಳ್ವಾಸ್ ಕಾರ‍್ಟೂನ್ಸ್, ಸ್ನೇಹ ಗೊಂಬೆ ಬಳಗ, ಚಿಲಿಪಿಲಿ ಬೊಂಬೆ, ವಂಶಿಕಾ ಗೊಂಬೆ ಬಳಗ, ಮೂಡುಬಿದಿರೆ ಗೊಂಬೆಗಳು, ಶೆಟ್ಟಿ ಬೊಂಬೆಗಳು, ಶಾರದಾ ಆರ್ಟ್ಸ್ ಗೊಂಬೆ, ಶಾರದಾ ಆರ್ಟ್ಸ್ ಚೆಂಡೆ, ಟಾಲ್ ಮ್ಯಾನ್, ಹಿಮ ಕರಡಿ ಗೊಂಬೆ, ಚಿರತೆ ಗೊಂಬೆ, ಏರ್ ಬಲೂನ್ ಬೊಂಬೆ, ಕರಡಿ ಗೊಂಬೆ, ಗಜಹುಲಿ, ಕಾಟಿ, ಗಣಪತಿ, ನರಸಿಂಹ, ಹುಲಿ, ವಾರ್ ಕ್ರಾಫ್ಟ್,  ಚಿಟ್ಟೆ, ಸಿಂಗಳೀಕ, ಗಣಪತಿ, ಜೋಡಿ ಸಿಂಹ, ಜೋಡಿ ಜಿಂಕೆ, ಚಿತ್ರದುರ್ಗ ಬ್ಯಾಂಡ್, ಪೂಜಾಕುಣಿತ, ಬೇಡರ ಕುಣಿತ, ಮಹಿಳೆಯರ ಕೋಲಾಟ, ಹಗಲುವೇಷ, ಕೋಳಿಗಳು, ನಾಸಿಕ್ ಬ್ಯಾಂಡ್, ಮೀನುಗಳು, ಕಾರ್ಟೂನ್ಸ್, ಪುರವಂತಿಕೆ, ವೀರಭದ್ರನ ಕುಣಿತ, ಜಗ್ಗಳಿಕೆ ಮೇಳ, ಪಟದ ಕುಣಿತ, ಕೊಂಚಾಡಿ ಚೆಂಡೆ, ಶ್ರೀಲಂಕಾ ಕಲಾವಿದರು, ಶ್ರೀಲಂಕಾದ ಮುಖವಾಡ, ವೀರಗಾಸೆ, ಕರಡಿ ಮಜಲು, ಕಂಸಾಳೆ, ಪುರುಷರ ನಗಾರಿ, ಮಹಿಳೆಯರ ನಗಾರಿ, ದಪ್ಪು, ತಿರುವಾದಿರ, ಡೊಳ್ಳು ಕುಣಿತ, ಪಂಚವಾದ್ಯ, ಎಂಜೆಲ್ಸ್, ಸಂತಾಕ್ಲಾಸ್, ಸಿಗಾರಿ ಮೇಳ, ಅರ್ಧ ನಾರೀಶ್ವರ, ಪೂ ಕಾವಡಿ, ಕೇರಳದ ಚಿಟ್ಟೆ, ಕಥಕ್ಕಳಿ ವೇಷ, ಕೇರಳದ ಅರೆನಾ ವೇಷ, ಕೇರಳದ ಕಮಲ ವೇಷ, ತಮಿಳುನಾಡಿನ ನೃತ್ಯ, ಕೇರಳದ ದೇವರ ವೇಷ, ಕೇರಳದ ಡಿಜಿಟಲ್ ವೇಷ, ತೆಯ್ಯಮ್, ಉಡುಪಿ ಬ್ಲೂ ಬ್ರಾಸ್ ಬ್ಯಾಂಡ್, ಕಾಮಿಡಿಯನ್ಸ್, ಗರುಡ , ಕ್ಯಾರಲ್, ಡೊಳ್ಳು ಕುಣಿತವು ಸಾಗಿಬಂತು. ಅದರೊಂದಿಗೆ ಎನ್. ಸಿ. ಸಿ-ನೇವಲ್, ಎನ್. ಸಿ. ಸಿ-ಆರ್ಮಿ, ಎನ್. ಸಿ. ಸಿ-ಏರ್ ಫೋರ್ಸ್, ಆಳ್ವಾಸ್ ಬ್ಯಾಂಡ್ ಸೆಟ್, ಸ್ಕೌಟ್ಸ್ ಮತ್ತು ಗೈಡ್ಸ್, ಪಥಸಂಚಲನದಲ್ಲಿ  ಸಾಥ್ ನೀಡಿದರು.
    ಇಂದ್ರಲೋಕವೇ ಧರೆಗಿಳಿದು ಬಂದಂತೆ, ಪುಟಾಣಿಗಳಿಂದ ಹಿಡಿದು ಹಿರಿಯರೆಲ್ಲ ಸೇರಿದ್ದ ಸಭಾಂಗಣವಿಡೀ ನಂದನವನದಂತೆ ಕಂಡು ಬಂತು. ಆ ಬಳಿಕ ವೇದಘೋಷಗಳು, ಭಜನೆಗಳು, ಪುಷ್ಪಪಲ್ಲಕ್ಕಿಗಳು, ಮಂಗಳವಾದ್ಯಗಳೊಂದಿಗೆ ಹುಲಿ, ಸಣ್ಣ ರಥದಲ್ಲಿ ವಿಘ್ನನಿವಾರಕ ಗಣಪತಿ ಹಾಗೂ ಪಲ್ಲಕ್ಕಿಯಲ್ಲಿ ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ಧ್ಯೋತಕವಾದ ಮಹಾಲಕ್ಷ್ಮಿ ಹಾಗೂ ವಿದ್ಯಾಮಾತೆ ಮಹಾ ಸರಸ್ವತಿ ಮೂರ್ತಿಗಳನ್ನು ಕರೆ ತರಲಾಯಿತು. ರಥದಲ್ಲಿ ಪೀಠಸ್ಥರಾದ ಮರ್ಯಾದ ಪುರುಷೋತ್ತಮ ಶ್ರೀರಾಮ ಹಾಗೂ ಜೀವನೋಲ್ಲಾಸದ ಪ್ರತೀಕ ಶ್ರೀ ಕೃಷ್ಣಾದಿ ಆರೂಢ ದೇವರ ಮೆರವಣಿಗೆಯೊಂದಿಗೆ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ರಥ ಸಂಚಲನ ಶ್ರದ್ಧೆ ಭಕ್ತಿಯಿಂದ ನಡೆಯಿತು.
    ರಥಯಾತ್ರೆಯ ಮುಂಭಾಗದಲ್ಲಿ ಮೈಸೂರು, ಪಂಡರಾಪುರ ಹಾಗೂ ಮಂಗಳೂರು ಹರೇಕೃಷ್ಣ ಪಂಥದ ಭಜನಾ ತಂಡಗಳು ಭಜನೆ ಹಾಡಿನ ಮೂಲಕ  ಭಕ್ತಿ ಪ್ರಭಾವಳಿ ಮೂಡಿಸಿದವು.  ಅರ್ಚಕರು ಮಂತ್ರ ಘೋಷ ಮಾಡಿದರು. ಕೊಂಬು, ಕಹಳೆ ನಾದ ಮೊಳಗಿದವು. ಛತ್ರಿ, ಚಾಮರಗಳೊಂದಿಗೆ ದೊಂದಿಗಳು ಬೆಳಗಿದವು. ಮಂಗಳ ವಾದ್ಯ ನಿನಾದ ಮೂಡಿಸಿತು.
    ಹರಿದ್ವಾರದಿಂದ ಬಂದ ವಿಪುಲ್ ವರ್ಮಾ ನೇತೃತ್ವದ ಗಂಗಾರತಿ ತಂಡವು ಮಂತ್ರ ಘೋಷಗಳೊಂದಿಗೆ ಆರತಿ ಬೆಳಗಿದಾಗ ಶ್ರದ್ಧೆ -ಭಕ್ತಿಯ ಪ್ರಜ್ವಲನವಾಯಿತು. ಭಕ್ತರು ಜಯಕಾರ ಹಾಕಿದರು. ಭಕ್ತರು ಭಾವಪರವಶರಾದರು.  ಆಗಸದಲಿ ಮೂಡಿದ ಪಟಾಕಿಯ ಸಿಂಚನ- ಸಿಡಿಮದ್ದು ಜಾತ್ರೆಯನ್ನು ನೆನಪಿಸಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪಂಡಿತ್ ವಿಶ್ವ ಮೋಹನ್ ಭಟ್ ಇವರಿಗೆ ‘ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಶ್ರೇಷ್ಠ ಪ್ರಶಸ್ತಿ’
    Next Article ಕಾಸರಗೋಡು ಕನ್ನಡ ಗ್ರಾಮದಲ್ಲಿ ‘ಸಮ್ಮೇಳನದ ವಿವಿಧ ಸ್ಪರ್ಧೆಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ’ | ದಶಂಬರ್ 15
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications