ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ ಲೋಕಾರ್ಪಣಾ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಅಮೃತಹಸ್ತದಿಂದ ಕೃತಿ ಲೋಕಾರ್ಪಣೆಗೊಳಿಸಿದರು. ಕೃತಿಕರ್ತ ಡಾ. ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ. ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು, ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಕೃತಿಗೆ ಮುನ್ನುಡಿ ಬರೆದಿದ್ದಾರೆ. ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿದ್ದು, ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಈ ಕೃತಿಯನ್ನು ಪ್ರಕಟಿಸಿದೆ. ಕೃತಿಯ ಪ್ರತಿಗಳಿಗಾಗಿ ಲೇಖಕರನ್ನು 9448951856 ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.