ಧರ್ಮಸ್ಥಳ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮನ ಕತೆಗಳು’ ಕಥಾಸಂಕಲನದ ಲೋಕರ್ಪಣೆಯನ್ನು ದಿನಾಂಕ 10-04-2024 ರಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಅಮೃತಹಸ್ತದಿಂದ ನೆರವೇರಿಸಿದರು.
ಎಸ್.ಡಿ.ಯಂ. ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ ಅವರು ಉಪನ್ಯಾಸಕರು ತಮ್ಮ ಶೈಕ್ಷಣಿಕ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡು ಬಿಡುವಿನ ಸಮಯವನ್ನು ಔಚಿತ್ಯಪೂರ್ಣವಾಗಿ ಬಳಸಿ ಸದಭಿರುಚಿಯ ಹವ್ಯಾಸಗಳನ್ನು ಬೆಳೆಸಿಕೊಂಡಿರುವುದನ್ನು ಗುರುತಿಸಿ ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಕಾಲೇಜಿನ ಪ್ರಾಚಾರ್ಯರಾದ ಡಾ.ಅಶೋಕ್ ಕುಮಾರ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥೆ ವೀಣಾ ಭಟ್, ಸಹಪ್ರಾಧ್ಯಾಪಕರಾದ ಡಾ.ಅಂತೀಶ್ ಆರ್. ಹಾಗೂ ಎಲೆಕ್ಟ್ರಿಕಲ್ ವಿಭಾಗದ ಉಪಪ್ರಾಧ್ಯಾಪಕ ಡಾ. ಸತ್ಯನಾರಾಯಣ ಪಿ. ಉಪಸ್ಥಿತರಿದ್ದರು.
ಪುಸ್ತಕದ ಪ್ರತಿಗಾಗಿ ಅಂಬಾರಿ ಪ್ರಕಾಶನ, ಕುಮಾರವ್ಯಾಸ ರಸ್ತೆ, ಕುವೆಂಪು ನಗರ ಮೈಸೂರು ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ – 91824 4287558

