ಉಡುಪಿ : ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ ಮಂಗಳೂರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಉಡುಪಿ ಇದರ ವತಿಯಿಂದ ಜೀವಮಾನ ಸಾಧನೆಗಾಗಿ ನಾಡಿನ ಹಿರಿಯ ಸಾಧಕರಿಗೆ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 25 ಅಕ್ಟೋಬರ್ 2026ರಂದು ಸಂಜೆ 4-30 ಗಂಟೆಗೆ ಉಡುಪಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಮುರಲಿ ಕಡೆಕಾರು ಇವರು ಈ ಸಮಾರಂಭಕ್ಕೆ ಚಾಲನೆ ನೀಡಲಿದ್ದು, ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವಿಶ್ವನಾಥ ಶೆಣೈ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ. ಎ.ವಿ. ನಾವಡ ಇವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದು, ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಎಂ.ಎಲ್. ಸಾಮಗ ಇವರು ಅಭಿನಂದನ ನುಡಿಗಳನ್ನಾಡಲಿದ್ದಾರೆ. ಪ್ರಾಧ್ಯಾಪಕರಾದ ಡಾ. ಅಜಕ್ಕಳ ಗಿರೀಶ ಭಟ್ಟ ಇವರಿಗೆ ಎನ್.ಐ.ಟಿ.ಕೆ. ಇದರ ಮಾಜಿ ನಿರ್ದೇಶಕರಾದ ಡಾ. ಎಚ್. ಸುಧಾಕರ ನಾಯಕ್ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

