Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ
    Book Release

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭವನದ ಸಿರಿ ಚಾವಡಿಯಲ್ಲಿ ಆಯೋಜಿಸಿದ ತುಳು ಭಾಷೆಗೆ ಅನುವಾದಿಸಲಾದ ಸಂತ ಶ್ರೇಷ್ಠ ಕನಕದಾಸರ ಸಮಗ್ರ ಸಾಹಿತ್ಯ ಕೃತಿಗಳ ಸಂವಾದ ಹಾಗೂ ಕಾವ್ಯ ವಾಚನ ಕಾರ್ಯಕ್ರಮವು ದಿನಾಂಕ 13 ಜೂನ್ 2026ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ವಿದ್ವಾಂಸ ಪ್ರೊ. ಎ.ವಿ. ನಾವಡ ಇವರು ಮಾತನಾಡಿ “ಯಾವುದೇ ಭಾಷೆ ತನ್ನ ಸಹಜ ಚೌಕಟ್ಟನ್ನು ಮೀರಿ ಬೆಳೆಯಬೇಕಾದರೆ ಸಾಹಿತ್ಯದ ಅನುವಾದ ತುಂಬಾ ಮುಖ್ಯ. ಇತರ ಭಾಷೆಯ ಸಾಹಿತ್ಯ ತುಳು ಭಾಷೆಗೆ ಬರುವಂತಹದ್ದು, ತುಳುವಿನ ಪಾಡ್ಡನ ಸೇರಿದಂತೆ ತುಳು ಸಾಹಿತ್ಯ ಇತರ ಭಾಷೆಗಳಿಗೆ ಅನುವಾದಗೊಳ್ಳುವಂತಹ ಕೆಲಸಗಳು ನಡೆಯಬೇಕಾಗಿದೆ” ಎಂದು ಹೇಳಿದರು.

    ಕರ್ನಾಟಕ ಸರ್ಕಾರದ ಸಂತ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಅನುವಾದಿಸಿದ ಕನಕದಾಸರ ಕಾವ್ಯ ‘ಮೋಹನ ತರಂಗಿಣಿ’, ‘ಹರಿಭಕ್ತಿ ಸಾರ’, ‘ರಾಮಧಾನ್ಯ ಚರಿತೆ’, ‘ನಳಚರಿತ್ರೆ’, ‘ಕೀರ್ತನೆ ಮತ್ತು ಮುಂಡಿಗೆಗಳು’ ಇವುಗಳನ್ನು ಪ್ರೊ. ಎ.ವಿ.ನಾವಡ ಇವರ ಸಂಪಾದಕತ್ವದಲ್ಲಿ ವಿವಿಧ ಸಾಹಿತಿಗಳ ಪಾಲ್ಗೊಳ್ಳುವಿಕೆಯಲ್ಲಿ ತುಳುವಿಗೆ ಅನುವಾದಿಸಲಾಗಿದ್ದು, ಈ ಕೃತಿಗಳ ಬಗ್ಗೆ ಒಂದು ಸಮಗ್ರ ಅವಲೋಕನ ನಡೆಸಲಾಯಿತು.

    ಕೃತಿಗಳ ಅವಲೋಕನ ನಡೆಸಿದ ತುಳು – ಕನ್ನಡ ವಿದ್ವಾಂಸ ಪ್ರೊ. ಬಿ. ಶಿವರಾಮ ಶೆಟ್ಟಿ ಮಾತನಾಡಿ, “ಭಾಷಾಂತರ ಕೇವಲ ಪದಗಳ ವರ್ಗಾವಣೆ ಅಲ್ಲ; ಅದು ಒಂದು ಸಂಸ್ಕೃತಿ, ಚಿಂತನೆ ಮತ್ತು ಮೌಲ್ಯಗಳನ್ನು ಮತ್ತೊಂದು ಭಾಷೆಯ ಓದುಗರಿಗೆ ತಲುಪಿಸುವ ಸೇತುವೆಯಾಗಿದೆ. ಕನಕದಾಸರ ಅಧ್ಯಯನವು ಕೇವಲ ಸಾಹಿತ್ಯಕ ದೃಷ್ಟಿಯಿಂದ ಮಾತ್ರವಲ್ಲ, ಸಾಮಾಜಿಕ ಮತ್ತು ಸಾಂಸ್ಕೃ ತಿಕ ನೆಲೆಗಟ್ಟಿನಲ್ಲಿಯೂ ನಡೆಯಬೇಕು” ಎಂದರು.

    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ, ಉಪನ್ಯಾಸಕರಾದ ರಘು ಇಡ್ಕಿದು, ಡಾ. ಸುಧಾರಾಣಿ ಕೃತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೃತಿ ಅನುವಾದಕರಾದ ಆತ್ರಾಡಿ ಆಮೃತಾ ಶೆಟ್ಟಿ, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ಪ್ರೊ. ಟಿ.ಎ.ಎನ್. ಖಂಡಿಗೆ, ಮುದ್ದು ಮೂಡುಬೆಳ್ಳೆ, ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಡಾ. ವಸಂತ ಕುಮಾರ್ ಪೆರ್ಲ ಇವರಿಗೆ ಅಧ್ಯಕ್ಷರು ಪುಸ್ತಕಗಳನ್ನು ನೀಡಿ ಗೌರವಿಸಿದರು.

    ಇದೇ ಸಂದರ್ಭದಲ್ಲಿ ಅಕಾಡೆಮಿಯ ‘ನಮ್ಮ ತುಳುವೆರ್’ ಮಾಲಿಕೆಯಲ್ಲಿ ಪ್ರಕಟಿಸಲಾದ ರಘು ಇಡ್ಕಿದು ಇವರು ರಚಿಸಿದ ‘ತುಳು ಕನ್ನಡೊದ ಮಾಮಲ್ಲ ಸಂಶೋಧಕೆರ್ ಪ್ರೊ. ಎ.ವಿ. ನಾವಡೆರ್’ ಕೃತಿಯನ್ನು ಪ್ರೊ. ಶಿವರಾಮ ಶೆಟ್ಟಿ ಇವರು ಬಿಡುಗಡೆ ಮಾಡಿದರು. ಜಾನಪದ ಕಲಾವಿದ ನಾದಾ ಮಣಿನಾಲ್ಕೂರು ಇವರಿಂದ ಕನಕದಾಸರ ತುಳು ಕೀರ್ತನೆ ಹಾಗೂ ಅನುವಾದಿತ ಕಾವ್ಯ ಭಾಗಗಳ ಗಾಯನ ಕಾರ್ಯಕ್ರಮ ನಡೆಯಿತು. ಅಕಾಡೆಮಿ ಸದಸ್ಯರಾದ ಕುಂಬ್ರ ದುರ್ಗಾಪ್ರಸಾದ್‌ ರೈ ಉಪಸ್ಥಿತರಿದ್ದರು. ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿ, ಅಕಾಡೆಮಿ ಸದಸ್ಯೆ ಅಕ್ಷಯ ಆರ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    baikady Book release Literature Music roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 50 ಸರಣಿ ಸಂಗೀತ ಕಾರ್ಯಕ್ರಮ | ಜೂನ್ 21
    Next Article ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.