Subscribe to Updates

    Get the latest creative news from FooBar about art, design and business.

    What's Hot

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ
    Awards

    ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

    October 9, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

    ಶ್ರೀಮತಿ ಸರಸ್ವತಿ ಬಲ್ಲಾಳ್ ಮತ್ತು ಡಾ. ಸಿ.ಕೆ. ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸ್ಥಾಪಕರಾದ ಇತಿಹಾಸ ಪ್ರಾಧ್ಯಾಪಕ ಪ್ರೊ. ತುಕರಾಂ ಪೂಜಾರಿಯವರಿಗೆ,

    ಹಿರಿಯ ಭಾಷಾತಜ್ಞ ಡಾ. ಯು.ಪಿ. ಉಪಾಧ್ಯಾಯ ಅವರ ಹೆಸರಿನ ‘ಮಹೋಪಾಧ್ಯಾಯ ಪ್ರಶಸ್ತಿ’ಯನ್ನು ಕರಾವಳಿ ಭಾಗದ ಕನ್ನಡ ಸಾಹಿತ್ಯ ವಲಯದ ಪ್ರಮುಖ ಸಂಪನ್ಮೂಲ ವ್ಯಕ್ತಿ ಆಗಿರುವ ಪ್ರೊ. ವರದರಾಜ ಚಂದ್ರಗಿರಿ ಇವರಿಗೆ,

    ಧಾರವಾಡದ ಹಿರಿಯ ಸಾಹಿತಿ ಡಾ. ಜಿ.ಎಂ. ಹೆಗಡೆ ಅವರ ದತ್ತಿನಿಧಿಯ ‘ಪ್ರಾಧ್ಯಾಪಕ ಸಂಶೋಧಕ ಪ್ರಶಸ್ತಿ’ಯನ್ನು ಕಾಸರಗೋಡು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರೊ. ಯು. ಮಹೇಶ್ವರಿಯವರಿಗೆ

    ಮತ್ತು ಹಿರಿಯ ರಂಗಕರ್ಮಿ ಶ್ರೀಪತಿ ಮಂಜನಬೈಲ್ ಇವರು ಸ್ಥಾಪಿಸಿದ ದತ್ತಿನಿಧಿಯಿಂದ ಕೊಡಲಾಗುವ ‘ಮಂಜನಬೈಲ್ ರಂಗಸನ್ಮಾನ್’ ಪ್ರಶಸ್ತಿಯನ್ನು ಕಲಾವಿದ, ನಟ, ನಿರ್ದೇಶಕರಾಗಿ ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಬೆಳಗಾವಿಯ ಡಾ. ಅರವಿಂದ ಕುಲಕರ್ಣಿ ಇವರಿಗೆ ನೀಡಲಾಗುವುದೆಂದು ನಿರ್ಣಯಿಸಲಾಗಿದೆ. ಪ್ರಶಸ್ತಿಯು ತಲಾ ರೂ.10,000/- ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನಗಳನ್ನು ಒಳಗೊಂಡಿದ್ದು ಇದೇ ನವಂಬರ್ 1ರಂದು ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿಯವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಉತ್ಸಾಹೀ ಯಕ್ಷಪ್ರತಿಭೆ’ ಪ್ರೀತಿ ವಿನಾಯಕ ಹೆಗಡೆ ಜಾಲೀಮನೆ
    Next Article ಶಕ್ತಿನಗರದ ಕಲಾಂಗಣದಲ್ಲಿ ಸಂಗೀತ ಸುಧೆ ಹರಿಸಿದ ‘ಸಂಗೀತ ಸಂಧಿ’
    roovari

    Add Comment Cancel Reply


    Related Posts

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    ಗಣೇಶ ಪ್ರಸಾದಜೀಯವರ 9ನೆಯ ಕೃತಿ ‘ಕಾಂತೆ ಕವಿತೆ’ ಲೋಕಾರ್ಪಣೆ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.