ಧಾರವಾಡ : ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ 2026ನೇ ಸಾಲಿನ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಧಾರವಾಡದ ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹಾಗೂ ಹಾವೇರಿಯ ಹಿರಿಯ ಕವಿ ಸತೀಶ ಕುಲಕರ್ಣಿ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಪ್ರಶಸ್ತಿ ಪುರಸ್ಕೃತರ ಮಾಹಿತಿ ಪ್ರಕಟಿಸಿದರು.
‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಯು ರೂ. ಒಂದು ಲಕ್ಷ ನಗದು ಹಾಗೂ ಸ್ಮರಣಿಕೆ ಹೊಂದಿದೆ. ಆದರೆ ಈ ಸಲ ಇಬ್ಬರು ಸಾಧಕರಿಗೆ ಪ್ರಶಸ್ತಿ ಹಂಚಿರುವ ಹಿನ್ನೆಲೆಯಲ್ಲಿ ತಲಾ ರೂ.50 ಸಾವಿರ ನೀಡಲಾಗುವುದು. ದಿನಾಂಕ 31 ಜನವರಿ 2026ರಂದು ಸಂಜೆ ಗಂಟೆ 5-00ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
