ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಇವರು ದಿನಾಂಕ 08 ನವೆಂಬರ್ 2025ರಂದು ಸುಳ್ಯದಲ್ಲಿ ಘೋಷಿಸಿದರು. 2024ನೇ ಸಾಲಿನ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕವನ್ನು ಹೊಂದಿದ್ದು, ವಿಶೇಷವಾಗಿ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ‘ಅಪ್ಪ’ ಎಂಬ ಅರೆಭಾಷೆ ನಾಟಕ ಪ್ರದರ್ಶನಗೊಳ್ಳಲಿದೆ.

ಪ್ರಶಸ್ತಿ ಆಯ್ಕೆಯು ಆಯ್ಕೆ ಸಮಿತಿ ಆಯ್ಕೆ ಬಯಸಿ ಅರ್ಜಿ ಸಲ್ಲಿಸಿದವರ ಅರೆಭಾಷೆ ಕೊಡುಗೆಯನ್ನು ಗಮನಿಸಿ ರಾಷ್ಟ್ರ ಶಿಕ್ಷಕ ಪ್ರಶಸ್ತಿ ವಿಜೇತ ಹಾಗೂ ಅರೆಭಾಷೆ ನಿಘಂಟು ರಚನೆಕಾರ ಕೆ.ಆರ್. ಗಂಗಾಧರ, ಕೊಡಗು ದಕ್ಷಿಣ ಕನ್ನಡ ಒಕ್ಕಲಿಗರ ಯಾನೆ ಗೌಡ ಸಮಾಜ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕೆ.ಎಸ್.ಎಫ್.ಸಿ. ಸೇವೆ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯಾದ್ಯಂತ ಅರೆಭಾಷಿಕರನ್ನು ಸಂಘಟಿಸುವಲ್ಲಿ ಶ್ರಮ ವಹಿಸಿದ ದಂಬೆಕೋಡಿ ಸುಬ್ರಾಯ ಆನಂದ ಹಾಗೂ ಗ್ರಾಮೀಣ ಪತ್ರಿಕೋದ್ಯಮ ನಡೆಸುತ್ತಿರುವ ಡಾ. ಯು.ಪಿ. ಶಿವಾನಂದ ಈ ಮೂವರಿಗೆ ಈ ಬಾರಿಯ ಪ್ರಶಸ್ತಿಯನ್ನು ನೀಡಲಾಗುವುದು ಎಂದು ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಡಾ. ಎನ್.ಎ. ಜ್ಞಾನೇಶ್, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು ಮತ್ತಿತರರು ಉಪಸ್ಥಿತರಿದ್ದರು.
