ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಕಾಲೇಜು ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಪಡೀಲು ಶಂಕರ ಭಟ್ಟ ಸಂಸ್ಮರಣೆಯ ಪ್ರಯುಕ್ತ ‘ಡಾ. ಕೆ. ಶಿವರಾಮ ಕಾರಂತರ ಬೆಟ್ಟದ ಜೀವ ಕಾದಂಬರಿಯಲ್ಲಿ ಪ್ರಕೃತಿಯ ವರ್ಣನೆ’ ವಿಷಯದ ಮೇಲೆ ಏರ್ಪಡಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ದಿನಾಂಕ 02 ಮೇ 2026 ಶನಿವಾರದಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಪ್ರಬಂಧ ಸ್ಪರ್ಧೆಯಲ್ಲಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ಧನ್ವಿತಾ ಕಾರಂತ ಪ್ರಥಮ, ಉತ್ತರ ಕನ್ನಡ ಕುಮಟಾದ ಡಾ. ಎ.ವಿ. ಬಾಳಿಗ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಇಲ್ಲಿಯ ವಿನಾಯಕ ರಮೇಶ ನಾಯ್ಕ ದ್ವಿತೀಯ ಹಾಗೂ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ಸಾಕ್ಷಿ ಕೆ. ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಪ್ರಮಾಣ ಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಗುವುದು.
