ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 1 ನವಂಬರ್ 2024ರಂ ಶುಕ್ರವಾರದಂದು ಸಂಜೆ ಘಂಟೆ 5.00 ರಿಂದ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ “ಕೃಷ್ಣಂ ವಂದೇ ಜಗದ್ಗುರು” ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ.
ಸಭಾ ಕಾರ್ಯಕ್ರಮ ಸಂಜೆ ಘಂಟೆ 7.00 ರಿಂದ ನಡೆಯಲಿದ್ದು, ಕಾರ್ಯಕ್ರಮವನ್ನು ಮುಂಬೈ ಇಲ್ಲಿನ ವಿ. ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಶಾರದಾ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾದ ವೈ ರಾಘವೇಂದ್ರ ರಾವ್, ಶ್ರೀ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷರಾದ ಗಿರೀಶ್ ಎಂ. ಶೆಟ್ಟಿ ಕಟೀಲು, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅಶೋಕ ಶೆಟ್ಟಿ ಸುರತ್ಕಲ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ಇದರ ಕೋಶಾಧಿಕಾರಿಯಾದ ನರಸಿಂಹ ಸುವರ್ಣ, ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಟ್ರಸ್ಟಿಯಾದ ಧನಂಜಯ ಶೆಟ್ಟಿ ಕಟ್ಲ, ಎಚ್. ಪಿ. ಸಿ. ಎಲ್. ಸಂಸ್ಥೆಯ ಮಾನವ ಸಂಪನ್ಮೂಲ ಸಹಾಯಕರಾದ ವಾಸು ನಾಯ್ಕ್ ಎಸ್, ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸುಧಾಕರ ಪೂಂಜ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ. ಪರೀಕ್ಷೆಯಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
“ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ | ನವಂಬರ್ 1
Previous Articleರಾಜ್ಯ ಮಟ್ಟದ ಕವಿ ಸಾಹಿತಿಗಳ ಪರಿಚಯ ಮಾಲಿಕೆ | ಡಾ. ಸುರೇಶ್ ನೆಗಳಗುಳಿ
Next Article ಮಂಗಳೂರು ವಿ. ವಿ. ಯಲ್ಲಿ ಕ. ಸಾ. ಪ. ದತ್ತಿನಿಧಿ ಉಪನ್ಯಾಸ
Related Posts
Comments are closed.