Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -2024 ಮತ್ತು ಪುಸ್ತಕ ಬಹುಮಾನ -2024 ಅರ್ಜಿ ಆಹ್ವಾನ
    Awards

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -2024 ಮತ್ತು ಪುಸ್ತಕ ಬಹುಮಾನ -2024 ಅರ್ಜಿ ಆಹ್ವಾನ

    December 3, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಪುಸ್ತಕ ಬಹುಮಾನ – 2024 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2024ರ ಕ್ಯಾಲೆಂಡರ್ ವರ್ಷದಲ್ಲಿ (01 ಜನವರಿ 2024ರಿಂದ 31 ಡಿಸೆಂಬರ್ 2024) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ/ ವಿಮರ್ಶೆ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ರೂ.25,000/- ಗೌರವಧನ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು ಒಳಗೊಂಡಿದೆ.

    ಗೌರವ ಪ್ರಶಸ್ತಿ – 2024 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನಲ್ಲಿ 1. ಕೊಂಕಣಿ ಸಾಹಿತ್ಯ, 2. ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) 3. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣ ಪತ್ರ, ಫಲತಾಂಬೂಲವನ್ನು ಒಳಗೊಂಡಿದೆ. ಸಾಧಕರು ನೇರವಾಗಿ ಅಥವಾ ಸಂಘ ಸಂಸ್ಥೆಗಳು, ಸಾರ್ವಜನಿಕರೂ ಸಹ ಸಾಧಕರ ಹೆಸರು ಮತ್ತು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

    ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2024’ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ‘ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ -2024’ ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕಾ ಕಟ್ಟಡ, ಲಾಲ್ ಭಾಗ್, ಮಂಗಳೂರು -575003 ಇವರಿಗೆ ದಿನಾಂಕ 31-12-2024ರೊಳಗಾಗಿ ಕಳುಹಿಸಿಕೊಡುವಂತೆ ಕೋರಲಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    Next Article ಬೆಂಗಳೂರಿನ ದ್ವಿಜ ಆರ್ಟ್ ಗ್ಯಾಲರಿಯಲ್ಲಿ ‘ಆನ್ ಆರ್ಟ್ ಫ್ಯೂಷನ್’ | ಡಿಸೆಂಬರ್ 6ರಿಂದ 15
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.