Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವೀರರಾಣಿ ಅಬ್ಬಕ್ಕ ಉತ್ಸವ 2025ರ ಸಾಲಿನ ‘ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರ’ಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 25
    Artist

    ವೀರರಾಣಿ ಅಬ್ಬಕ್ಕ ಉತ್ಸವ 2025ರ ಸಾಲಿನ ‘ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರ’ಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಳ್ಳಾಲ : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ 2025ರ ಫೆಬ್ರವರಿ ತಿಂಗಳ 3ನೇ ವಾರದಲ್ಲಿ ಜರಗುವ ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ ಮತ್ತು ಓರ್ವ ಮಹಿಳಾ ಸಾಧಕರಿಗೆ ‘ವೀರರಾಣಿ ಅಬ್ಬಕ್ಕ ಪುರಸ್ಕಾರ’ ನೀಡಲು ನಿರ್ಧರಿಸಲಾಗಿದೆ. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗಳು ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದು, ಪ್ರಶಸ್ತಿ ಮತ್ತು ಪುರಸ್ಕಾರಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಪ್ರಶಸ್ತಿ, ಪುರಸ್ಕಾರಗಳಿಗೆ ಅರ್ಜಿ ಸಲ್ಲಿಸುವವರಿಗೆ ಮಾನದಂಡಗಳು :
    ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ – ತುಳುನಾಡಿನಲ್ಲಿ ಹುಟ್ಟಿ ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನಾ ವಿಭಾಗಗಳಲ್ಲಿ ಗಣನೀಯ ಸಾಧನೆ ಮಾಡಿದ ಓರ್ವ ಮಹಿಳೆಗೆ ಈ ಪ್ರಶಸ್ತಿ ಮೀಸಲಾಗಿದೆ. ನಾಡು, ನುಡಿ ಹಾಗೂ ಪರಂಪರೆಗೆ ನೀಡಿದ ಮಹತ್ವದ ಸೇವೆಯನ್ನು ಇಲ್ಲಿ ಪರಿಗಣಿಸಲಾಗುವುದು.

    ‘ವೀರರಾಣಿ ಅಬ್ಬಕ್ಕ ಪುರಸ್ಕಾರ’ – ತುಳು ಸಂಸ್ಕೃತಿಯ ಹಿನ್ನೆಲೆಯೊಂದಿಗೆ ಕಲೆ, ಕ್ರೀಡೆ, ಸಮಾಜಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ ಮಹಿಳೆಯೋರ್ವರಿಗೆ ಅಬ್ಬಕ್ಕ ಪುರಸ್ಕಾರ ನೀಡಲು ಉದ್ದೇಶಿಸಲಾಗಿದೆ. ಚಲನಚಿತ್ರ, ನಾಟಕ, ಲಲಿತ ಕಲೆಗಳು, ಕ್ರೀಡಾರಂಗ, ನಾಟಿವೈದ್ಯ, ಜಾನಪದ ಪ್ರಕಾರಗಳಲ್ಲಿನ ಪರಿಶ್ರಮಗಳನ್ನು ಪರಿಗಣಿಸಲಾಗುವುದು.

    ಪ್ರಶಸ್ತಿ ಮತ್ತು ಪುರಸ್ಕಾರಗಳಿಗೆ ಅರ್ಹತೆ ಹೊಂದಿದವರು ಅಥವಾ ಅವರ ಬಗ್ಗೆ ತಿಳಿದವರು ದಿನಾಂಕ 25 ಜನವರಿ 2025ರೊಳಗೆ ಈ ಕೆಳಗಿನ ವಿಳಾಸಕ್ಕೆ ಮಾಹಿತಿ ನೀಡಲು ಕೋರಲಾಗಿದೆ. ಈ ಹಿಂದೆ ಪ್ರಶಸ್ತಿಗಾಗಿ ವಿವರಗಳನ್ನು ಕಳುಹಿಸಿಕೊಟ್ಟವರು ಮತ್ತೆ ಕಳುಹಿಸಿ ಕೊಡುವ ಅವಶ್ಯಕತೆಯಿರುವುದಿಲ್ಲ. ಸಂಪರ್ಕ ವಿಳಾಸ : ದಿನಕರ ಉಳ್ಳಾಲ್, ಅಧ್ಯಕ್ಷರು, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ, ಅಪ್ಪಯ್ಯ ಮೆನ್ಷನ್, ಪೆರ್ಮನ್ನೂರು ಅಂಚೆ, ಮಂಗಳೂರು- 575017 ದ.ಕ. ಮೊಬೈಲ್: 9880088333/9343343888, ಇಮೇಲ್ : [email protected]

    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ತಬಲವಾದ್ಯ ಗಾರುಡಿಗ ಪಂಡಿತ್ ರಘುನಾಥ್ ನಾಕೋಡ್
    Next Article ಅಂಬಲಪಾಡಿ ನಾಟಕೋತ್ಸವ ಉದ್ಘಾಟನೆ ಮತ್ತು ನೀನಾಸಂ ತಂಡದವರಿಂದ ನಾಟಕ ಪ್ರದರ್ಶನ
    roovari

    Add Comment Cancel Reply


    Related Posts

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.