ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜೀವಮಾನ ಸಾಧನೆಗೆ ಕೊಡಮಾಡುವ 2024ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಬ್ಯಾರಿ ಭಾಷೆ, ಸಾಹಿತ್ಯ, ಸಂಶೋಧನೆ, ಕಲೆ, ಜನಪದ ಮತ್ತು ಸಂಘಟನಾ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ ಮೂವರು ಮಹನೀಯರನ್ನು 2024ನೇ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯು ರೂಪಾಯಿ 50,000 ನಗದು, ಪ್ರಮಾಣ ಪತ್ರ, ಸ್ಮರಣಿಕೆ ಮತ್ತು ಫಲಪುಷ್ಪ ಒಳಗೊಂಡಿರುತ್ತದೆ.
ಆಸಕ್ತರು ಸ್ವತಃ ಅಥವಾ ಸಾಧಕರ ಪರವಾಗಿ ಇತರರು ಹೆಸರುಗಳನ್ನು ಶಿಫಾರಸು ಮಾಡಬಹುದು. ಹಿಂದಿನ ಸಾಲಿನಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವ, ಆದರೆ ಪ್ರಶಸ್ತಿಗೆ ಆಯ್ಕೆ ಆಗದಿರುವವರ ಅರ್ಜಿಗಳನ್ನು ಈ ವರ್ಷವೂ ಪರಿಗಣಿಸಲಾಗುವುದು. ಸಾಧನೆಯ ಪೂರಕ ವಿವರ ಇದ್ದರೆ ಅಕಾಡೆಮಿಗೆ ಕಳುಹಿಸಿಕೊಡಬಹುದು.
ಹೊಸದಾಗಿ ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯ, ಭಾವಚಿತ್ರ ಹಾಗೂ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಲಕೋಟೆಯ ಮೇಲೆ ‘ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ 2024’ ಎಂದು ಬರೆದು ರಿಜಿಸ್ಟ್ರಾರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಸಾಮರ್ಥ್ಯ ಸೌಧ, 2ನೇ ಮಹಡಿ, ಮಂಗಳೂರು ತಾಲೂಕು ಪಂಚಾಯಿತಿ ಹಳೇ ಕಟ್ಟಡ, ಮಿನಿ ವಿಧಾನಸೌಧದ ಬಳಿ, ಮಂಗಳೂರು-575001 ಈ ವಿಳಾಸಕ್ಕೆ ಅಥವಾ bearyacademy@yahoo. in ಇ-ಮೇಲ್‌ಗೆ ದಿನಾಂಕ 30 ಎಪ್ರಿಲ್ 2025ರ ಒಳಗಾಗಿ ಸಲ್ಲಿಸಬಹುದು ಎಂದು ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Article‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ