ಮಂಗಳೂರು: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 26 ಆಗಸ್ಟ್ 2024 ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನವಾಗಿದೆ.
2023ನೇ ಸಾಲಿನ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ ( ಪಠ್ಯಾಧರಿತ ಬಿಟ್ಟು ) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಈ ರೀತಿಯ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.
ಈ ಮೇಲ್ಕಾಣಿ ಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯ ಮಾಪನಗೊಳಿಸಲು ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅಕಾಡೆಮಿಯ ಕೇಂದ್ರ ಕಚೇರಿಗೆ ಕಳುಹಿಸಿಕೊಡಬೇಕು.
ವಿಳಾಸ – ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಖಮನಹಳ್ಳಿ, ಧಾರವಾಡ -580004 ಇಲ್ಲಿಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು. ಪ್ರಶಸ್ತಿಯ ಮಾನದಂಡಗಳನ್ನು https:// balavikasaacademy.karnataka.gov.in ನಲ್ಲಿ ವೀಕ್ಷಿಸಬಹುದು. ಅಥವಾ ದೂರವಾಣಿ ಸಂಖ್ಯೆ 0836 2465490ನ್ನು ಸಂಪರ್ಕಿಸಬಹುದಾಗಿದೆ.