Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 14

    June 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರು ರಂಗಾಯಣದಲ್ಲಿ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ | ಜೂನ್ 30 ಕೊನೆಯ ದಿನ
    Drama

    ಮೈಸೂರು ರಂಗಾಯಣದಲ್ಲಿ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ | ಜೂನ್ 30 ಕೊನೆಯ ದಿನ

    June 12, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 16 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸನ್ನು ನಡೆಸುವ ಈ ಸಂಸ್ಥೆಯು ಪ್ರಸ್ತುತ 2025-26ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 2025-26ನೇ ಸಾಲಿನ ಈ ರಂಗತರಬೇತಿ ಕೋರ್ಸ್ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೋರ್ಸಿನ ಒಂದು ವರ್ಷದ ವ್ಯಾಸಂಗ ಅವಧಿಯಲ್ಲಿ ಊಟ, ವಸತಿ ಹಾಗೂ ಪಠ್ಯ ಸಾಮಗ್ರಿಗಳ ವೆಚ್ಚಗಳನ್ನು ನಿಯಮಾನುಸಾರ ವಿದ್ಯಾರ್ಥಿ ವೇತನದಲ್ಲಿ ಭರಿಸಲಾಗುವುದು.

    ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ರಂಗಾಯಣದ ವೆಬ್‌ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.300/-, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.200/-ಗಳು (ರಂಗಕೈಪಿಡಿ/ಪರಿಚಯ ಪುಸ್ತಕ ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು (Deputy Director, Rangayana, Mysore) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ದಿನಾಂಕ 30 ಜೂನ್ 2025ರ ಸಂಜೆ ಘಂಟೆ 5.30ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು. ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುವುದು. ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ:0821-2512639, ಮೊ:9449630465ನ್ನು ಸಂಪರ್ಕಿಸುವುದು.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ನಟನ ರಂಗಶಾಲೆಯಲ್ಲಿ ‘ಹೀಗಾದ್ರೆ ಹೇಗೆ ?’ | ಜೂನ್ 15
    Next Article ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ
    roovari

    Add Comment Cancel Reply


    Related Posts

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 14

    June 13, 2025

    ಜನಪದರು ರಂಗಮಂದಿರದಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನ | ಜೂನ್ 14 ಮತ್ತು 15

    June 13, 2025

    ಲೇಖಕರಿಂದ ಸಂಶೋಧನ ಲೇಖನಗಳಿಗೆ ಆಹ್ವಾನ | ಕೊನೆಯ ದಿನಾಂಕ ಜುಲೈ 20

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.