ಮೈಸೂರು : ಮೈಸೂರಿನ ರಂಗಾಯಣ ವತಿಯಿಂದ ಭಾರತೀಯ ರಂಗ ಶಿಕ್ಷಣ ಕೇಂದ್ರದಲ್ಲಿ 2024-25ನೇ ಸಾಲಿನ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 20-06-2024 ಕೊನೆಯ ದಿನವಾಗಿರುತ್ತದೆ.
ರಂಗ ತರಬೇತಿಗೆ ಸೇರ ಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. 18 ವರ್ಷ ತುಂಬಿದ ಮತ್ತು 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ರಂಗಾಯಣದಿಂದ ಉಚಿತ ವಸತಿ ವ್ಯವಸ್ಥೆ ಹಾಗೂ ತಿಂಗಳಿಗೆ ರೂ.5,000 ವಿದ್ಯಾರ್ಥಿವೇತನ ಪಾವತಿಸಲಾಗುವುದು. ಹೆಚ್ಚಿನ ಮಾಹಿತಿಗೆ 0821-2512639, 9148827720 ಈ ಸಂಖ್ಯೆ ಸಂಪರ್ಕಿಸಬಹುದು ಎಂದು ರಂಗಾಯಣದ ಉಪನಿರ್ದೇಶಕರು ತಿಳಿಸಿದ್ದಾರೆ.