ಹುಬ್ಬಳ್ಳಿ: ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ಕೊಡಮಾಡುವ ‘ವಿಭಾ ಸಾಹಿತ್ಯ ಪ್ರಶಸ್ತಿ-2025’ಕ್ಕಾಗಿ ಕನ್ನಡದ ಕವಿ/ಕವಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.
ಅನುವಾದಿತ ಕವಿತೆಗಳು, ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂಪಾಯಿ 10,000 ನಗದು ಮತ್ತು ಫಲಕವನ್ನು ಒಳಗೊಂಡಿದೆ. ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ. ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು. ಹಸ್ತಪ್ರತಿ ಕಳುಹಿಸಲು ಜೂನ್ 30 ಕೊನೆಯ ದಿನಾಂಕ. ಸುನಂದಾ ಮತ್ತು ಪ್ರಕಾಶ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2025, ನಂ.90, ‘ನಾಗಸುಧೆ ಜಗಲಿ’ 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ ಹುಬ್ಬಳ್ಳಿ- 580031, ದೂ.ಸಂ. 9380613683, 9845779387ಗೆ ಹಸ್ತಪ್ರತಿಯನ್ನು ಕಳುಹಿಸಿಕೊಡಬೇಕು.
Subscribe to Updates
Get the latest creative news from FooBar about art, design and business.