ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ‘ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು’ ಎಂಬ ಹೆಸರಿನಲ್ಲಿ ಮೂರು ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ಅಕ್ಟೋಬರ್ 2024. ಆಸಕ್ತ ಅಭ್ಯರ್ಥಿಗಳು http://karnatakasahithyaacademy.org ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಿಜಿಸ್ಟ್ರಾರ್ ಕರಿಯಪ್ಪ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಮ್ಮಟಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 8
No Comments1 Min Read
Previous Articleಬೆಂಗಳೂರಿನಲ್ಲಿ ‘ಬೀದಿ ನಾಟಕ ಸ್ಪರ್ಧೆ 2024’ | ಅಕ್ಟೋಬರ್ 5
Next Article ತೀರ್ಥಹಳ್ಳಿಯಲ್ಲಿ ಲೋಕಾರ್ಪಣೆಗೊಂಡ ‘ಕನ್ನಡತನ’ ಸಂಶೋಧನಾ ಕೃತಿ
Related Posts
Comments are closed.
