ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ-50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು ‘ಯುವಕವಿ ಗೋಷ್ಠಿ’ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20ರಿಂದ 40ವರ್ಷ ವಯಸ್ಸಿನ ಯುವ ಕವಿಗಳಿಂದ ಕವಿತೆಗಳ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು. ಕವಿತೆಗಳನ್ನು ಕಳುಹಿಸಲು 30 ಅಕ್ಟೋಬರ್ 2024 ಕೊನೆಯ ದಿನ.
ಆಸಕ್ತ ಕವಿಗಳು ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣದಿಂದ ಮಾಹಿತಿ ಪಡೆದುಕೊಳ್ಳುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಬೆಂಗಳೂರಿನಲ್ಲಿ ‘ನೃತ್ಯಾರ್ಣವ’ ನೃತ್ಯ ತರಗತಿ ಪ್ರಾರಂಭ