ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಂದ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರವನ್ನು 10 ಡಿಸೆಂಬರ್ 2024 ರಿಂದ 17 ಡಿಸೆಂಬರ್ 2024ರ ವರೆಗೆ ನಡೆಯಲಿದೆ. ಶಿಬಿರದಲ್ಲಿ 16 ರಿಂದ 40 ವರ್ಷದೊಳಗಿನ ಯುವಕ/ಯುವತಿಯರು ಮಾತ್ರ ಭಾಗವಹಿಸಬಹುದು. ತರಬೇತಿ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳ ದೂರವಾಣಿ/ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ತರಬೇತಿ ಅವಧಿಯಲ್ಲಿ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವವರಿಗೆ ಸಾಮಾನ್ಯ ವಸತಿ ವ್ಯವಸ್ಥೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು 08 ಡಿಸೆಂಬರ್ 2024 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.