ಕಾಸರಗೋಡು : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇದರ ಸಹಕಾರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ-2024’ ದಿನಾಂಕ 27 ಅಕ್ಟೋಬರ್ 2024ರಂದು ಕಾಸರಗೋಡಿನ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾ ಭವನದಲ್ಲಿ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇದರ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಗೌಡರ ಯುವ ಸೇವಾ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ಪಿ. ಎಸ್. ಗಂಗಾಧರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುತ್ತಿಗೋಲು ಗ್ರಾಮ ಪಂಚಾಯತ್ ಇದರ ಅಧ್ಯಕ್ಷರಾದ ಶ್ರೀ ಮುರಳಿ ಪಯ್ಯಂಗಾನ, ಕಾರಡ್ಕ ಬ್ಲಾಗ್ ಪಂಚಾಯತ್ ಇದರ ಸದಸ್ಯರಾದ ಶ್ರೀ ಕೃಷ್ಣನ್ ಬಿ., ಕುತ್ತಿಗೋಲು ಗ್ರಾಮ ಪಂಚಾಯತ್ ಇದರ ಸದಸ್ಯರಾದ ಶ್ರೀ ಕುಂಞರಾಮನ್ ತವನಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಡಿಕೇರಿ ಇದರ ಸಹಾಯಕ ನಿರ್ದೇಶಕರಾದ ಶ್ರೀ ಕುಮಾರ್ ಹಾಗೂ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸುಭಾಷ್ ಚಂದ್ರ ರೈ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ಉಪನ್ಯಾಸ, ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಭಾಷಾ ಕವಿ ಗೋಷ್ಠಿ ನಡೆಯಲಿರುವುದು.

