ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಹಾಗೂ ಸ್ಪರ್ಧೆಗಳ ಕಾರ್ಯಕ್ರಮವು ದಿನಾಂಕ 16 ಸೆಪ್ಟೆಂಬರ್ 2025ರ ಮಂಗಳವಾರದಂದು ಶ್ರೀ ಸುಬ್ರಹ್ಮಣೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ರಾಜ್ಯ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಮಾತನಾಡಿ “ಕರ್ನಾಟಕ ರಾಜ್ಯ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಳೆದ ಐದು ವರ್ಷಗಳಿಂದ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಬೇರೆ ಬೇರೆ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದೇವೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಅವರಿಗೆ ವಾರ್ತೆ ಹಾಗೂ ಸಂಸ್ಕೃತಿಯನ್ನ ಉಣ ಬಡಿಸಿದಾಗ ಅದು ಮುಂದಿನ ತಲೆಮಾರಿನವರೆಗೂ ನಿರಂತರವಾಗಿ ಸಾಗಲು ಪ್ರೇರೇವಣೆಯಾಗುತ್ತದೆ ಹಾಗೆಯೇ ವಿದ್ಯಾರ್ಥಿಗಳಿಂದಲೇ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಗಲಿ ಎನ್ನು ಉದ್ದೇಶದಿಂದ ಎರಡು ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ” ಎಂದು ನುಡಿದರು. ಕಾರ್ಯಕ್ರಮವನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಎನಕಲ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಗೌಡ ನಮಿತಿ ಅಧ್ಯಕ್ಷರಾದ ಡಾ. ಎ. ಎ. ತಿಲಶ್, ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ತ್ರಿವೇಣಿ ದಾಮ, ಕಾಲೇಜಿನ ಪ್ರಾಂಶುಪಾಲ ನೋಮಶೇಖರ ನಾಯಕ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಅರಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಕಾರ್ಯಪ್ಪ ಪಿ. ಎಸ್. ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಲತಾ ಪ್ರಸಾದ್ ಕುತ್ಸಾಜೆ ಹಾಗೂ ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸೌಮ್ಯ ದಿನೇಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಚಂದ್ರಶೇಖರ ವೆರಾಲು ಸ್ವಾಗಟಿಸಿ ಲೋಕೇಶ್ ಊರುಬೈಲು ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೇರೆಬೇರೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.