ಬೆಂಗಳೂರು : ಚಿಣ್ಣರಲೋಕ ಟ್ರಸ್ಟ್ (ರಿ.) ಬೆಂಗಳೂರು, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಮತ್ತು ಭಾರತೀಯ ಸ್ತ್ರೀ ಶಕ್ತಿ ಸಂಘಟನಾ ಟ್ರಸ್ಟ್ (ರಿ.) ಬೆಂಗಳೂರು ಇವರ ಸಹಯೋಗದಲ್ಲಿ ‘ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ’ ಕಾರ್ಯಕ್ರಮವು ದಿನಾಂಕ 18 ಅಕ್ಟೋಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರು ಹೆಬ್ಬಾಳದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕವಿಗೋಷ್ಠಿ, ಉಪನ್ಯಾಸ, ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.