ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ನಗರ ಘಟಕ ಇದರ ‘ಅಷ್ಠಮ ಸಂಭ್ರಮ’ ಕಾರ್ಯಕ್ರಮವನ್ನು ದಿನಾಂಕ 02 ಏಪ್ರಿಲ್ 2026ರಂದು ಸಂಜೆ ಗಂಟೆ 6-15ಕ್ಕೆ ಶ್ರೀ ಮಂಗಳಾದೇವಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ನಗರ ಘಟಕದ ಅಧ್ಯಕ್ಷರಾದ ಲ. ತಾರನಾಥ ಶೆಟ್ಟಿ ಬೋಳಾರ ಇವರು ವಹಿಸಲಿದ್ದು, ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಂ. ಅರುಣ್ ಐತಾಳ್ ಇವರ ಘನ ಉಪಸ್ಥಿತಿಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕದ್ರಿಯ ಮೊಕ್ತೇಸರರಾದ ದಿಲ್ ರಾಜ್ ಆಳ್ವ ಇವರಿಗೆ ‘ಯಕ್ಷಧ್ರುವ ಸಾಧನಾ ಪ್ರಶಸ್ತಿ -2026’ ಪ್ರದಾನ ಹಾಗೂ ಯುವ ಭಾಗವತ ಭರತ್ ಶೆಟ್ಟಿ ಸಿದ್ಧಕಟ್ಟೆ ಮತ್ತು ಹಾಸ್ಯ ಕಲಾವಿದ ಸಂದೇಶ್ ಮಂದಾರ ಇವರಿಗೆ ವಿಶೇಷ ಯಕ್ಷ ಗೌರವ ನೀಡಿ ಸನ್ಮಾನಿಸಲಾಗುವುದು. ಸಂಜೆ 6-30 ಗಂಟೆಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀ ತುಳಸಿ’ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

