ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಯನ್ನು ಘೋಷಿಸಿದ್ದು, ಮೂವರು ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ. ಆರ್. ಸುನಂದಮ್ಮ ತಿಳಿಸಿದ್ದಾರೆ.
ಪ್ರಶಸ್ತಿಯು ಮೂರು ವಿಭಾಗಗಳನ್ನು ಒಳಗೊಂಡಿದ್ದು, ಆಯಾ ವಿಭಾಗದಲ್ಲಿ ಸಾಧನೆಗೈದ ಲೇಖಕಿಯರಿಗೆ ಪ್ರಶಸ್ತಿ ನೀಡಲಾಗುತ್ತದೆ. ಕಾವ್ಯ ವಿಭಾಗದಿಂದ ಮಾಧವಿ ಭಂಡಾರಿ ಕೆರೆಕೋಣ, ಗದ್ಯ ವಿಭಾಗದಿಂದ ಬಿ.ಟಿ. ಜಾಹ್ನವಿ, ಸಂಕೀರ್ಣ ವಿಭಾಗದಿಂದ (ಶಿಕ್ಷಣ ಕ್ಷೇತ್ರ) ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ರೂ.10,000/- ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ನಾಡೋಜ ಮನು ಬಳಿಗಾರ್, ಡಾ. ಆರ್. ಸುನಂದಮ್ಮ ಹಾಗೂ ಸುಮಾ ಸತೀಶ್ ಇದ್ದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 11 ಜುಲೈ 2026ರಂದು ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಡೆಯಲಿದೆ.

