Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ದಿನಾಂಕ 06 ಸಪ್ಟೆಂಬರ್ 2025ರಂದು ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ-6’ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಆಯೋಜಿಸಲಾಗಿತ್ತು. ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಪ್ರಾಸ್ತಾವಿಕವಾಗಿ ಮಾತಾನಾಡಿ ಅಕಾಡೆಮಿಗೆ ಕೊಂಕಣಿ ಜನರು ಯಾವಾಗಲೂ ಹತ್ತಿರವಿರಬೇಕು ಎನ್ನುವ ಉದ್ದೇಶದಿಂದ ಹಾಗೂ ಕೊಂಕಣಿ ಯುವ ಕವಿಗಳಿಗೆ ವೇದಿಕೆ ದೊರೆಯಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಇದ್ದೇವೆ. ಪ್ರತಿಯೊಬ್ಬ ಇದರ ಪ್ರಯೋಜನ ಪಡೆಯಬೇಕೆಂದು ಕರೆಕೊಟ್ಟರು. ಕೊಂಕಣಿಯ ಹಿರಿಯ ಸಾಹಿತಿಗಾರರಾದ ಶ್ರೀ ಹೇಮಾಚಾರ್ಯಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ “ಯಾವುದೇ ಒಬ್ಬ ನಾಟಕಕಾರ, ನಟ, ನೃತ್ಯಗಾರ, ಚಿತ್ರಕಾರ ಆಗಬೇಕಾದರೂ ಅವನು ಹುಟ್ಟುವಾಗಲೇ ಕವಿಯಾಗಿ ಹುಟ್ಟಬೇಕು. ಕಾದಂಬರಿ, ಸಣ್ಣಕಥೆ, ಕಥೆ, ಇವುಗಳ ಮುಂದೆ ಕವಿತೆಗಳಿಗೆ ಅದರದ್ದೇ ಆದ ಪ್ರಾಶಸ್ತ್ಯವಿದೆ. ಕವಿತೆಗಳನ್ನು ರಚಿಸುವವನು ಜೀವನದಲ್ಲಿ ಸಾಧನೆ ಮಾಡುತ್ತಾನೆ” ಎಂದು ಅವರು ಕವಿಯಾದ ಬಗ್ಗೆ ವಿವರಿಸಿದರು. ಶ್ರೀ ರೊನಾಲ್ಡ್ ಕ್ರಾಸ್ತಾ ಇವರು ಕವಿಗೋಷ್ಟಿಯನ್ನು ನಡೆಸಿದರು. ಶ್ರೀ ರೋಶನ್ ಎಮ್.…
ಮಂಗಳೂರು : ಯುವ ಲೇಖಕಿ ಫಾತಿಮಾ ರಲಿಯಾ ಇವರ ಅನುಭವ ಕಥನ ‘ಕೀಮೋ’ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 07 ಸೆಪ್ಟೆಂಬರ್ 2025ರ ಭಾನುವಾರದಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಎಂದು ಹಿರಿಯ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಮಾತನಾಡಿ “ಶಿಕ್ಷಣ, ಆರೋಗ್ಯ, ಸಾಹಿತ್ಯ, ರಂಗಭೂಮಿ, ಬ್ಯಾಂಕಿಂಗ್, ವೈದ್ಯಕೀಯ ಇತ್ಯಾದಿ ವಲಯಗಳಲ್ಲಿನ ಸಾಧನೆಗಳ ಮೂಲಕ ಬುದ್ಧಿವಂತರ ಜಿಲ್ಲೆ ಎಂದು ಹೇಳಿಕೊಳ್ಳುತ್ತಿದ್ದ ನಮ್ಮಲ್ಲೀಗ ಮತೀಯವಾದವು ತಾಂಡವಾಡುತ್ತಿದೆ. ದಿನನಿತ್ಯ ಕರಾವಳಿಯ ಈ ಜಿಲ್ಲೆಯಲ್ಲಿ ದಾಳಿ ಹೆಚ್ಚುತ್ತಿವೆ. ಇದರಿಂದ ನಮ್ಮನ್ನು ನಾವೇ ಚಿಕಿತ್ಸಕ ದೃಷ್ಟಿಯಿಂದ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಕರಾವಳಿಯ ಈ ರೋಗ ಶಮನಕ್ಕೆ ಮದ್ದು ಕಂಡು ಹಿಡಿಯಬೇಕಿದೆ. ವೈದ್ಯರು ರೋಗಿಗಳನ್ನು ಸಮಾನವಾಗಿ ಕಾಣಬೇಕಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವೈದ್ಯರಲ್ಲೂ ಮತೀಯವಾದ ವೃದ್ಧಿಸುತ್ತಿದೆ. ಇದೊಂದು ವಿಷವಾಗಿದ್ದು, ರೋಗಿಗಳ ಪಾಲಿಗೆ ಮಾತ್ರವಲ್ಲ ಸಾಮಾಜಿಕವಾಗಿಯೂ ಅಪಾಯಕಾರಿಯಾಗಿದೆ. ಹಾಗಾಗಿ ಎಲ್ಲಾ ರೀತಿಯ ಮತೀಯವಾದವನ್ನು ನಿರ್ಮೂಲನ ಮಾಡಲು ಪಣತೊಡಬೇಕಿದೆ” ಎಂದರು.…
ಮೈಸೂರು : ಕರ್ಣಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ 2024-25ನೇ ಸಾಲಿನ ಹಿಂದೂಸ್ತಾನಿ ತಾಳವಾದ್ಯ ಪರೀಕ್ಷೆ ಸೀನಿಯರ್ ವಿಭಾಗದಲ್ಲಿ ಉದಯ ಕುಮಾರ್ ಇವರು ಶೇ.72.4% ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿರುತ್ತಾರೆ. ಇವರು ಉಡುಪಿಯ ತಬಲಾ ಗುರುಗಳಾದ ವಿದ್ವಾನ್ ಎನ್. ಮಾಧವ ಆಚಾರ್ಯರ ಶಿಷ್ಯರಾಗಿದ್ದು, ಪ್ರಸ್ತುತ ತಬಲಾದಲ್ಲಿ ಉನ್ನತ ಶಿಕ್ಷಣದ ತರಬೇತಿ ಪಡೆಯುತ್ತಿದ್ದಾರೆ. ಮಂಗಳೂರಿನ ಎಂ.ಆರ್.ಪಿ.ಎಲ್. ಸಂಸ್ಥೆಯಲ್ಲಿ ಚೀಫ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಶ್ರೀ ಕೃಷ್ಣ ಸೇವಾ ಟ್ರಸ್ಟ್ (ರಿ.) ಪುತ್ತೂರು, ವಲಯ ಕಡಬ ಇದರ ವಾರ್ಷಿಕ ಮಹಾಸಭೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಅಂಗವಾಗಿ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 07 ಸೆಪ್ಟೆಂಬರ್ 2025ರಂದು ಸವಣೂರಿನ ಶ್ರೀ ವಿನಾಯಕ ಸಭಾಭವನದಲ್ಲಿ ‘ಶ್ರೀ ಕೃಷ್ಣ ಸಂಧಾನ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಆನಂದ ಸವಣೂರು, ಕುಮಾರಿ ಶ್ರೇಯಾ ಇಡ್ಯಾಡಿ, ಚೆಂಡೆ ಮದ್ದಳೆಗಳಲ್ಲಿ ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ತಾರಾನಾಥ ಸವಣೂರು ಸಹಕರಿಸಿದರು. ಮುಮ್ಮೇಳದಲ್ಲಿ ನಾ ಕಾರಂತ ಪೆರಾಜೆ (ಶ್ರೀ ಕೃಷ್ಣ), ಭಾಸ್ಕರ ಬಾರ್ಯ (ವಿದುರ), ಗುಡ್ಡಪ್ಪ ಬಲ್ಯ (ಕೌರವ) ಸಹಕರಿಸಿದರು. ಆನಂದ ಸವಣೂರು ಸ್ವಾಗತಿಸಿ, ವಲಯಾಧ್ಯಕ್ಷ ವಾಸುದೇವ ಇಡ್ಯಾಡಿ ಕಲಾವಿದರನ್ನು ಗೌರವಿಸಿ, ವಂದಿಸಿದರು.
ಬೆಂಗಳೂರು : ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ‘ಕಲಾ ನಿಧಿ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 27 ಸೆಪ್ಟೆಂಬರ್ 2025ರಂದು ನಾಟ್ಯ ಮಯೂರಿ ಟ್ರಸ್ಟ್ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಟ್ರಸ್ಟಿನ ಸ್ಥಾಪಕರಾದ ಪ್ರೇಮಾಂಜಲಿಯವರು ತಿಳಿಸಿದ್ದಾರೆ. ಡಾ. ಮಾಲತಿ ಶೆಟ್ಟಿ ಮಾಣೂರುರವರು ಕಳೆದ 20 ವರುಷಗಳಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಳೆದ 12 ವರುಷಗಳಿಂದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ 9 ಕೃತಿಗಳನ್ನು ಪ್ರಕಟಿಸಿದ್ದು, ಇತರ ಹಿರಿಯ ಲೇಖಕರ 45 ಕೃತಿಗಳನ್ನು ಸರಣಿ ಕೃತಿಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ಪ್ರೀತಿ ಮೂಡುವ ಸಲುವಾಗಿ ಉಚಿತವಾಗಿ ಯಶಸ್ವಿಯಾಗಿ 114 ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮವನ್ನು ಮಾಡಿದ್ದಾರೆ. ಮಂಗಳೂರಿನ ಅತ್ತಾವರದ ‘ಸಾಹಿತ್ಯ ನಂದನ’ದಲ್ಲಿ ವಾಸವಾಗಿದ್ದಾರೆ.
ಮಂಗಳೂರು : ಕನ್ನಡ ಭವನದ ಸಂದ್ಯಾರಾಣಿ ಟೀಚರ್ ಸಾರತ್ಯದ ಕನ್ನಡ ಭವನ ಪ್ರಕಾಶನದ ಒಂಬತ್ತನೇ ಕೃತಿ ‘ಅನುಕರಣೀಯ ವ್ಯಕ್ತಿತ್ವ -ಆದರ್ಶ ಮಹಿಳೆ -ಶ್ರೀಮತಿ ಗಾಯತ್ರಿ ನಾಗೇಶ್’ ಎಂಬ ವ್ಯಕ್ತಿ ಚಿತ್ರಣ ಕೃತಿ ದಿನಾಂಕ 09 ಸೆಪ್ಟೆಂಬರ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಮಂಗಳೂರಿನಲ್ಲಿ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಹಾಲ್ ನಲ್ಲಿ ಜರಗುವ ‘ಗಾಯತ್ರಿ ನಾಗೇಶ್ ಸಂಸ್ಮರಣೆ -ನುಡಿ ನಮನ -ಕೃತಿ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆಗೊಳ್ಳಲಿದೆ. ಕಾರ್ಯಕ್ರಮ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಕನ್ನಡ ಭವನ ಪ್ರಕಾಶನ ಜಂಟಿಯಾಗಿ ಆಯೋಜಿಸಲಿದ್ದು, ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ರೇಖಾ ಸುದೇಶ್ ರಾವ್ ಹಾಗೂ ಕನ್ನಡ ಭವನ ಪ್ರಕಾಶನದ, ಪ್ರಕಾಶಕಿ ಸಂದ್ಯಾರಾಣಿ ಟೀಚರ್ ಜಂಟಿಯಾಗಿ ತಿಳಿಸಿದ್ದಾರೆ. ಸಂದ್ಯಾ ರಾಣಿ ಟೀಚರ್ ಕೃತಿ ರಚಿಸಿದ್ದಾರೆ.
ಕೋಟ : ಕರ್ಣಾಟಕ ಯಕ್ಷಧಾಮ ಮಂಗಳೂರು, ಸಾಲಿಗ್ರಾಮ ಮಕ್ಕಳ ಮೇಳ ಕೋಟ, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಂದನೆ, ಸಾಧಕ ದಂಪತಿಗಳಿಗೆ ಸನ್ಮಾನ ಮತ್ತು ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ದಿನಾಂಕ 07 ಸೆಪ್ಟೆಂಬರ್ 2025ರಂದು ಕೋಟ ಶ್ರೀ ಹಂದೆ ಮಹಾಗಣಪತಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಕಲ್ಕೂರ ಪ್ರತಿಷ್ಠಾನದ ಎಸ್. ಪ್ರದೀಪ ಕುಮಾರ ಕಲ್ಕೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ “ಇಂದಿನ ಮಕ್ಕಳು ಕಂಪ್ಯೂಟರ್ ಗೊಂಬೆಗಳಾಗಿದ್ದಾರೆ, ಸನಾತನ ಶ್ರದ್ಧೆ, ನಂಬಿಕೆ ದೂರವಾಗಿದೆ. ಅವರಲ್ಲಿ ಧಾರ್ಮಿಕ ತತ್ವಗಳನ್ನು ಬೆಳೆಸಿ ಸನಾತನ ಸಂಸ್ಕೃತಿಯನ್ನು ಉಳಿಸಬೇಕಾಗಿದೆ, ಯಕ್ಷಗಾನದ ಆಸಕ್ತಿ ನಮ್ಮ ಧಾರ್ಮಿಕ ಪ್ರಜ್ಞೆಯನ್ನು ಅರಳಿಸಬಲ್ಲದು” ಎಂದರು. ಈ ಸಂದರ್ಭದಲ್ಲಿ ವಿದ್ವಾಂಸ, ಯಕ್ಷಗಾನ ಕಲಾವಿದ ಡಾ. ಎಂ. ಪ್ರಭಾಕರ ಜೋಶಿ ಮಂಗಳೂರು ಇವರಿಗೆ ಗುರುವಂದನೆ ಸಲ್ಲಿಸಲಾಯಿತು. ಸಾಧಕರಾದ ಪ್ರಗತಿಪರ ಕೃಷಿಕ, ಹೈನುಗಾರ, ಸಮಾಜ ಸೇವಕ ಕುಪ್ಪಾರು ಅನಂತ ಉಡುಪ – ಲಕ್ಷ್ಮಿ ಉಡುಪ ದಂಪತಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಹೆಚ್.…
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಅನುಗ್ರಹ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸಮಾಲೆ – 8ರಲ್ಲಿ ಗಿರೀಶ್ ಕಾರ್ನಾಡ್ ಇವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 09 ಸೆಪ್ಟೆಂಬರ್ 2025ರಂದು ಬೆಳಗ್ಗೆ 11-00 ಗಂಟೆಗೆ ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಉಪನ್ಯಾಸ ಮಾಲೆಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಕನ್ನಡ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಭವ್ಯಶ್ರೀ ಆರ್. ಬಲ್ಲಾಳ್ ಇವರು ಉಪನ್ಯಾಸ ನೀಡಲಿದ್ದಾರೆ. ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ಗೆ ಹಿರಿಯ ಸಂಶೋಧಕ ಮೈಸೂರಿನ ಡಾ. ಬಿ.ಎಸ್. ಪ್ರಣತಾರ್ತಿಹರನ್ ಇವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಹಿರಿಯ ವಿದ್ವಾಂಸರಾದ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿಯವರ ಅಭಿಮಾನಿಗಳು ಮತ್ತು ಬಂಧುಗಳು 2001ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿಗಳು ಕಾರ್ಯ ನಿರ್ವಹಿಸಿದ ಹಳಗನ್ನಡ ಸಾಹಿತ್ಯದ ಅಧ್ಯಯನ, ಛಂದಸ್ಸು, ವ್ಯಾಕರಣ, ನಿಘಂಟು ರಚನೆ, ಗ್ರಂಥ ಸಂಪಾದನೆ, ಭಾಷಾ ಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿರುವವರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಬೇಕೆಂಬುದು ದತ್ತಿಯ ಆಶಯವಾಗಿದೆ. 2025ನೆಯ ಸಾಲಿಗೆ ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿ’ಗೆ ಆಯ್ಕೆಯಾಗಿರುವ ಡಾ. ಬಿ.ಎಸ್. ಪ್ರಣತಾರ್ತಿಹರನ್ ಬಾನುಲಿ ನಿಲಯದಲ್ಲಿ ಎಂಟು ವರ್ಷ ಸೇವೆ ಸಲ್ಲಿಸಿದ ನಂತರ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ 25 ವರ್ಷ ಸೇವೆ ಸಲ್ಲಿಸಿದವರು. ಸಂಕೇತಿ ಸಮುದಾಯದ ಅಧ್ಯಯನಕ್ಕೆ ಪಿ.ಎಚ್.ಡಿ. ಪದವಿಯನ್ನು ಪಡೆದು, ಜೊತೆಗೆ ‘ಸಂಕೇತಿ’…
ಉಪ್ಪಿನಂಗಡಿ : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ (ರಿ.) ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ನಡೆಸಲ್ಲಡುತ್ತಿರುವ ಶ್ರೀ ಮಹಾಭಾರತ ಸರಣಿಯ ಸುವರ್ಣ ಶತಕ ತಾಳಮದ್ದಳೆಯ ಅಂಗವಾಗಿ ದಿನಾಂಕ 06 ಸೆಪ್ಟೆಂಬರ್ 2025ರಂದು ತಾಳಮದ್ದಳೆ ಕಾರ್ಯಕ್ರಮವು ಉಪ್ಪಿನಂಗಡಿ ರಾಮ ನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ‘ಕರ್ಣ ಭೇದನ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಯಲ್.ಯನ್. ಭಟ್, ಚೆಂಡೆ ಮದ್ದಳೆಗಳಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀ ಕೃಷ್ಣ), ಗುಡ್ಡಪ್ಪ ಬಲ್ಯ (ಕರ್ಣ), ದುಗ್ಗಪ್ಪ ನಡುಗಲ್ಲು (ಸೂರ್ಯ), ಕಿಶೋರಿ ದುಗ್ಗಪ್ಪ ನಡುಗಲ್ಲು (ಕುಂತಿ) ಸಹಕರಿಸಿದರು.