Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ 2023ನೇ ಸಾಲಿನ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 21 ಮಾರ್ಚ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಬಸವರಾಜು ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಎಲ್.ಎನ್. ಮುಕುಂದ ರಾಜ್ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು 2023ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟವಾದ ಕೃತಿಗಳನ್ನು ವಿವಿಧ ಪುಸ್ತಕ ದತ್ತಿ ಪುರಸ್ಕಾರಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. ಇದಕ್ಕೆ ರಾಜ್ಯ, ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು, ಅವುಗಳಲ್ಲಿ…
ಮೈಸೂರು : ರೋಟರಿ ಮೈಸೂರು ಮತ್ತು ಇಂಗ್ಲೀಷ್ ಮಾಧ್ಯಮ ಶಾಲೆ ದಟ್ಟಗಳ್ಳಿ ಇವುಗಳ ಸಹಯೋಗದೊಂದಿಗೆ ಧ್ವನಿ ಫೌಂಡೇಷನ್ ಆಯೋಜಿಸುವ ಡಾ. ಶ್ವೇತಾ ಮಡಪ್ಪಾಡಿ ಸಾರಥ್ಯದಲ್ಲಿ ‘ಹಕ್ಕಿ ಹಾಡು’ ಮಕ್ಕಳ ಬೇಸಿಗೆ ಕಲರವ ಶಿಬಿರವನ್ನು ದಿನಾಂಕ 07 ಏಪ್ರಿಲ್ 2025ರಿಂದ 27 ಏಪ್ರಿಲ್ 2025ರವರೆಗೆ ಮೈಸೂರಿನ ದಟ್ಟಗಳ್ಳಿಯ ಮಹಾಮನೆ ಸರ್ಕಲ್ ಹತ್ತಿರ ಜ್ಯೋತಿ ಫರ್ಟಿಲಿಟಿ ಸೆಂಟರ್ ಎದುರು ರೋಟರಿ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಾಟಕ, ಅಭಿನಯ, ಮೈಮ್, ಸಂಗೀತ, ನೃತ್ಯ/ಜನಪದ ಕುಣಿತ, ಚಿತ್ರಕಲೆ, ಕರಕುಶಲ, ವಸ್ತುಗಳ ತಯಾರಿ, ಮಣ್ಣಾಟ, ಗ್ರೀಟಿಂಗ್ ಕಾರ್ಡ್ ತಯಾರಿ, ಮುಖವಾಡ ತಯಾರಿ ಇತ್ಯಾದಿ ಕಲಿಸಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9483918783 ಮತ್ತು 7019188932 ಸಂಖ್ಯೆಯನ್ನು ಸಂಪರ್ಕಿಸಿರಿ.
ಮೈಸೂರು : ರಂಗಾಯಣ ಮೈಸೂರು ಮತ್ತು ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ (ರಿ.) ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ಮತ್ತು ಕರ್ನಾಟಕ ನಾಟಕ ಅಕಾಡೆಮಿ ಇವುಗಳ ಸಹಕಾರದಲ್ಲಿ ‘ವಿಶ್ವ ರಂಗಸಂಭ್ರಮ 2025’ ಕಾರ್ಯಕ್ರಮವನ್ನು ದಿನಾಂಕ 22 ಮಾರ್ಚ್ 2025ರಿಂದ 27 ಮಾರ್ಚ್ 2025ರವರೆಗೆ ಮೈಸೂರಿನ ರಂಗಾಯಣದ ಭೂಮಿಗೀತ ಮತ್ತು ಕಾರಂತ ರಂಗ ಚಾವಡಿಯಲ್ಲಿ ಆಯೋಜಿಸಲಾಗಿದೆ. ನಾಟಕೋತ್ಸವ, ವಿಚಾರ ಸಂಕಿರಣ, ಜಾನಪದ, ರಂಗ ಗೀತೆಗಳು, ರಂಗ ಗೌರವ, ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಿನಾಂಕ 22 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಶ್ರೀಮತಿ ಗಾಯಿತ್ರೀ ಕೆ.ಎಂ. ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಗಂಟೆ 6-30ಕ್ಕೆ ಮಹಾದೇವ ಹಡಪದ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಧಾರವಾಡದ ಆಟ ಮಾಟ…
ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ‘ತ್ರಿಕೂಟ ಯಕ್ಷ ಸಂಭ್ರಮ’ವನ್ನು ದಿನಾಂಕ 20ರಿಂದ 22 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 20 ಮಾರ್ಚ್ 2025ರಂದು ಶ್ರೀ ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ ಕೊಂಡದಕುಳಿ ಕುಂಭಾಶಿ ಇವರಿಂದ ‘ಧರ್ಮಾಂದ ದಿಗ್ವಿಜಯ’, ದಿನಾಂಕ 21 ಮಾರ್ಚ್ 2025ರಂದು ಮಯ್ಯ ಯಕ್ಷ ಬಳಗ ಹಾಲಾಡಿ ಇವರಿಂದ ‘ಭೀಷ್ಮ ವಿಜಯ’, ದಿನಾಂಕ 22 ಮಾರ್ಚ್ 2025ರಂದು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇವರಿಂದ ‘ಅನುಸಾಲ್ವ ಗರ್ವಭಂಗ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಬಳಿಯ ಏರ್ಯಬೀಡಿನಲ್ಲಿ ಮಾವಂತೂರು ಸುಬ್ಬಯ್ಯ ಆಳ್ವ ಮತ್ತು ಸೋಮಕ್ಕೆ ದಂಪತಿಯ ಮಗನಾಗಿ ದಿನಾಂಕ 19 ಮಾರ್ಚ್ 1926ರಂದು ಲಕ್ಷ್ಮೀನಾರಾಯಣ ಆಳ್ವರು ಜನಿಸಿದರು. ಅವರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಬಂಟ್ವಾಳದಲ್ಲಿಯೇ. ಹೈಸ್ಕೂಲು ವಿದ್ಯಾಭ್ಯಾಸಕ್ಕೆ ಅವರು ಮಂಗಳೂರಿನ ಕೆನರಾ ಹೈಸ್ಕೂಲನ್ನು ಆಶ್ರಯಿಸಿದರು. ಹತ್ತನೆಯ ತರಗತಿಯ ಬಳಿಕ ಅವರ ಔಪಚಾರಿಕ ವಿದ್ಯಾಭ್ಯಾಸ ಮುಂದುವರಿಯಲಿಲ್ಲ. ಆದರೆ ಸ್ವಾಧ್ಯಾಯಿಯಾಗಿ ಅವರು ಗಳಿಸಿದ ಜ್ಞಾನ ಅಪಾರ. ಹಿಂದಿ ಕಲಿಕೆಯಲ್ಲಿ ಆಸಕ್ತಿಯನ್ನು ವಹಿಸಿ ರಾಷ್ಟ್ರಭಾಷಾ ಪ್ರವೀಣರಾದರು. ಹಾಗೆಯೇ ಇಂಗ್ಲೀಷ್ನಲ್ಲಿ ಕೂಡ ಪರಿಣತಿಯನ್ನು ಪಡೆಯಲು ಬಲ್ಲವರ ಸಹಾಯವನ್ನು ಪಡೆದು ಶೇಕ್ಸ್ಪಿಯರ್, ಟಾಗೋರ್ ಮುಂತಾದ ವಿಶ್ವಮಾನ್ಯರನ್ನು ಓದಿಕೊಂಡರು. ಸೇಡಿಯಾಪು ಕೃಷ್ಣಭಟ್ಟರ ಶಿಷ್ಯತ್ವವನ್ನು ಅವರು ಸ್ವೀಕರಿಸಿದ್ದು ಅವರ ಜ್ಞಾನದಾಹದ ಮತ್ತೊಂದು ಹೆಗ್ಗುರುತು. ಅವರಿಂದ ಹಳಗನ್ನಡ ಪಾಠಗಳನ್ನು ಹೇಳಿಸಿಕೊಂಡ ಏರ್ಯರು ತಮ್ಮೀ ಗುರುವನ್ನು ಸದಾಕಾಲ ಎದೆಯ ಗುಡಿಯಲ್ಲಿಟ್ಟು ಆರಾಧಿಸಿದವರು. ಸೇಡಿಯಾಪು ಕೃಷ್ಣಭಟ್ಟರ ಶತಮಾನೋತ್ಸವವನ್ನು ಬಂಟ್ವಾಳದಲ್ಲಿ ತಮ್ಮ ನೇತೃತ್ವದಲ್ಲಿ ಅತ್ಯಂತ ಸ್ಮರಣೀಯವಾಗಿ ಆಚರಿಸಿದ್ದ ಅವರು ಗುರುವಿಗೆ ಶ್ರದ್ಧೆಯ ಕಾಣಿಕೆಯನ್ನು ಸಲ್ಲಿಸಿದ್ದರು. ತಂದೆಯವರು ನಡೆಸುತ್ತಿದ್ದ ಪುರಾಣ…
ಮಂಗಳೂರು : ಯಕ್ಷಗಾನ ಕ್ಷೇತ್ರದ ವಿದ್ವಜ್ಜನ ಪಂಕ್ತಿ ಭಾಜನರಾಗಿದ್ದ ಮದ್ದಲೆಗಾರ ಬರ್ಗುಳ ಗೋಪಾಲಕೃಷ್ಣ ಕುರುಪ್ ದಿನಾಂಕ 19 ಮಾರ್ಚ್ 2025ರಂದು ನಿಧನರಾದರು. ಇವರಿಗೆ 90 ವರ್ಷ ವಯಸ್ಸಾಗಿತ್ತು. ಚೆಂಡೆ-ಮದ್ದಲೆ ನುಡಿತಗಳಲ್ಲಿ ಶಾಸ್ತ್ರಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಅಧಿಕೃತ ಪಠ್ಯರೂಪದಲ್ಲಿ ಪ್ರಕಟಿಸಿದ ಮೊದಲಿಗರಾಗಿದ್ದರು. ಅವರಿಗೆ ಭಾಗವತಿಕೆಯ ಬಗ್ಗೆಯೂ ಆಳವಾದ ಜ್ಞಾನವಿತ್ತು. 1952ರಲ್ಲಿ ಕೂಡ್ಲು ಮೇಳದಲ್ಲಿ ಪೂರ್ವರಂಗಕ್ಕೆ ಹಾಡುವ ಅವಕಾಶ ದೊರೆತು ಮದ್ಲೆಗಾರ ಕುದ್ರೆಕೂಡ್ಲು ರಾಮಭಟ್ಟರ ಮೆಚ್ಚುಗೆಗಳಿಸಿ, ಮುಂದೆ ವೃತ್ತಿಪರರಾಗಿ ಯಕ್ಷಗಾನ ಕ್ಷೇತ್ರವನ್ನು ಪ್ರವೇಶಿಸಿದ್ದರು. ಹಿರಿಯ ಬಲಿಪ ನಾರಾಯಣ ಭಾಗವತ, ಹಿರಿಯ ಅಗರಿ ಶ್ರೀನಿವಾಸ ಭಾಗವತ, ಹಿರಿಯ ಕುದ್ರೆಕೂಡ್ಲು ರಾಮ ಭಟ್ಟ, ನಾಂಬಾಡಿ ಸುಬ್ಬಯ ಶೆಟ್ಟಿ, ನೆಡ್ಲೆ ನರಸಿಂಹ ಭಟ್ಟ ಮೊದಲಾದವರ ಗುರುತ್ವದಲ್ಲಿ ಜ್ಞಾನವನ್ನು ಸಿದ್ಧಿಸಿಕೊಂಡು, ಅದೇ ಶ್ರದ್ಧೆಯಲ್ಲಿ ಗುರುಗಳಾಗಿ ಅನೇಕ ಮಂದಿ ಶಿಷ್ಯರನ್ನು ಸಿದ್ಧಗೊಳಿಸಿದ್ದರು. ಮೃದಂಗ ವಿದ್ವಾನ್ ಟಿ. ಆರ್. ಕೃಷ್ಣನ್ರಲ್ಲಿ ಮೃದಂಗ ನುಡಿತದ ಸೂಕ್ಷ್ಮಗಳನ್ನು ಕಲಿತಿದ್ದ ಇವರು ಅನೇಕ ಯಕ್ಷಗಾನ ಕಮ್ಮಟಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. 80ರ ದಶಕದಲ್ಲಿ ಕು. ಶಿ.…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇವುಗಳ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ಕವನ ಸಂಕಲನ ‘ತಂಬೂರಿ’ ಮತ್ತು ನಾಟಕ ‘ಕಾಯ ತಂಬೂರಿ’ ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 21 ಮಾರ್ಚ್ 2025ರಂದು ಸಂಜೆ ಗಂಟೆ 5-45ಕ್ಕೆ ಉಡುಪಿಯ ಕುಂಜಿಬೆಟ್ಟು, ಸುನಾಗ್ ಆಸ್ಪತ್ರೆ ಹತ್ತಿರ ಏಡನ್ ಇನ್ ಹೋಂ ಸ್ಟೇ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಪ್ರಸಿದ್ಧ ಕವಿಗಳಾದ ಎಚ್. ದುಂಡಿರಾಜ್ ಇವರು ಕೃತಿ ಅನಾವರಣ ಮಾಡಲಿದ್ದು, ಉಡುಪಿಯ ಪ್ರಸಿದ್ಧ ವಿಮರ್ಶಕರಾದ ಪ್ರೊ ಮುರಳೀಧರ ಉಪಾಧ್ಯ ಹಿರಿಯಡ್ಕ ಇವರು ಸಭಾಧ್ಯಕ್ಷತೆ ವಹಿಸಲಿರುವರು. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಶಂಕರ್ ಮತ್ತು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ರವಿರಾಜ್ ಎಚ್.ಪಿ. ಇವರುಗಳು ಭಾಗವಹಿಸಲಿರುವರು.
ಮೈಸೂರು : ಬಿ.ಜಿ.ಎಸ್.ಬಿ.ಇಡಿ. ಕಾಲೇಜು ಕುವೆಂಪುನಗರ ಮೈಸೂರು ಇವರ ವತಿಯಿಂದ ನಿರಂತರ ಫೌಂಡೇಶನ್ (ರಿ.) ಮೈಸೂರು ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರು ರಚಿಸಿರುವ ‘ಕೃಷ್ಣೇಗೌಡನ ಆನೆ’ ನಾಟಕ ಪ್ರದರ್ಶನವನ್ನು ದಿನಾಂಕ 21 ಮಾರ್ಚ್ 2025ರಂದು ಅಪರಾಹ್ನ 3-00 ಗಂಟೆಗೆ ಬಿ.ಜಿ.ಎಸ್.ಬಿ.ಇಡಿ. ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜೀವನ್ ಕುಮಾರ್ ಬಿ. ಹೆಗ್ಗೋಡು ಇವರು ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಇದರ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಮಾರ್ಚ್ ತಿಂಗಳ ಕಾರ್ಯಕ್ರಮದಲ್ಲಿ ಡಾ. ರಮಾಕಾಂತ್ ಶೆಣೈ ಮೈಸೂರು ಇವರಿಂದ ‘ವಿಷ್ಣು ಸಹಸ್ರನಾಮ’ದ ಬಗ್ಗೆ ಪ್ರವಚನ ಹಾಗೂ ಕುಂದಾಪುರದ ಕುಮಾರಿ ದೀಕ್ಷಾ ಪೈ ಮತ್ತು ಕುಮಾರಿ ಪ್ರೇಕ್ಷಾ ಪೈ ಸಹೋದರಿಯರಿಂದ ‘ಭಕ್ತಿ ಸಂಗೀತ’ ಕಾರ್ಯಕ್ರಮವು ದಿನಾಂಕ 23 ಮಾರ್ಚ್ 2025ರಂದು ಸಂಜೆ ಗಂಟೆ 4-00ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆಯಲಿದೆ.
ಸಾಲಿಗ್ರಾಮ : 52 ವರ್ಷಗಳಿಂದ ಯಕ್ಷಗಾನ ತರಬೇತಿ ನಡೆಸುತ್ತಾ, ಯಕ್ಷಗಾನ ರಂಗಕ್ಕೆ 3 ಸಾವಿರಕ್ಕೂ ಅಧಿಕ ಕಲಾವಿದರನ್ನು ನೀಡಿರುವ, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ ನಡೆಸುವ ಯಕ್ಷ ಗುರುಕುಲ ಪದ್ಧತಿ ವಸತಿ ಶಾಲೆಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ‘ಶಿಕ್ಷಣದೊಂದಿಗೆ ಯಕ್ಷಗಾನ’ ಧ್ಯೇಯದೊಂದಿಗೆ ಸ್ಥಾಪಿಸಲ್ಪಟ್ಟಿರುವ ಈ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗೆ ಬಾಲಕರಿಗೆ ಪ್ರವೇಶ ನೀಡಲಾಗುವುದು. ಅವಕಾಶ ಪಡೆದವರಿಗೆ ಹತ್ತಿರದ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದು. ಉಚಿತ ಊಟ, ಉಪಾಹಾರ, ವಸತಿ ವ್ಯವಸ್ಥೆಯೊಂದಿಗೆ ಯಕ್ಷಗಾನ ಭಾಗವತಿಕೆ, ಮದ್ದಲೆ, ಚೆಂಡೆ, ನೃತ್ಯ ಶಿಕ್ಷಣ ನೀಡಲಾಗುವುದು. ಗುರುಕುಲ ಪದ್ಧತಿಯಂತೆ ನಡೆಸುವ ಈ ಶಾಲೆಗೆ ಸೇರ ಬಯಸುವವರು ಮಾರ್ಚ್ 30ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಅಥವಾ ಅರ್ಜಿಯನ್ನು ಕಾರ್ಯದರ್ಶಿ, ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಅಂಚೆ, ಐರೋಡಿ 576226, ಉಡುಪಿ ತಾಲೂಕು ಮತ್ತು ಜಿಲ್ಲೆ ಇವರಿಗೆ ಕಳುಹಿಸಬಹುದು. ಮಾಹಿತಿಗೆ 9880605610 ಸಂಪರ್ಕಿಸಬಹುದು ಎಂದು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ತಿಳಿಸಿದ್ದಾರೆ.