Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಉಡುಪಿ ಡಿ. ವೈ. ಎಸ್ಪಿ.ಯಾದ ಡಿ. ಟಿ. ಪ್ರಭು ಇವರ ಪುತ್ರಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಪ್ರಿಯದರ್ಶಿನಿ ಪಿ. ವಿರಚಿತ `ಕೀಕಾ’ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 12-07-2024ನೇ ಶುಕ್ರವಾರದಂದು ಉಡುಪಿಯ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ “ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸಬೇಕು. ಈಚಿನ ದಿನಗಳಲ್ಲಿ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಓದುವವರ ಸಂಖ್ಯೆ ವಿರಳವಾಗಿದೆ. ಆದ್ದರಿಂದ ಓದಿನ ಹವ್ಯಾಸ ಹೆಚ್ಚಿಸುವ ಕಾರ್ಯಕ್ರಮ ಆಯೋಜಿಸಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿನಿಯಾದರೂ ಪ್ರಿಯದರ್ಶಿನಿ ಅವರು ಈ ಪುಸ್ತಕದಲ್ಲಿ ಪರಿಸರ, ಸ್ವಾತಂತ್ರ್ಯ ಹೋರಾಟ, ಹೆಚ್ಚಾಗಿ ರಾಣಾ ಪ್ರತಾಪಸಿಂಹ ಬಗೆಗೆ ಅನೇಕರಿಗೆ ಗೊತ್ತಿಲ್ಲದ ವಿಚಾರಗಳನ್ನು ದಾಖಲಿಸಿದ್ದಾರೆ. ಇದು ಶಿಕ್ಷಕ ಕೈಪಿಡಿಯಾಗಲು ಯೋಗ್ಯವಾಗಿದೆ.” ಎಂದರು. ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಹಾಸ್ಯ ಸಾಹಿತಿ ಶಾಂತರಾಜ ಐತಾಳ್ ಮಾತನಾಡಿ “ಮೊಬೈಲ್ ಯುಗದಲ್ಲಿ ಜನರಿಗೆ ಓದಿನ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ.” ಎಂದು ವಿಷಾದಿಸಿದರು.…
ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ತೀರ್ಥಹಳ್ಳಿಯ ಇಂದಿರಾ ನಗರದ ಸ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕಥೆ, ಕವನ ಹಾಗೂ ಪ್ರಬಂಧ ರಚನಾ ಕಮ್ಮಟವು ದಿನಾಂಕ 13-07-2024ರಂದು ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ. ಸಾ. ಪ. ಅಧ್ಯಕ್ಷ ಟಿ. ಕೆ. ರಮೇಶ್ ಶೆಟ್ಟಿ ಉದ್ಘಾಟಿಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆಯಾದ ರೇಣುಕಾ ಹೆಗ್ಡೆ, ಕ. ಸಾ. ಪ. ಕಾರ್ಯದರ್ಶಿ ಗಾಯತ್ರಿ ಶೇಷಗಿರಿ, ಮುಖ್ಯೋಪಾಧ್ಯಾಯನಿ ಕುಸುಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲೇಶ್ ಹೆಗಡೆ ಮತ್ತು ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು. ನಿವೃತ್ತಿ ಶಿಕ್ಷಕಿ ಸುಧೀಷ್ಣ ಕುಮಾರಿ, ಗಾಯತ್ರಿ ಶೇಷಗಿರಿ, ಶಿಕ್ಷಕಿ ಸುರೇಖಾ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಪರಿಣಾಮಕಾರಿಯಾಗಿ ಕಮ್ಮಟ ನಡೆಸಿಕೊಟ್ಟರು.
ಉಡುಪಿ : ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು (ರಿ.), ಉಡುಪಿ ಇದರ ವತಿಯಿಂದ ಡಾ. ನಿ. ಮುರಾರಿ ಬಲ್ಲಾಳ್ ಮತ್ತು ಪ್ರೊ. ಕೆ.ಎಸ್. ಕೆದ್ಲಾಯ ನೆನಪಿನ ‘ಮುರಾರಿ-ಕೆದ್ಲಾಯ ರಂಗೋತ್ಸವ’ವನ್ನು ದಿನಾಂಕ 19-07-2024ರಿಂದ 21-07-2024ರಂದು ಪ್ರತಿದಿನ ಗಂಟೆ 6-30ಕ್ಕೆ ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವು ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ದಿನಾಂಕ 19-07-2024ರಂದು ಮಂಗಳೂರಿನ ಹಿರಿಯ ರಂಗಕರ್ಮಿ ಶ್ರೀ ಪ್ರಭಾಕರ ಕಾಪಿಕಾಡ್ ಇವರು ಉದ್ಘಾಟಿಸಲಿದ್ದು, ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ದಿನಾಂಕ 19-07-2024ರಂದು ರೋಹಿತ್ ಎಸ್. ಬೈಕಾಡಿ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಣಿಪಾಲದ ಸಂಗಮ ಕಲಾವಿದೆರ್ ಇವರು ಅಭಿನಯಿಸುವ ನಾಟಕ ‘ಮೃತ್ಯುಂಜಯ’, ದಿನಾಂಕ 20-07-2024ರಂದು ಅರುಣ್ ಲಾಲ್ ಕೇರಳ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಗಳೂರಿನ ಅಸ್ತಿತ್ವ (ರಿ.) ತಂಡದವರು ಅಭಿನಯಿಸುವ ನಾಟಕ ‘ಮತ್ತಾಯ’ ಮತ್ತು ದಿನಾಂಕ 21-07-2024ರಂದು ಸಂತೋಷ್ ನಾಯಕ್ ಪಟ್ಲ…
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಇದರ ಸಹಯೋಗದಲ್ಲಿ ದಿನಾಂಕ 17-07-2024ರಂದು ಬೆಳಗ್ಗೆ ಗಂಟೆ 10-00ಕ್ಕೆ ಮಂಗಳೂರಿನ ಲಾಲ್ಬಾಗ್ ಬಳಿಯ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್ನಲ್ಲಿ ‘ಸೋನೆ ಮಳೆ- ಹಸಿರು ಇಳೆ’ ಕವಿಗೋಷ್ಠಿ ಏರ್ಪಡಿಸಲಾಗಿದೆ. ಆಸಕ್ತ ಕವಿಗಳು ಕವಿಗೋಷ್ಠಿಯ ಸಂಯೋಜಕ ಡಾ. ಸುರೇಶ್ ನೆಗಳಗುಳಿ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ಅ.ಭಾ.ಸಾ.ಪ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ತಿಳಿಸಿದ್ದಾರೆ.
ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು, ಪುತ್ತೂರು ಇದರ ವಿಂಶತಿ ಸಂಭ್ರಮದ ಸರಣಿ ತಾಳಮದ್ದಳೆಯ ಎರಡನೇಯ ಕೂಟವು ದಿನಾಂಕ 12-07-2024ರಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆವರಣದಲ್ಲಿ ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಸ್ಯಮಂತಕ ಮಣಿ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೇನೇರಂಕಿ ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪದ್ಯಾಣ ಶಂಕರ ನಾರಾಯಣ ಭಟ್, ಮೋಹನ್ ಶರವೂರು, ಅಚ್ಚುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ, ಶುಭಾ ಜೆ.ಸಿ.ಅಡಿಗ (ಶ್ರೀ ಕೃಷ್ಣ), ಕಿಶೋರಿ ದುಗ್ಗಪ್ಪ ನಡುಗಲ್ಲು (ಜಾಂಬವ), ಹರಿಣಾಕ್ಷಿ ಜೆ. ಶೆಟ್ಟಿ (ಬಲರಾಮ) ಮನೋರಮ ಜಿ. ಭಟ್ (ನಾರದ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ, ಶಿವನಾಥ ರೈ ಮೇಗಿನಗುತ್ತು ವಂದಿಸಿದರು. ದೇವಳದ ಅರ್ಚಕ ಶ್ರೀರಾಮ ಕಲ್ಲೂರಾಯ ಪ್ರಾಯೋಜಿಸಿದರು. ದುಗ್ಗಪ್ಪ ನಡುಗಲ್ಲು, ತಾರಾನಾಥ ಸವಣೂರು ಸಹಕರಿಸಿದರು. ಶ್ರೀ ದೇವಳದ…
ಕುಪ್ಪಳ್ಳಿ : ಬಿ. ನಾಗೇಶ್ ನೇತೃತ್ವದ ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.) ಕಾಸರಗೋಡು ಇವುಗಳ ಸಹಯೋಗದೊಂದಿಗೆ ‘ಸಾಹಿತ್ಯ ಗಾನ ನೃತ್ಯ ವೈಭವ’ ಕಾರ್ಯಕ್ರಮವನ್ನು ದಿನಾಂಕ 21-07-2024ರಂದು ಬೆಳಿಗ್ಗೆ ಗಂಟೆ 9-30 ಕ್ಕೆ ಕುಪ್ಪಳ್ಳಿಯ ಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪುರವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯ, ಸಾಂಸ್ಕೃತಿಕ, ಪುಸ್ತಕ ಬಿಡುಗಡೆ ಮತ್ತು ಕವಿಗೋಷ್ಠಿಗಳನ್ನು ಆಯೋಜಿಸಲಾಗಿದೆ.
ಉಡುಪಿ : ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಯಕ್ಷಶಿಕ್ಷಣ-2024ರ ಅಭಿಯಾನವು ದಿನಾಂಕ 11-07-2024ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ “ನಮ್ಮ ಮೂರನೇ ಪರ್ಯಾಯದಲ್ಲಿ ಆರಂಭಗೊಂಡ ಯಕ್ಷಶಿಕ್ಷಣ ಅಭಿಯಾನ, ಕಳೆದ 16 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಾ, ಪ್ರಕೃತ ನಾಲ್ಕು ವಿಧಾನಸಭಾ ಕ್ಷೇತ್ರಗಳ 92 ಪ್ರೌಢಶಾಲೆಗಳಿಗೆ ವಿಸ್ತರಣೆಗೊಂಡಿರುವುದು ಅತ್ಯಂತ ಸ್ತುತ್ಯರ್ಹ. ಯಕ್ಷಗಾನದಿಂದ ವ್ಯಕ್ತಿಯ ಪರಿಪೂರ್ಣ ವಿಕಸನ ಸಾಧ್ಯ. ಅಂತಹ ಅಪೂರ್ವ ಕಲೆಯನ್ನು ಪ್ರೌಢ ವಿದ್ಯಾರ್ಥಿಗಳಿಗೆ ಕಲಿಸುವುದು ಅತ್ಯಂತ ಪ್ರಶಂಸನೀಯ ಕಾರ್ಯ” ಎಂದು ನುಡಿದರು. ಉಡುಪಿ ಶಾಸಕರೂ, ಯಕ್ಷಶಿಕ್ಷಣ ಅಧ್ಯಕ್ಷರೂ ಆದ ಯಶ್ಪಾ ಲ್ ಎ. ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕರೂ ಟ್ರಸ್ಟಿನ ಸ್ಥಾಪಕಾಧ್ಯಕ್ಷರೂ ಆದ ಕೆ. ರಘುಪತಿ…
ತುಮಕೂರು : ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕವಿತಾಕೃಷ್ಣ ಸಾಹಿತ್ಯ ಮಂದಿರ ಬಳಗ ತುಮಕೂರು ಇವರುಗಳ ಸಹಯೋಗದಲ್ಲಿ 36 ಕೃತಿಗಳ ಲೋಕಾರ್ಪಣೆ ಮತ್ತು ಕವಿತಾಕೃಷ್ಣ ನುಡಿನಮನ ಕಾರ್ಯಕ್ರಮವು ದಿನಾಂಕ 13-07-2024ರಂದು ಬೆಳಿಗ್ಗೆ 10.30ಕ್ಕೆ ತುಮಕೂರಿನ ಕೌತಮಾರನಹಳ್ಳಿಯ ಆಕಾಶ್ ಫಾರ್ಮ್ ನಲ್ಲಿ ನಡೆಯಲಿದೆ. ಜಿಲ್ಲಾ ಕ. ಸಾ. ಪ. ಅಧ್ಯಕ್ಷರಾದ ಶ್ರೀ ಕೆ. ಎಸ್. ಸಿದ್ಧಲಿಂಗಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಪತ್ರಿಕೋದ್ಯಮಿಗಳಾದ ಶ್ರೀ ಎಸ್. ನಾಗಣ್ಣ ಉದ್ಘಾಟಿಸಲಿದ್ದು, 36 ಕೃತಿಗಳನ್ನು ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಾನಸ ಲೋಕಾರ್ಪಣೆಗೊಳಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೇಖಕರಾದ ಶ್ರೀಮತಿ ಬಾ. ಹ. ರಮಾಕುಮಾರಿ, ಗಾಂಧೀತತ್ವ ಪ್ರಚಾರಕರಾದ ಶ್ರೀ ಎಂ. ಬಸವಯ್ಯ, ಶ್ರೀಮತಿ ನಾಗರತ್ನಮ್ಮ ಕವಿತಾಕೃಷ್ಣ (ಶ್ರೀ ಕವಿತಾಕೃಷ್ಣರ ಧರ್ಮಪತ್ನಿ) ಸಾಹಿತ್ಯ ಸಂಘಟಕರಾದ ಶ್ರೀ ಟಿ. ಆರ್. ಎಚ್. ಪ್ರಕಾಶ್ ಹಾಗೂ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಇದರ ಪ್ರಕಾಶಕರಾದ ಶ್ರೀ ಕೆಂಪಣ್ಣ ಭಾಗವಹಿಸಲಿದ್ದಾರೆ.
ಪುತ್ತೂರು : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಉಜಿರೆ ಆಯೋಜಿಸಿದ್ದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ ದಿನಾಂಕ 07-07-2024ರಂದು ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ “ಯಕ್ಷಗಾನ ಬಯಲಾಟಗಳು ಮನಸ್ಸಿಗೆ ಮೋದವನ್ನು ನೀಡಿದರೆ, ತಾಳಮದ್ದಳೆಯು ಬುದ್ದಿಗೆ ಗ್ರಾಸವನ್ನು ಒದಗಿಸುತ್ತದೆ. ಭಾಷಾಶುದ್ಧತೆ, ಪುರಾಣ ಜ್ಞಾನ, ಅಂದವಾಗಿ ಮಾತನಾಡುವ ಶಕ್ತಿ, ಗ್ರಹಿಕಾ ಸಾಮರ್ಥ್ಯ ಮತ್ತು ಬದುಕಿಗೆ ಬೇಕಾದ ಸಂದೇಶಗಳನ್ನು ಯಕ್ಷಗಾನವು ಒದಗಿಸುತ್ತದೆ. ಅಕ್ಷರಾಭ್ಯಾಸ ಇಲ್ಲದವರೂ ಆಟ-ಕೂಟಗಳನ್ನು ನೋಡಿಯೇ ಪುರಾಣ ಜ್ಞಾನವನ್ನು ಪಡೆದವರಿದ್ದಾರೆ. ಅದು ಯಕ್ಷಗಾನದ ಶಕ್ತಿ. ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭದಲ್ಲಿ ಹಿಂದಿನಿಂದಲೂ ತಾಳಮದ್ದಳೆಯು ಆರಾಧನೆಯ ರೂಪದಲ್ಲಿ ನಡೆಯುತ್ತದೆ.” ಎಂದರು. ಈ ಸಂದರ್ಭದಲ್ಲಿ ಪದ್ಯಾಣ ಮನೆತನದ ಹಿರಿಯ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ‘ಪದ್ಯಾಣ ಪ್ರಶಸ್ತಿ’ಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ…
ಪುತ್ತೂರು : ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮವು ದಿನಾಂಕ 10 -07-2024 ರಂದು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕಲಾವಿದ ಹಾಗೂ ಲೇಖಕರಾದ ನಾ. ಕಾರಂತ ಪೆರಾಜೆ ಮಾತನಾಡಿ “ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ಎಲ್ಲೂ ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಮಾಡಬೇಕಾದ ಕಾಯಕವಾಗಿದೆ. ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕ ಕಳೆದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು. ಯಕ್ಷಗಾನ ಹಿಮ್ಮೇಳದ ಕಲಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ ಹಾಗೂ ವೇಷಧಾರಿಯಾದ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ದೀಪಪ್ರಜ್ವಲಿಸುವ ಮೂಲಕ…