Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ‘ಟಿ. ಗಿರಿಜಾ ದತ್ತಿ ಪುರಸ್ಕಾರ’ಕ್ಕೆ ಖ್ಯಾತ ವಿಜ್ಞಾನ ಬರಹಗಾರರು ಮತ್ತು ಜವಹರಲಾಲ್ ನೆಹರು ತಾರಾಲಯದ ನಿವೃತ್ತ ನಿರ್ದೇಶಕರೂ ಆದ ಡಾ. ಬಿ.ಎಸ್. ಶೈಲಜ ಇವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶ್ರೀಮತಿ ಟಿ.ಎಸ್. ಶೈಲಜ ಇವರು ಸೂಕ್ಷ್ಮ ಸಂವೇದನಾಶೀಲ ಬರಹಗಾರ್ತಿ ಟಿ. ಗಿರಿಜಾ ಇವರ ಹೆಸರಿನಲ್ಲಿ ದತ್ತಿ ಸ್ಥಾಪಿಸಿದ್ದು ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಲೇಖಕಿಯವರಿಗೆ ಈ ಗೌರವ ಸಲ್ಲುತ್ತದೆ. ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದಲ್ಲಿ ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿದಾನಿಗಳ ಪರವಾಗಿ ಅರುಂಧತಿ ರಮೇಶ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ಎಂ. ಪಟೇಲ್ ಪಾಂಡು, ಎಚ್.ಬಿ. ಮದನ ಗೌಡ, ಗೌರವ ಕೋಶಾಧ್ಯಕ್ಷರಾದ ಡಿ.ಆರ್. ವಿಜಯ ಕುಮಾರ್ ಭಾಗವಹಿಸಿದ್ದರು. 2025ನೆಯ ಸಾಲಿನ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಡಾ. ಬಿ.ಎಸ್. ಶೈಲಜ ಇವರು ಕನ್ನಡದ ಮಹತ್ವದ ಬರಹಗಾರ ಬ.ನ. ಸುಂದರರಾಯರ ಮಗಳು. ಭಾರತೀಯ ಭೌತ…
ಮಂಗಳೂರು : ಸುರತ್ಕಲ್ ನ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಆಯೋಜಿಸಿದ್ದ ಪ್ರಸಿದ್ಧ ಸಂಶೋಧಕ, ಸಾಹಿತಿ ಡಾ. ಕೆ.ಜಿ. ವಸಂತ ಮಾಧವ ಇವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 22 ಸೆಪ್ಟೆಂಬರ್ 2025ರಂದು ಸಾಹಿತಿ ಇಂದಿರಾ ಹೆಗ್ಗಡೆಯವರ ನಿವಾಸದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಸ್ಥಾಪಕ ಇತಿಹಾಸ ತಜ್ಞ ಡಾ. ತುಕಾರಾಮ್ ಪೂಜಾರಿ ಇವರು ಮಾತನಾಡಿ “ನಮ್ಮ ನಾಡಿನ ಶ್ರೇಷ್ಠ ಇತಿಹಾಸಗಾರರಾಗಿರುವ ಡಾ. ವಸಂತ ಮಾಧವ ಕೆ.ಜಿ.ಯವರು ಇತಿಹಾಸ ಸಂಶೋಧನೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡವರು. ಕರಾವಳಿ ಕರ್ನಾಟಕದ ಇತಿಹಾಸದ ಅಧ್ಯಯನಕ್ಕೆ ಬೇಕಾದ ಆಕರಗಳು ವೈಜ್ಞಾನಿಕವಾಗಿ ಕ್ರೋಡೀಕೃತವಾಗಲು ಶ್ರಮಿಸಿದವರು. ಇತಿಹಾಸಗಾರರ ಅವಜ್ಞೆ ಪ್ರಸ್ತುತ ಸಂದರ್ಭದಲ್ಲಿ ನಡೆಯುತ್ತಿದ್ದು, ಅವರ ಕಾರ್ಯಗಳನ್ನು ಗುರುತಿಸುವ ಕಾರ್ಯ ನಡೆಯಬೇಕು” ಎಂದು ನುಡಿದರು. ಸಂಶೋಧಕ ಬೆನೆಟ್ ಅಮನ್ನ ಮಾತನಾಡಿ “ವಸಂತ ಮಾಧವರ ಸಂಶೋಧನಾ ಆಸಕ್ತಿ ಅವರ ಕೃತಿ ಸಂಗ್ರಹ ಅನನ್ಯವಾಗಿದ್ದು, ಅದನ್ನು ಉಳಿಸಿಕೊಂಡು ಮುಂದಿನ ತಲೆಮಾರಿಗೆ ವರ್ಗಾವಣೆ ಮಾಡುವ ಹೊಣೆಗಾರಿಕೆ ಸಮಾಜದ್ದಾಗಿದೆ”…
ದಾವಣಗೆರೆ : ದಾವಣಗೆರೆ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತು, ಯಕ್ಷರಂಗ ಯಕ್ಷಗಾನ ಸಂಘ, ಜಿಲ್ಲಾ ಬ್ಯಾಂಕ್ ನೌಕರರ ಸಂಘಗಳ ಜಂಟಿ ಆಶ್ರಯದಲ್ಲಿ ಮಕ್ಕಳ ಮೇಳದ ಪ್ರಾಕ್ತನ ಕಲಾವಿದ ರಾಘವೇಂದ್ರ ನಾಯರಿಯವರು ಆಯೋಜಿಸಿದ ಸಾಲಿಗ್ರಾಮ ಮಕ್ಕಳ ಮೇಳದ ಐವತ್ತರ ಸಂಭ್ರಮದ ‘ಸುವರ್ಣ ಪರ್ವ 13’ರ ಕಾರ್ಯಕ್ರಮವು ದಿನಾಂಕ 21 ಸೆಪ್ಟೆಂಬರ್ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ಇವರು ಮಾತನಾಡಿ “ನಾಡಿನ ಹೆಮ್ಮೆಯ ಕಲೆಯಾದ ಯಕ್ಷಗಾನ ಕಲೆಗೆ 800 ವರ್ಷಗಳ ಭವ್ಯವಾದ ಪರಂಪರೆಯಿದೆ. ಸಾಹಿತ್ಯ, ಸಂಗೀತ, ನೃತ್ಯ, ಮಾತುಗಾರಿಕೆ, ಅಭಿನಯ ಇವೆಲ್ಲವನ್ನೂ ಒಳಗೊಂಡ ಯಕ್ಷಗಾನ ಕಲೆಗೆ ಮಾನವೀಯ ಸಂಬಂಧಗಳನ್ನು ಗಟ್ಟಿಯಾಗಿ ಬೆಸೆಯುವ ಶಕ್ತಿಯಿದೆ. ಒಬ್ಬ ವ್ಯಕ್ತಿಯೇ 50 ವರ್ಷಗಳನ್ನು ಪೂರ್ಣಗೊಳಿಸುವುದ ಕಷ್ಟಸಾಧ್ಯವಾದ ದುಷ್ಕಾಲದಲ್ಲಿ ನಾವಿದ್ದೇವೆ. ಅಂತದ್ದರಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕದ್ವಯರಾದ ಕಾರ್ಕಡ ಶ್ರೀನಿವಾಸ ಉಡುಪ ಹಾಗೂ ಹೆಚ್. ಶ್ರೀಧರ ಹಂದೆಯವರು 1975ರಲ್ಲಿ ಸ್ಥಾಪಿಸಿದ ಸಾಲಿಗ್ರಾಮ ಮಕ್ಕಳ ಮೇಳವು ಯಕ್ಷಗಾನದ…
ಹಾಸನ : ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಇದರ ತಾಲೂಕು ಘಟಕ ಹಾಸನ ಹಾಗೂ ಹಾಸನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ‘ಹಾಸನ ದಸರಾ ಕವಿಗೋಷ್ಠಿ’ಯು ದಿನಾಂಕ 21 ಸೆಪ್ಟೆಂಬರ್ 2025ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಪ್ರೊ. ಸೈಯದ್ ಶಹಬುದ್ದೀನ್ “ಧರ್ಮಾಂಧತೆಯ ಮಡುವಿನಲ್ಲಿ ನಲುಗುತ್ತಿರುವ ಜನತೆಗೆ ಕುವೆಂಪುರವರ ಚಿಂತನೆಗಳು ದಾರಿದೀಪವಾಗಿವೆ. ಇಂದಿನ ತಲೆಮಾರು ಕುವೆಂಪುರವರನ್ನು ಓದಿಕೊಳ್ಳುವ ಜರೂರಿದೆ. ಕಳೆದ ಏಳೆಂಟು ವರ್ಷಗಳ ಹಿಂದೆ ಪ್ರಾರಂಭವಾದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನದಿಂದ ಪ್ರಾರಂಭವಾಗಿ ಪ್ರಸ್ತುತ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಗುಣಾತ್ಮಕ ಕಾರ್ಯಕ್ರಮಗಳನ್ನು ಮಾಡುತ್ತಾ ಎಲೆಮರೆಕಾಯಿಯಂತಹ ಸಾಧಕರನ್ನು ಗುರುತಿಸಿ ಮುನ್ನೆಲೆಗೆ ತರುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಸಾಹಿತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ದೃಷ್ಠಿಕೋನದಲ್ಲಿ ಸಾಹಿತ್ಯ ರಚಿಸಬೇಕು” ಎಂದು ಅಭಿಪ್ರಾಯಪಟ್ಟರು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್…
ಮೈಸೂರು : ಅರಮನೆ ಆವರಣದಲ್ಲಿ ದಿನಾಂಕ 22 ಸೆಪ್ಟೆಂಬರ್ 2025ರಂದು ನಡೆದ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯಲ್ಲಿ ‘ಸಂಗೀತ ವಿದ್ವಾನ್ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು. ಸಿ.ಎಂ. ಸಿದ್ದರಾಮಯ್ಯ ಇವರಿಂದ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಿರಿಯ ಹಿಂದೂಸ್ತಾನಿ ಸಂಗೀತ ವಿದ್ವಾಂಸ ವೆಂಕಟೇಶ ಕುಮಾರ್ “ಎಂತಹ ಸಂದರ್ಭದಲ್ಲಿಯೂ ಜಾತಿ ನೋಡುವುದು ತಪ್ಪು, ತಮ್ಮ ಗುರುಗಳು ತಮ್ಮಂತಹವರನ್ನು ಇದೇ ರೀತಿ ನೋಡಿ, ಹಳ್ಳಿಯಿಂದ ದಿಲ್ಲಿಗೆ ಕಳುಹಿಸಿದ್ದಾರೆ. ನಾನು ಹಾಡುವವರು, ಮಾತನಾಡುವವನಲ್ಲ. ಆದರೂ ಪ್ರಶಸ್ತಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಾತನಾಡಬೇಕಾಗಿ ಬಂದಿದೆ. ಈ ಹಿಂದೆಲ್ಲ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷನಾಗಿದ್ದಾಗ ನನಗೆ ಯಾವಾಗ ಪ್ರಶಸ್ತಿ ಬರುತ್ತದೆ ಎಂದು ಹಾಸ್ಯ ಮಾಡುತ್ತ ಪ್ರಶ್ನಿಸಿದ್ದೆ. ಆದರೆ ಈಗ ತಾನಾಗಿಯೇ ಒಲಿದು ಬಂದಿದೆ. ಇದರೊಡನೆ ಸುಮಾರು 40 ವರ್ಷ ಹಿಂದೆ ಅರಮನೆಯೊಳಗೆ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದೆ. ಈಗ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೌರವ ಸಂದಿರುವುದು ಅಂದಿನ ಸೇವೆಗೆ ಈಗ ದೊರೆತ ಸತ್ಕಾರ ಎಂದು ಭಾವಿಸುತ್ತೇನೆ” ಎಂದರು. ಬಳಿಕ ಕನಕದಾಸರ…
ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025ರ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ದಿನಾಂಕ 25 ಸೆಪ್ಟೆಂಬರ್ 2025ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು, ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ ರಾಜ್ಯ, ಕಾಸರಗೋಡು ಮೊದಲಾದ ಕಡೆಗಳಲ್ಲಿ ಕವನ, ಚುಟುಕು ವಾಚನಗಳನ್ನು ಮಾಡಿದುದಲ್ಲದೇ ಮಂಗಳೂರು, ಮಡಿಕೇರಿ ಆಕಾಶವಾಣಿಗಳಲ್ಲೂ ಕವನ ವಾಚಿಸಿದ್ದರು. ಈಗಾಗಲೇ ಇವರ “ಮೌನವನು ಮುರಿದಾಗ” ಎಂಬ ಕವನ ಸಂಕಲನ ಲೋಕರ್ಪಣೆಗೊಂಡಿದ್ದು, “ಜೀವನ ಪಯಣ” ಕವನ ಸಂಕಲನ ಪ್ರಕಟಣಾ ಹಂತದಲ್ಲಿದೆ. ಇವರು ಪದ್ಮಯ್ಯ ಗೌಡ ಕುರುಂಜಿ ಮತ್ತು ಸೀತಮ್ಮ ಕುರುಂಜಿ ದಂಪತಿಗಳ ಪುತ್ರಿ ಪುತ್ರಿಯಾಗಿದ್ದು , ಕೆ. ವಿ. ಜಿ. ಪಾಲಿಟೆಕ್ನಿಕ್ ಇಲ್ಲಿನ ಶಿಕ್ಷಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಚಂದ್ರಶೇಖರ ಬಿಳಿನೆಲೆಯವರ…
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್, ಮಯೂರಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ್ದ 5ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 22 ಸೆಪ್ಟೆಂಬರ್ 2025 ರಂದು ಮಂಗಳೂರಿನ ತುಳುಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಹುಭಾಷಾ ಕವಿ ವಿಲ್ಸನ್ ಕಟೀಲು ಮಾತನಾಡಿ “ಕವಿಗಳಿಗೆ ಬರವಣಿಗೆಗೆ ವಿಪುಲ ಅವಕಾಶಗಳು ಇವೆ. ಆದರೆ, ಬರಹಗಾರನು ಸಾಮಾಜಿಕ ಜವಾಬ್ದಾರಿಯ ಧ್ವನಿಯಾಗಿ, ಶೋಷಣೆಯ ವಿರುದ್ಧ ಬರೆದಾಗ ಒಳ್ಳೆಯ ಕವಿತೆ ಸೃಷ್ಟಿಯಾಗಲು ಸಾಧ್ಯ” ಎಂದು ಹೇಳಿದರು. ಸಾಹಿತಿ ಮಲಾರ್ ಜಯರಾಮ್ ರೈ ಅಧ್ಯಕ್ಷತೆ ವಹಿಸಿದ್ದರು. ಮಯೂರಿ ಫೌಂಡೇಶನ್ ಇದರ ಅಧ್ಯಕ್ಷರಾದ ಜಯ ಕೆ. ಶೆಟ್ಟಿ ಮುಂಬೈ, ತುಳು ಪರಿಷತ್ ಇದರ ಅಧ್ಯಕ್ಷರಾದ ಶುಭೋದಯ ಆಳ್ವ, ಮಂಗಳೂರು ತಾಲ್ಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆಯಾದ ಚಂಚಲಾ ತೇಜೊಮಯ ಹಾಗೂ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ. ಸಿ. ಭಂಡಾರಿ ಉಪಸ್ಥಿತರಿದ್ದರು. ಕವಿಗಳು ಕವಿತೆ ವಾಚಿಸಿದರು. ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿ, ಅಕ್ಷಯ ಆರ್ .ಶೆಟ್ಟಿ ಕಾರ್ಯಕ್ರಮ…
ಮೈಸೂರು : ಸಾಹಿತಿ, ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗೀಶ್ ಕಾಂಚನ್ ಇವರು ಮೈಸೂರಿನಲ್ಲಿ ದಿನಾಂಕ 27 ಸೆಪ್ಟೆಂಬರ್ 2025ರಂದು ನಡೆಯಲಿರುವ ಈ ಬಾರಿಯ ದಸರಾ ಹಬ್ಬದ ಪ್ರಧಾನ ಕನ್ನಡ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ತುಳು ಕವಿಗೋಷ್ಠಿಗೆ ಆಯ್ಕೆಯಾಗುವ ಮೂಲಕ ಗೌರವ ಪಡೆದಿದ್ದರು.
ಸುಳ್ಯ: ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ, ಅರ್ಥದಾರಿ, ಯಕ್ಷಗಾನ ಗುರುಕುಲದ ರೂವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ ‘ಕೀರಿಕ್ಕಾಡು ಪ್ರಶಸ್ತಿ’ಯನ್ನು ಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರಿಗೆ ನೀಡಲಾಗುವುದು. ದಿನಾಂಕ 25 ಅಕ್ಟೋಬರ್ 2025ರಂದು ಬನಾರಿ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ನಡೆಯಲಿರುವ ದೇಲಂಪಾಡಿಯ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ದೇಲಂಪಾಡಿ ಬನಾರಿ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಯಕ್ಷಗಾನ ಕಲಾಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ತಿಳಿಸಿದ್ದಾರೆ.
ಬೆಂಗಳೂರು : ದಸರಾ ಹಬ್ಬದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 2025ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪಂಡಿತ್ ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಡಿದೆ ದಿನಾಂಕ 22 ಸೆಪ್ಟೆಂಬರ್ 2025ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ವೈ. ಕೆ. ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.