Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಸಂಸ್ಥೆಯ ಅಮೃತ ವರ್ಷ 75 ವರ್ಷಗಳ ಸಂಭ್ರಮಾಚರಣೆ ಅಂಗವಾಗಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಮಂಗಳೂರು ಮತ್ತು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ‘ದಾಸಸುಧಾ’ ಕಾರ್ಯಕ್ರಮವನ್ನು ದಿನಾಂಕ 25 ಅಕ್ಟೋಬರ್ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಕಂಚಿನ ಕಂಠದ ಖ್ಯಾತ ಗಾಯಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತ ಕುಲಕರ್ಣಿ ಇವರು ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಲಿದ್ದಾರೆ.
ಗುಬ್ಬಿ : ನಟನ ರಂಗಶಾಲೆಯ ವತಿಯಿಂದ ಗುಬ್ಬಿ ವೀರಣ್ಣ ನಾಟಕೋತ್ಸವದಲ್ಲಿ ‘ಸ್ಥಾವರವೂ ಜಂಗಮ’ ನಾಟಕ ಪ್ರದರ್ಶನವನ್ನು ದಿನಾಂಕ 24 ಅಕ್ಟೋಬರ್ 2025ರಂದು ಸಂಜೆ 6-30 ಗಂಟೆಗೆ ಗುಬ್ಬಿ ವೀರಣ್ಣ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕದ ಮೂಲ ಕಥೆ ಮಂಜುನಾಥ ಲತಾ, ರಂಗರೂಪ ನಟನ ಮಂಜು ಇವರು ನೀಡಿದ್ದು, ಮಂಡ್ಯ ರಮೇಶ್ ನಿರ್ದೇಶನ ಮಾಡಿರುತ್ತಾರೆ.
ಉಡುಪಿ : ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಸಂಸ್ಥೆಯು 2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಿತ್ತು. ಈ ಪ್ರಶಸ್ತಿಗೆ ಬೆಂಗಳೂರಿನ ಶಶಿ ತರೀಕೆರೆಯವರ ‘ಪ್ಯೂಪಾ’ ಕವನ ಸಂಕಲನ ಆಯ್ಕೆಯಾಗಿರುತ್ತದೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ತಿಳಿಸಿದರು. ಪ್ರಶಸ್ತಿಗೆ 88 ಕೃತಿಗಳು ಬಂದಿದ್ದು, ಕನ್ನಡ ಸಾಹಿತ್ಯ ಲೋಕದ ಹಿರಿಯ ಪ್ರಸಿದ್ಧ ಸಂಸ್ಕೃತಿ ಚಿಂತಕರೂ,ಲೇಖಕರು ಆದ ಬೆಂಗಳೂರಿನ ಶೂದ್ರ ಶ್ರೀನಿವಾಸ್ ಮತ್ತು ಪ್ರಸಿದ್ಧ ವಿಮರ್ಶಕರಾದ ಪ್ರೊ. ಎಚ್. ದಂಡಪ್ಪ ಅವರು ತೀರ್ಪುಗಾರರಾಗಿ ಸಹಕರಿಸಿದ್ದರು. ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ. ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ನಡೆಸಲಾಗುವುದು ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ತಿಳಿಸಿರುತ್ತಾರೆ. ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಉಡುಪಿ…
ಮಂಗಳೂರು : ಅ. ಭಾ. ಸಾ. ಪ. ದ.ಕ. ಜಿಲ್ಲಾ ಸಮಿತಿ ಮತ್ತು ವಿವಿ ಕಾಲೇಜು ಮಂಗಳೂರು ಇದರ ‘ಮಂಗಳಗಂಗೆ’ ವಾರ್ಷಿಕ ಸಂಚಿಕೆ ವತಿಯಿಂದ ನಡೆದ ಸೃಜನೇತರ ಬರವಣಿಗೆ ಕಾರ್ಯಾಗಾರದ ಸಮಾರೋಪ ಸಮಾರಂಭ ದಿನಾಂಕ 20 ಅಕ್ಟೋಬರ್ 2025ರಂದು ವಿ.ವಿ. ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ನರೂರು ಮಾತನಾಡಿ “ಲೇಖನಗಳಿಗೆ ಜನಮಾನಸದ ಮೇಲೆ ಪ್ರಭಾವ ಬೀರುವ ಶಕ್ತಿ ಇದೆ. ಸುತ್ತಲಿನ ಪರಿಸರವೇ ವಸ್ತು ವಿಷಯವಾಗಿ, ಬದುಕಿನ ವಾಸ್ತವಿಕತೆ ಅರಿತು ಬರೆಯಬೇಕು. ಸಾಹಿತ್ಯ ಸಮಾಜಕ್ಕೆ ದಿಕ್ಸೂಚಿ ನೀಡಬೇಕು” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ವಿ. ವಿ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಮಾತನಾಡಿ “ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಸಾಹಿತ್ಯದ ದ ಓದು ಹಾಗೂ ಬರವಣಿಗೆಯಲ್ಲಿ ಆಸಕ್ತಿ ವಹಿಸಬೇಕು” ಎಂದರು. ಅ. ಭಾ. ಸಾ. ಪ. ದ.ಕ. ಜಿಲ್ಲಾಧ್ಯಕ್ಷ ಪಿ. ಬಿ.…
ಶಿವಮೊಗ್ಗ : ಎಸ್. ಬಂಗಾರಪ್ಪ ವಿಚಾರ ವೇದಿಕೆ ನೀಡುವ 2025ನೇ ಸಾಲಿನ ‘ಸಾಹಿತ್ಯ ಬಂಗಾರ’ ಪ್ರಶಸ್ತಿಗೆ ಮೈಸೂರಿನ ಕಾಳೇಗೌಡ ನಾಗವಾರ, ‘ಜಾನಪದ ಬಂಗಾರ’ ಪ್ರಶಸ್ತಿಗೆ ಬೆಳಗಾವಿಯ ರಾಧಾಬಾಯಿ ಮಾದರ, ‘ರಂಗ ಬಂಗಾರ’ ಪ್ರಶಸ್ತಿಗೆ ಕಲಬುರಗಿಯ ಜೇವರ್ಗಿ ರಾಜಣ್ಣ ಹಾಗೂ ‘ಸೇವಾ ಬಂಗಾರ’ ಪ್ರಶಸ್ತಿಗೆ ಬೆಂಗಳೂರಿನ ಶ್ರೀತೋಟದಪ್ಪ ಧರ್ಮಸಂಸ್ಥೆ ಆಯ್ಕೆಯಾಗಿದೆ. ಪ್ರಶಸ್ತಿಯು ತಲಾ ರೂ.1 ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಎಸ್. ಬಂಗಾರಪ್ಪ ವಿಚಾರ ವೇದಿಕೆ ಹಾಗೂ ಬಂಗಾರಪ್ಪ ಪ್ರತಿಷ್ಠಾನದ ಸಹಯೋಗದಲ್ಲಿ ದಿನಾಂಕ 26 ಅಕ್ಟೋಬರ್ 2025ರಂದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ವೇದಿಕೆಯ ಪ್ರಧಾನ ಸಂಚಾಲಕ ಕೆ.ವಿ. ನಾಗರಾಜಮೂರ್ತಿತಿಳಿಸಿದ್ದಾರೆ.
ಕಾಸರಗೋಡು : ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 04 ನವಂಬರ್ 2025ರ ಮಂಗಳವಾರದಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿದೆ. ಬೆಳಗ್ಗೆ ಗಂಟೆ 10-00ಕ್ಕೆ ಧ್ವಜಾರೋಹಣ, ಶಿವರಾಮ ಕಾಸರಗೋಡು 60 ಫೋಟೋ ಗ್ಯಾಲರಿ ಉದ್ಘಾಟನೆ, ಕಾಸರಗೋಡು ಕರ್ನಾಟಕದೊಂದಿಗೆ ವಿಲೀನೀಕರಣಕ್ಕಾಗಿ ಹೋರಾಡಿದ 60 ಮಂದಿ ಕನ್ನಡ ಸತ್ಯಾಗ್ರಹಿಗಳ, ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪ ನಮನ, ನುಡಿ ನಮನ ನಡೆಯಲಿದೆ. ಬೆಳಿಗ್ಗೆ 11-00ಕ್ಕೆ ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವದ ಉದ್ಘಾಟನೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪೂರ್ವಾಧ್ಯಕ್ಷ ಡಾ. ಸಿ. ಸೋಮಶೇಖರ (ಐ.ಎ.ಎಸ್. ನಿವೃತ್ತ) ಇವರು ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇದರ ಪ್ರಸಾರಾಂಗದ ವತಿಯಿಂದ ಬಹು ಸಂಸ್ಕೃತಿಯ ಕಾಸರಗೋಡು- ರಾಜ್ಯ ಮಟ್ಟದ ವಿಚಾರಗೋಷ್ಠಿ,…
ಹಾಸನ : ಮಾಣಿಕ್ಯ ಪ್ರಕಾಶನ (ರಿ.) ಹಾಸನ ವತಿಯಿಂದ ದಿನಾಂಕ 02 ನವೆಂಬರ್ 2025 ಭಾನುವಾರ ಹಾಸನದ ಸಂಸ್ಕೃತ ಭವನದಲ್ಲಿ ಹಮ್ಮಿಕೊಳ್ಳುವ ದಶಮಾನೋತ್ಸವ ಕಾರ್ಯಕ್ರಮದಲ್ಲಿ ನಾಲ್ಕು ಕೃತಿಗಳ ಲೋಕಾರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಬಾ.ನಂ. ಲೋಕೇಶ್ ವಹಿಸಲಿದ್ದು, ಜಿಲ್ಲಾ ಲೇಖಕಿಯರ ಬಳಗದ ಅಧ್ಯಕ್ಷೆ ರಾಜೇಶ್ವರಿ ಹುಲ್ಲೇನಹಳ್ಳಿ ಆಶಯ ನುಡಿಗಳನ್ನಾಡಲಿದ್ದಾರೆ. ಹಿರಿಯ ಸಾಹಿತಿ ಗೊರೂರು ಅನಂತರಾಜುರವರು ಸಾಹಿತಿ ಎಚ್.ಎಸ್. ಬಸವರಾಜುರವರ ಬಿಡಿ ಲೇಖನಗಳ ‘ಗುಚ್ಛ’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಲಿದ್ದಾರೆ. ಸಾಹಿತಿ ಬಿ.ಎಂ. ಭಾರತಿ ಹಾದಿಗೆಯವರು ಯುವ ಸಾಹಿತಿ ವಾಸು ಸಮುದ್ರವಳ್ಳಿಯವರ ವಿಮರ್ಶಾ ಲೇಖನಗಳ ‘ಒಳಗಣ್ಣು’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಲಿದ್ದಾರೆ. ಕವಯಿತ್ರಿ ವಾಣಿ ಮಹೇಶ್ರವರು ಸಾಹಿತಿ ಹೊ.ರಾ. ಪರಮೇಶ್ರವರ ‘ಸಜ್ಜನ ಕನ್ನಡ ಕವಿಗಳು’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಲಿದ್ದಾರೆ. ಕವಯಿತ್ರಿ ಕೆ.ಸಿ. ಗೀತಾರವರು ಚಿಕ್ಕಮಗಳೂರಿನ ಸಾಹಿತಿ ದೀಪಕ್ ನಿಡಘಟ್ಟರವರ ಪತ್ತೆದಾರಿ ಕಾದಂಬರಿ ‘ಮಾಯಾಗಿರಿಯ ನೆರಳು’…
ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯ ವತಿಯಿಂದ ಬಿ.ಸಿ. ರಾಮಚಂದ್ರ ಶರ್ಮ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 26 ಅಕ್ಟೋಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ಧಾರವಾಡದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಖ್ಯಾತ ವಿಮರ್ಶಕರಾದ ವಿಕಾಸ ಹೊಸಮನಿ ಇವರ ಅಧ್ಯಕ್ಷತೆ ನಡೆಯುವ ಈ ಸಮಾರಂಭದಲ್ಲಿ ಖ್ಯಾತ ಸಾಹಿತಿಗಳಾದ ಪ್ರೊ. ರಾಘವೇಂದ್ರ ಪಾಟೀಲ ಇವರು ಪ್ರಶಸ್ತಿ ಪ್ರದಾನ ಮತ್ತು ಪ್ರಶಸ್ತಿ ವಿಜೇತ ಕವನ ಸಂಕಲನ ಬಿಡುಗಡೆ ಮಾಡಲಿದ್ದಾರೆ. ಪ್ರಶಸ್ತಿ ವಿಜೇತ ಉದಯೋನ್ಮುಖ ಲೇಖಕರಾದ ಹಾವೇರಿಯ ಲಿಂಗರಾಜ ಸೊಟ್ಟಪ್ಪನವರ ಮತ್ತು ದಾವಣಗೆರೆಯ ರೇವಣಸಿದ್ಧಪ್ಪ ಜಿ.ಆರ್. ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪೆರಿಯ : ಬೇಕಲ ಗೋಕುಲಂ ಗೋಶಾಲೆಯಲ್ಲಿ ದಿನಾಂಕ 20 ಅಕ್ಟೋಬರ್ 2025ರಂದು ಪರಂಪರಾ ವಿದ್ಯಾಪೀಠದ ಅಡಿಯಲ್ಲಿ ಐದನೇ ದೀಪಾವಳಿ ಸಂಗೀತೋತ್ಸವವನ್ನು ದೀಪಾವಳಿ ದಿನದಂದು ಉದ್ಘಾಟಿಸಲಾಯಿತು. ಖ್ಯಾತ ಕೈಗಾರಿಕೋದ್ಯಮಿ ಹಾಗೂ ಭಾರತೀಯ ಗೋಸಂರಕ್ಷಣಾ ಹೋರಾಟಗಾರ ಕೋಲ್ಕತ್ತಾದ ಮಹಾವೀರ ಸೋನಿಕಾ ಇವರು ದೀಪ ಬೆಳಗಿಸಿದರು. ಸಮಾರಂಭದಲ್ಲಿ ಗೋಶಾಲೆ ಸಂಸ್ಥಾಪಕ ವಿಷ್ಣುಪ್ರಸಾದ್ ಹೆಬ್ಬಾರ್, ಡಾ. ನಾಗರತ್ನ ಹೆಬ್ಬಾರ್, ಪರಂಪರಾ ವಿದ್ಯಾಪೀಠದ ಸಂಗೀತ ಗುರು ವೆಳ್ಳಿಕೋತ್ ವಿಷ್ಣುಭಟ್, ಸಂಗೀತಗಾರ ತಾಮರಶ್ಶೇರಿ ಈಶ್ವರನ್ ಭಟ್ಟತಿರಿ ಉಪಸ್ಥಿತರಿದ್ದರು. ನಂತರ ಐದನೇ ಸಂಗೀತೋತ್ಸವದ ಮೊದಲ ಕಾರ್ಯಕ್ರಮ ಉಡುಪಿ ಪಾವನ ಆಚಾರ್ ನೇತೃತ್ವದಲ್ಲಿ ಪಂಚವಾದ್ಯ ವೀಣೆಗಳ ಕಛೇರಿ. ಇಡಯಾರ್ ಸಹೋದರರು, ತಾಮರಶ್ಶೇರಿ ಈಶ್ವರನ್ ಭಟ್ಟತಿರಿ, ವೆಳ್ಳಿಕೋತ್ ಸಹೋದರಿಯರಾದ ಉಷಾಭಟ್ ಜಯಲಕ್ಷ್ಮಿ ಭಟ್, ಕಾಞಂಗಾಡ್ ಟಿ.ಪಿ. ಶ್ರೀನಿವಾಸನ್, ಶ್ರೀಹರಿ ಭಟ್, ಚೈತನ್ಯ ಅಶೋಕ್ ಮತ್ತು ವೈಷ್ಣವಿ ನಂಬಿಯಾರ್ ಸಂಗೀತ ನೀಡಿದರು. ಪ್ರಣವಂ ಶಂಕರನ್ ನಂಬೂದಿರಿ ಇವರ ಸಂಗೀತ ಕಛೇರಿಯಲ್ಲಿ ಎಡಪ್ಪಳ್ಳಿ ಅಜಿತ್ ಪಿಟೀಲು, ಬಾಲಕೃಷ್ಣ ಕಮ್ಮತ್ ಮೃದಂಗದಲ್ಲಿ ಮತ್ತು ಶ್ರೀಜಿತ್ ವೆಳ್ಳಾಟ್ಟತ್ತನ್ನೂರ್ ಘಟದಲ್ಲಿ ಮೆರುಗು…
ಸುರತ್ಕಲ್ : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ‘ತ್ರಿದಶ ನಾಟ್ಯ ಕಲೋತ್ಸವ’ದ ಸಮಾರೋಪ ಸಮಾರಂಭವನ್ನು ದಿನಾಂಕ 26 ಅಕ್ಟೋಬರ್ 2025ರಂದು ಪೂರ್ವಾಹ್ನ 9-00 ಗಂಟೆಗೆ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಇವರು ದೀಪ ಪ್ರಜ್ವಲನೆಯೊಂದಿಗೆ ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ಗಂಟೆ 9-15ಕ್ಕೆ ಶ್ರೀ ಶಾರದಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮತ್ತು ಕಲಾವಿದೆ ಶ್ರೀಮತಿ ಅಪೂರ್ವ ಆರ್. ತಂತ್ರಿ ಇವರಿಂದ ‘ನೃತ್ಯ ಕುಂಚ’ ಪ್ರಸ್ತುತಗೊಳ್ಳಲಿದೆ. 10-00 ಗಂಟೆಗೆ ಅತ್ತಾವರದ ಚಕ್ರಪಾಣಿ ನೃತ್ಯ ಕಲಾ ಕೇಂದ್ರದ ನೃತ್ಯ ನಿರ್ದೇಶಕರಾದ ಕಲಾರತ್ನ ವಿದ್ವಾನ್ ಸುರೇಶ್ ಅತ್ತಾವರ ಇವರ ಶಿಷ್ಯ ವೃಂದದವರಿಂದ ‘ಮಣಿಕಂಠ ಜನನ’ ನೃತ್ಯ ರೂಪಕ, 11-00 ಗಂಟೆಗೆ ಕರ್ನಾಟಕ ಕರಾವಳಿಯ ಖ್ಯಾತ ಭರತನಾಟ್ಯ ನೃತ್ಯ ಸಂಸ್ಥೆಯವರಿಂದ ಸಮೂಹ ನೃತ್ಯ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 2-00 ಗಂಟೆಗೆ ನಾಟ್ಯನಿಲಯಂ ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಇವರ ಶಿಷ್ಯರಿಂದ ಭರತನಾಟ್ಯ, ಕೂಚಿಪುಡಿ,…