Author: roovari

ಬೆಂಗಳೂರು : ಒಡನಾಡಿ ಬಂಧು ಸಿಜಿಕೆ 75ರ ಮಾಸದ ನೆನಪು ಕಾರ್ಯಕ್ರಮದಲ್ಲಿ ದೃಶ್ಯಕಾವ್ಯ ತಂಡವು ಕೆ.ವೈ. ನಾರಾಯಣ ಸ್ವಾಮಿಯವರ ರಚನೆಯ ‘ಮಾಯಾ ಬೇಟೆ’ ನಾಟಕ ಪ್ರದರ್ಶನವನ್ನು ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರು ಬನಶಂಕರಿ ಸುಚಿತ್ರ ಸಿನೆಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯ ನಾಣಿ ಅಂಗಳದಲ್ಲಿ ಪ್ರಯೋಗಿಸುತ್ತಿದೆ. ಪ್ರಸನ್ನ ಕುಮಾರ ಇವರ ಸಂಗೀತ, ಜಯರಾಜ ಇವರ ಪ್ರಸಾದನ, ಮಂಜು ನಾರಾಯಣ್ ಇವರ ಬೆಳಕಿನ ವಿನ್ಯಾಸ ಮತ್ತು ನಂಜುಂಡೇಗೌಡ ಸಿ. ಇವರ ನಿರ್ದೇಶನದಲ್ಲಿ ಈ ನಾಟಕ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ಮತ್ತು ಎಸ್‌.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳ ಗಂಗೋತ್ರಿ ಇದರ ವತಿಯಿಂದ ದಿನಾಂಕ 22ರಿಂದ 24 ಡಿಸೆಂಬರ್ 2025ರಂದು ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂಜೆ 5-30ಗಂಟೆಗೆ ಉಪನ್ಯಾಸ ನಡೆಯಲಿದೆ. ಪಂಪಾ ಪ್ರಶಸ್ತಿ ಪುರಸ್ಕೃತ, ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಇವರು ಪಂಪ ಕವಿಯ ಆದಿ ಪುರಾಣ ಕಾವ್ಯ ಕುರಿತು ಮೂರು ಉಪನ್ಯಾಸಗಳನ್ನು ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಗಣೇಶ್ ಸಂಜೀವ್ ಮತ್ತು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಇವರ ಗೌರವ ಉಪಸ್ಥಿತಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ಪಿ. ಎಲ್. ಧರ್ಮ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆ ಪ್ರಾಯೋಜಿತ ಕಾರ್ಯಕ್ರಮ ಇದಾಗಿದ್ದು, ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಎಂಬ ಉದ್ದೇಶದೊಂದಿಗೆ ನಡೆಯುವ ಈ ಮಾಲಿಕೆಯ ಎರಡನೇ ಸಂಚಿಕೆಯ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು…

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಶ್ರೀ ರಾಮಾಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕೊಂಚಾಡಿ ಇವರ ಜಂಟಿ ಆಶ್ರಯದಲ್ಲಿ 115ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 17 ಡಿಸೆಂಬರ್ 2025ರಂದು ಅಪರಾಹ್ನ 02-00 ಗಂಟೆಗೆ ಕೊಂಚಾಡಿ ಶ್ರೀ ರಾಮಾಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಂಚಾಡಿ ಶ್ರೀ ರಾಮಾಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಬಾಲಚಂದ್ರ ಕೆ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಉದಯರಾಜ್ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಬೆನೆಟ್ ಜೆ. ಅಮ್ಮನ್ನ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.

Read More

ಮೂಡುಬಿದಿರೆ : ಎಕ್ಸಲೆಂಟ್ ಸಮೂಹ ಸಂಸ್ಥೆಗಳು ಇದರ ವತಿಯಿಂದ ‘ತೊರೆದು ಜೀವಿಸಬಹುದೇ’ ಎಕ್ಸಲೆಂಟ್ ಸಂಗೀತ ಸಂಜೆ ಕಾರ್ಯಕ್ರಮವನ್ನು ದಿನಾಂಕ 18 ಡಿಸೆಂಬರ್ 2025ರಂದು ಸಂಜೆ 5-00 ಗಂಟೆಗೆ ಎಕ್ಸಲೆಂಟ್ ರಾಜ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂತರಾಷ್ಟ್ರೀಯ ಹಿಂದೂಸ್ಥಾನಿ ಗಾಯಕರಾದ ಪದ್ಮಶ್ರೀ ಪಂ. ಎಮ್. ವೆಂಕಟೇಶ್ ಕುಮಾರ್ ಇವರ ಹಾಡುಗಾರಿಕೆಗೆ ಖ್ಯಾತ ಯುವ ಸಿತಾರ್ ವಾದಕ ಅಂಕುಶ್ ಎನ್. ನಾಯಕ್, ನರೇಂದ್ರ ಎಲ್. ನಾಯಕ್, ಕೇಶವ ಜೋಶಿ, ಹೇಮಂತ್ ಜೋಶಿ ಮತ್ತು ಶ್ರೀದತ್ ಪ್ರಭು ಸಹಕರಿಸಲಿದ್ದಾರೆ. ಆಸಕ್ತರು ದಿನಾಂಕ 17 ಡಿಸೆಂಬರ್ 2025ರೊಳಗೆ ನೋಂದಾಯಿಸಿಕೊಳ್ಳಬೇಕಾಗಿ ವಿನಂತಿ.

Read More

ಕುಂದಾಪುರ : ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ, ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ಗೆ ವಡ್ಡರ್ಸೆಯವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಕಳೆದ ಒಂಭತ್ತು ವರ್ಷಗಳಿಂದ ನಾಡಿನ ಗಣ್ಯ ಪತ್ರಕರ್ತರಿಗೆ ಬ್ರಹ್ಮಾವರ ಪತ್ರಕರ್ತರ ಸಂಘ ಈ ಪ್ರಶಸ್ತಿ ನೀಡುತ್ತ ಬಂದಿದ್ದು, 2025ನೇ ಸಾಲಿನ ಪ್ರಶಸ್ತಿಗೆ ಬೈಕಂಪಾಡಿಯವರನ್ನು ಆಯ್ಕೆ ಮಾಡಿದೆ. ದಿನಾಂಕ 27 ಡಿಸೆಂಬರ್ 2025ರಂದು ಶನಿವಾರ ಸಂಜೆ ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ. ಬೈಕಂಪಾಡಿಯವರು ವಡ್ಡರ್ಸೆಯವರ ಒಡನಾಡಿಯಾಗಿ ಹತ್ತು ವರ್ಷ ಕಾಲ ಮುಂಗಾರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿ ಅವರ ಆಶಯಗಳಿಗೆ ಜೀವ ತುಂಬಿದ್ದರು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಮೃತ ವಾರಪತ್ರಿಕೆಯಲ್ಲಿ 2 ವರ್ಷ, ದಿವ್ಯವಾಣಿ ವಾರಪತ್ರಿಕೆಯಲ್ಲಿ 3 ವರ್ಷ, ಮುಂಗಾರು ದಿನಪ್ರತಿಕೆ 10 ವರ್ಷ ಮುಖ ವರದಿಗಾರರಾಗಿ, ಕನ್ನಡಪ್ರಭ ದಿನಪ್ರತಿಕೆಯಲ್ಲಿ 15 ವರ್ಷ ಪ್ರಧಾನ ವರದಿಗಾರರಾಗಿ, ‘ಬಿಂಬಧ್ವನಿ’ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಹೀಗೆ ಹತ್ತು…

Read More

ಮಂಗಳೂರು : ಬಹು ಓದು ಬಳಗ ಹಾಗೂ ಆಕೃತಿ ಆಶಯ ಪ್ರಕಾಶನ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಕವಿಗೋಷ್ಠಿ ಮತ್ತು ‘ಕರಾವಳಿ ಕವನಗಳು 2001-2025’ ಪುಸ್ತಕ ಬಿಡುಗಡೆ ಸಮಾರಂಭವು ದಿನಾಂಕ 14 ಡಿಸೆಂಬರ್ 2025ರಂದು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಂಕಣಕಾರ ಅರವಿಂದ ಚೊಕ್ಕಾಡಿಯವರು ಮಾತನಾಡಿ “ತೀರಾ ಸಾಮಾನ್ಯ ಜನರೂ ಸಾಹಿತ್ಯ ಬರೆಯುವಂತಾಗಬೇಕು. ಆಯಾ ಭಾಷೆಯನ್ನು ಬಳಸುವ ಎಲ್ಲರ ಸಾಹಿತ್ಯವನ್ನು ಸ್ವೀಕರಿಸುವಂತಹ ಸ್ಥಿತಿ ನಿರ್ಮಾಣವಾಗಬೇಕು. ಅಂತಹ ಸ್ವಾತಂತ್ರ್ಯವಿದ್ದರೆ, ಭಾಷೆ ಸಶಕ್ತ ಹಾಗೂ ಸಮೃದ್ಧವಾಗುತ್ತದೆ. ಮರಾಠಿಯಲ್ಲಿ ಸಾಮಾನ್ಯ ಜನರೂ ಸಾಹಿತ್ಯ ಬರೆಯುತ್ತಾರೆ. ಕೂಲಿಕಾರರ ಆತ್ಮಕತೆಗೂ ಮರಾಠಿಯಲ್ಲಿ ಸ್ಥಾನವಿದೆ. ಹಾಗಾಗಿಯೇ ಆ ಭಾಷೆಗೆ ಶಕ್ತಿ ಬಂದಿದೆ. ಅಲ್ಲಿನ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜಕಾರಣಿಗಳು ಸಭಿಕರ ಸಾಲಿನಲ್ಲಿ ಕುಳಿತು ಅಲಿಸುತ್ತಾರೆ. ಸಾಹಿತ್ಯದ ಕಾರ್ಯಕ್ರಮಗಳಲ್ಲಿ ಜನ ಟಿಕೆಟ್ ಪಡೆದು ಭಾಗವಹಿಸುತ್ತಾರೆ. ಅದು ಕನ್ನಡಕ್ಕೂ ಸಾಧ್ಯವಾಗಬೇಕು” ಎಂದು ಹೇಳಿದರು. ಕೃತಿ ಬಿಡುಗಡೆಗೊಳಿಸಿದ ಮೈಸೂರಿನ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರದ ಸಂಶೋಧಕ ಚಲಪತಿ ಆರ್. “ಈ ಕೃತಿಯ ಕವಿತೆಗಳಲ್ಲಿ…

Read More

ಸಾಲಿಗ್ರಾಮ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಸಹಯೋಗದಲ್ಲಿ ಆಯೋಜಿಸಿದ್ದ ‘ಕಿಶೋರ ಯಕ್ಷಗಾನ ಸಂಭ್ರಮ 2025’ ಅಭಿಯಾನದ ಕುಂದಾಪುರ ವಿಧಾನ ಸಭಾ ವ್ಯಾಪ್ತಿಯ ಎಂಟು ಶಾಲೆಗಳ ಪ್ರದರ್ಶಗಳ ಸಮಾರೋಪ ಸಮಾರಂಭವು ದಿನಾಂಕ 15 ಡಿಸೆಂಬರ್ 2025ರಂದು ದೇವಾಲಯದ ವಠಾರದಲ್ಲಿ ಜರಗಿತು. ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಡಾ. ಕೆ.ಎಸ್. ಕಾರಂತರು ಅಧ್ಯಕ್ಷತೆ ವಹಿಸಿದ್ದರು. ಬಹು ಮೇಳಗಳ ಯಜಮಾನ ಪಿ. ಕಿಶನ್ ಹೆಗ್ಡೆ ಪ್ರಮಾಣ ಪತ್ರ ವಿತರಿಸಿದರು. ಯಶಸ್ವಿ ಕಲಾವೃಂದ ತೆಕ್ಕಟ್ಟೆ ಇದರ ಕಾರ್ಯದರ್ಶಿ ವೆಂಕಟೇಶ ವೈದ್ಯ, ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಸುಜಯೀಂದ್ರ ಹಂದೆ, ಶಿಕ್ಷಕ ಸಹಕಾರಿ ಬ್ಯಾಂಕಿನ ಪ್ರಬಂಧಕರಾದ ಕೆ. ಸಂತೋಷ ಕುಮಾರ ಶೆಟ್ಟಿ, ಯಕ್ಷದೇಗುಲದ ಸುದರ್ಶನ ಉರಾಳ ಅಭ್ಯಾಗತರಾಗಿ ಭಾಗವಹಿಸಿದ್ದರು. ಟ್ರಸ್ಟ್ ಕೋಶಾಧಿಕಾರಿ ಗಣೇಶ ಬ್ರಹ್ಮಾವರ, ಕಲಾರಂಗದ ಡಾ. ರಾಜೇಶ ನಾವಡ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅರುಷ್, ಉನ್ನತಿ, ಸೃಷ್ಟಿ, ಭರತ್ ಯಕ್ಷ ಶಿಕ್ಷಣದಿಂದ ತಮಗೊದಗಿದ ಅವಿಸ್ಮರಣೀಯ ಅನುಭವ ಹಂಚಿಕೊಂಡರು. ಯಕ್ಷಗಾನ ಕಲಾರಂಗದ ಅಧ್ಯಕ್ಷ…

Read More

ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕ, ಸುರತ್ಕಲ್ ಹೋಬಳಿ ಘಟಕ ಇವರ ಆಶ್ರಯದಲ್ಲಿ ಮತ್ತು ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಸುರತ್ಕಲ್ ಹೋಬಳಿ ಮಟ್ಟದ ‘ಕನ್ನಡ ಸಾಹಿತ್ಯ ಸಮ್ಮೇಳನ’ವು ದಿನಾಂಕ 11 ಡಿಸೆಂಬರ್ 2025ರಂದು ಕಾಟಿಪಳ್ಳ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆ ವಠಾರದಲ್ಲಿ ನಡೆಯಿತು. ಈ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಸಾಹಿತಿ, ರಂಗಕರ್ಮಿ ಗೀತಾ ಸುರತ್ಕಲ್ ಇವರು ಮಾತನಾಡಿ “ಸುರತ್ಕಲ್ ಸಾರಸ್ವತ ಲೋಕಕ್ಕೆ ಕೊಟ್ಟ ಕಾಣಿಕೆ ಸ್ವಲ್ಪವಲ್ಲ ವಿದ್ಯಾಸಂಸ್ಥೆಗಳಿಂದ ಹಿಡಿದು ಸಾಹಿತಿಕ, ಬೌದ್ಧಿಕ, ಸಾಂಸ್ಕೃತಿಕ, ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳು ನಾಡು ನುಡಿಯ ಸಂಭ್ರಮದ ಜಾತ್ರೆಯಾಗದೆ ಸಾಮಾಜಿಕ ಜವಾಬ್ದಾರಿಯೊಂದಿಗೆ ಹೆಚ್ಚು ಅರ್ಥವತ್ತಾಗಿ ವಿಜೃಂಬಿಸಬೇಕಿದೆ” ಎಂದು ಅಭಿಪ್ರಾಯಪಟ್ಟರು. ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಸಮ್ಮೇಳನದ ಮೆರವಣಿಗೆ ಆರಂಭವಾಯಿತು. ಶ್ರೀ ಕ್ಷೇತ್ರದ ಆಡಳಿತ ಅಧಿಕಾರಿ ನವೀನ್ ಕುಮಾರ್ ಚಾಲನೆ ನೀಡಿದರು. ತೆರೆದ ಜೀಪಿನಲ್ಲಿ…

Read More

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/-ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿ (PHD)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ…

Read More

ಸಾಣೇಹಳ್ಳಿ : ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2025-26ನೆಯ ಸಾಲಿನ ವಿದ್ಯಾರ್ಥಿಗಳ ಅಭ್ಯಾಸ ಮಾಲಿಕೆಯ ನಾಟಕ ಪ್ರಯೋಗವನ್ನು ದಿನಾಂಕ 16 ಮತ್ತು 17 ಡಿಸೆಂಬರ್ 2025ರಂದು ಪ್ರತಿದಿನ ಸಂಜೆ 7-00 ಗಂಟೆಗೆ ಸಾಣೇಹಳ್ಳಿಯ ಹುಣಸೆ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ರಾಘು ಪುರಪ್ಪೇಮನೆ ಇವರ ನಿರ್ದೇಶನ ಮತ್ತು ಸಂಗೀತ ಭಿಡೆ ಇವರ ಸಹ ನಿರ್ದೇಶನದಲ್ಲಿ ಕೀರ್ತಿನಾಥ ಕುರ್ತಕೋಟಿ ಇವರ ‘ಆ ಮನಿ’ ನಾಟಕ ಪ್ರದರ್ಶನಗೊಳ್ಳಲಿದೆ.

Read More