Author: roovari

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಇದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಎರ್ಪಡಿಸುವ ನೀನಾಸಂ ತಿರುಗಾಟ ತಂಡದ ನಾಟಕೋತ್ಸವ ದಿನಾಂಕ 31 ಡಿಸೆಂಬರ್ 2024 ರಿಂದ 03 ಜನವರಿ 2025ರ ವರೆಗೆ ಪ್ರತಿದಿನ ಸಂಜೆ 6.45ಕ್ಕೆ ಮೂಡುಬಿದಿರೆ ವಿದ್ಯಾಗಿರಿಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ. 31 ಡಿಸೆಂಬರ್ 2024 ಹಾಗೂ 01 ಜನವರಿ 2025ರಂದು ಅಕ್ಷರ ಕೆ.ವಿ.ಇವರು ನಿರ್ದೇಶಿಸಿದ ‘ಮಾಲತಿ ಮಾಧವ’ ಹಾಗೂ 02 ಮತ್ತು 03 ಜನವರಿ 2025ರಂದು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿದ, ಮೂಲ ಅಭಿರಾಮ್ ಭಡ್ಕಮ್ಕರ್ ರಚಿಸಿದ, ವಿದ್ಯಾನಿಧಿ ವನಾರಸ್ ನಿರ್ದೇಶಿಸಿದ ‘ಅಂಕದ ಪರದೆ’ ನಾಟಕಗಳ ಪ್ರದರ್ಶನ ನಡೆಯಲಿದೆ. ಈ ವರ್ಷದ ಅತ್ಯುತ್ತಮ ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾದ ನೀನಾಸಂ ತಿರುಗಾಟದ ನಾಟಕಗಳನ್ನು ಹೆಚ್ಚು ಜನರು ನೋಡಬೇಕೆಂಬ ಕಾರಣಕ್ಕೆ ಎರಡೆರಡು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ…

Read More

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು ಇದರ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಹಮ್ಮಿಕೊಂಡಿರುವ ವಿಶ್ವಕರ್ಮ ಕಲಾ ಸಿಂಚನ -2024 ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವು ದಿನಾಂಕ 08 ಡಿಸೆಂಬರ್ 2024 ರಂದು ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪಟ್ಟೆ ಲಿಂಗಪ್ಪ ಆಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ಫೂರ್ತಿ ಮೆಡಿಕಲ್ ಅಕಾಡೆಮಿಯ ಆಡಳಿತ ನಿರ್ದೇಶಕಿಯಾಗಿರುವ ಡಾ. ಜ್ಯೋತಿ ಜಗದೀಶ್ ಮಾತನಾಡಿ “ವಿದ್ಯಾರ್ಥಿಗಳಲ್ಲಿರುವ ವಿಶಿಷ್ಟ ಪ್ರತಿಭೆಯನ್ನು ಎಳವೆಯಲ್ಲೇ ಗುರುತಿಸಿದಲ್ಲಿ ಅವರ ಮುಂದಿನ ವೃತ್ತಿಜೀವನದ ಆಯ್ಕೆ ಸುಲಭವಾಗುತ್ತದೆ. ಇದರಿಂದ ವಿದ್ಯಾರ್ಥಿಯು ತನ್ನ ಆಸಕ್ತಿಯ ಕ್ಷೇತ್ರದಲ್ಲೇ ಸಾಧನೆ ಮಾಡಲು ಅನುಕೂಲವಾಗುತ್ತದೆ.” ಎಂದರು. ಶುಭಾಶಂಸನೆಗೈದ ಕ್ಷೇತ್ರದ ಆಡಳಿತಾಧಿಕಾರಿಗಳಾದ ಕೆ. ಉಮೇಶ್‌ ಆಚಾರ್ಯ “ವಿಶ್ವಕರ್ಮ ಕಲಾ ಪರಿಷತ್‌ ಸಮುದಾಯದ ಕಲಾವಿದರನ್ನು ಗುರುತಿಸಿ, ಪ್ರೋತ್ಸಾಹಿಸುತ್ತಿರುವ ಕಾರ್ಯ ಶ್ಲಾಘನೀಯ” ಎಂದರು. ಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಎಸ್.‌ ಪಿ. ಗುರುದಾಸ್‌ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಈ ಸಂದರ್ಭದಲ್ಲಿ ಲೇಖಕಿ, ನಿವೃತ್ತ ಪ್ರಾಂಶುಪಾಲೆ ಹಾಗೂ ಕಲಾವಿದೆಯೂ…

Read More

ಕೋಲಾರ : ‘ಸ್ವರ್ಣಭೂಮಿ ಫೌಂಡೇಷನ್’ ಕೋಲಾರ ಇದರ ವತಿಯಿಂದ ಹಾಗೂ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ ಮತ್ತು ರೋಟರಿ ಕ್ಲಬ್ ಕೋಲಾರ ಇವುಗಳ ಸಂಯುಕ್ತಾಶ್ರಯದಲ್ಲಿ ‘ಕಾಸರಗೋಡು – ಕೋಲಾರ ಕನ್ನಡ ಉತ್ಸವ 2024 ಹಾಗೂ ರಾಷ್ಟ್ರ ಕವಿ ಕುವೆಂಪು ಇವರ ಜನ್ಮದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆ’ಯನ್ನು ದಿನಾಂಕ 28 ಡಿಸೆಂಬರ್ 2024ರಂದು ಮಧ್ಯಾಹ್ನ ಗಂಟೆ 2-30ಕ್ಕೆ ಕೋಲಾರ ಅಂತರಗಂಗೆ ಮುಖ್ಯ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಪುಸ್ತಕ ಲೋಕಾರ್ಪಣೆ, ಗೀತ ಗಾಯನ ಮತ್ತು ಸಾಂಸ್ಕೃತಿಕ ಸಂಭ್ರಮ ನಡೆಯಲಿದ್ದು, ಅದರೊಂದಿಗೆ ಕಾಸರಗೋಡು ಕನ್ನಡ ಭವನದ ರಾಜ್ಯಾಂತರ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ -2024’, ‘ಕುವೆಂಪು ವಿಶ್ವಮಾನವ ಕನ್ನಡರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.

Read More

ಬಿದ್ಕಲ್ ಕಟ್ಟೆ : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುತ್ತಿರುವ ಪ್ರದರ್ಶನಾ ಸಂಘಟನ ಸಮಿತಿ ಬಿದ್ಕಲ್ ಕಟ್ಟೆ ಇವರ ಸಹಯೋಗದೊಂದಿಗೆ ದಿನಾಂಕ 19 ಡಿಸೆಂಬರ್ 2024ರಂದು ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವಠಾರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮವು ಉದ್ಘಾಟನೆಗೊಂಡಿತು. ಈ ಸಮಾರಂಭವನ್ನು ಉದ್ಯಮಿಗಳಾದ ಎಚ್. ಶಂಕರ್ ಹೆಗ್ಡೆ ಜನ್ನಾಡಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಪ್ರದರ್ಶನಾ ಸಂಘಟನ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಇಂಜಿನಿಯರ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೀಪಾ ಶೆಟ್ಟಿ, ಹಾಲಾಡಿ ವಲಯ ಭಜನಾ ಮಂಡಳಿಗಳ ಅಧ್ಯಕ್ಷರಾದ ಶ್ರೀಮತಿ ಸುಶೀಲಾ ಬಿ. ಶೆಟ್ಟಿ, ಪಂಚಾಯತ್ ಪಿ.ಡಿ.ಒ. ಶ್ರೀಮತಿ ರೇಖಾ ಅಭ್ಯಾಗತರಾಗಿ ಭಾಗವಹಿಸಿದರು. ಪ್ರದರ್ಶನ ಸಂಘಟನಾ ಸಮಿತಿಯ ಸಂಚಾಲಕರಾದ ಜಯಪ್ರಕಾಶ್ ಶೆಟ್ಟಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರ ಕಲಾಪ್ರೀತಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು. ಟ್ರಸ್ಟಿನ…

Read More

ಮಂಗಳೂರು : ಹರಿಕಥಾ ಪರಿಷತ್‌ (ರಿ.) ಮಂಗಳೂರು ಮತ್ತು ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ–ಅಪರೇಟಿವ್ ಸೊಸೈಟಿ (ಲಿ.) ಮಂಗಳೂರು ಇವುಗಳ ಜಂಟಿ ಸಹಯೋಗದಲ್ಲಿ ಆಯೋಜಿಸುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ‘ಹರಿಕಥಾ ಸ್ಪರ್ಧೆ 2024’ಯನ್ನು ದಿನಾಂಕ 25 ಡಿಸೆಂಬರ್ 2024ರಂದು ಬೆಳಿಗ್ಗೆ ಗಂಟೆಗೆ 8-30ಕ್ಕೆ ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಹರಿಕಥಾ ಪರಿಷತ್‌ ಇದರ ಅಧ್ಯಕ್ಷರಾದ ಶ್ರೀ ಕೆ. ಮಹಾಬಲ ಶೆಟ್ಟಿ ಇವರ ಅಧ್ಯಕ್ಷೆತೆಯಲ್ಲಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ–ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಪಿ. ಉಪೇಂದ್ರ ಆಚಾರ್ಯ ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಪೂರ್ವಾಹ್ನ ಗಂಟೆ 9-20ಕ್ಕೆ ಜ್ಯೂನಿಯರ್ ವಿಭಾಗ ಮತ್ತು ಅಪರಾಹ್ನ 1-00 ಗಂಟೆಗೆ ಸೀನಿಯರ್ ವಿಭಾಗದಲ್ಲಿ ಹರಿಕಥಾ ಸ್ಪರ್ಧೆ ನಡೆಯಲಿದ್ದು, ಶ್ರೀ ಸತ್ಯನಾರಾಯಣ ಐಲ, ಶ್ರೀ ರವಿರಾಜ್ ಒಡಿಯೂರು, ಶ್ರೀ ಜಗದೀಶ್ ಉಪ್ಪಳ ಮತ್ತು ಶ್ರೀ ಕೌಶಿಕ್ ಮಂಜನಾಡಿ ಇವರು ಹಿಮ್ಮೇಳ ಕಲಾವಿದರಾಗಿ…

Read More

ಕಾರ್ಕಳ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರು ಕಾರ್ಕಳ ತಾಲೂಕು ಘಟಕದ ಮೂಲಕ ಸಂಯೋಜಿಸಿರುವ ‘ತಾಲೂಕು ಮಟ್ಟದ ಗಮಕ ಸಮ್ಮೇಳನ’ವು ದಿನಾಂಕ 28 ಡಿಸೆಂಬರ್ 2024ರಂದು ಪೂರ್ವಾಹ್ನ 9-00 ಗಂಟೆಗೆ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ಶ್ರೀ ವರದೇಂದ್ರ ಸದನ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ವ್ಯಾಸ ರಘುಪತಿ ಸಂಸ್ಕೃತ ವಿದ್ಯಾಶಾಲಾ ಫಂಡ್ (ರಿ.) ಕಾರ್ಕಳ ಇದರ ಅಧ್ಯಕ್ಷರಾದ ಶ್ರೀ ಎ. ಯೋಗೀಶ್ ಹೆಗ್ಡೆ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವ್ಯಾಖ್ಯಾನಕಾರರಾದ ಶ್ರೀ ಮುನಿರಾಜ ರೆಂಜಾಳ ಇವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿರುವರು. ಕಾರ್ಕಳದ ನಿವೃತ್ತ ಉಪನ್ಯಾಸಕರಾದ ಶ್ರೀ ರಾಮ ಭಟ್ ಎಸ್. ಇವರು ಶಿಖರ ಉಪನ್ಯಾಸ ನೀಡಲಿದ್ದಾರೆ. ಪೂರ್ವಾಹ್ನ ಗಂಟೆ 10-30ಕ್ಕೆ ‘ಸಾವಿತ್ರಿಯ ಬಾಲ್ಯ’ ಗಮಕ ವಾಚನ ವ್ಯಾಖ್ಯಾನದಲ್ಲಿ ಕಾರ್ಕಳ ಹಿರಿಯಂಗಡಿ ಎಸ್.ಎನ್.ವಿ. ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಆಶ್ರಿತಾ ಇವರು ವಾಚನ ಹಾಗೂ ಕಾರ್ಕಳ ಭುವನೇಂದ್ರ ಪ್ರಥಮ…

Read More

ಹಿರಿಯಡಕ : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುತ್ತಿರುವ ‘ಕಿಶೋರ ಯಕ್ಷಗಾನ ಸಂಭ್ರಮ 2024’ ಪ್ರಯುಕ್ತ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ, ಕಾಪು ವಿಧಾನ ಸಭಾ ವ್ಯಾಪ್ತಿಯ ಮೂರು ಶಾಲೆಗಳ ಪ್ರದರ್ಶನವು ದಿನಾಂಕ 18 ಡಿಸೆಂಬರ್ 2024ರಂದು ಹಿರಿಯಡಕದ ಶ್ರೀ ವೀರಭದ್ರ ದೇವಳದ ವಠಾರದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಬಹು ಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಉದ್ಯಮಿ ನಟರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಪೋಷಕ ಶ್ರೀನಿವಾಸ ರಾವ್, ಪ್ರಾಯೋಜಕರಾದ ವೈದಿಕ ಸ್ಕಂದಗಂಪು ಸುಬ್ರಹ್ಮಣ್ಯ ಆಚಾರ್ಯ ಮತ್ತು ಸೆಲ್ಕೊ ಇದರ ಸುಬ್ರಹ್ಮಣ್ಯರು ಅಭ್ಯಾಗತರಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಯು.ಎಸ್. ರಾಜಗೋಪಾಲ ಆಚಾರ್ಯ, ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು. ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ಥ ವಿ.ಜಿ. ಶೆಟ್ಟಿ ಸ್ವಾಗತಿಸಿ, ಎಚ್.ಎನ್. ವೆಂಕಟೇಶ್ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅನಂತರ ಯು.ಎಸ್. ನಾಯಕ್ ಪ್ರೌಢ…

Read More

ಪೆರ್ಲ, ಕಾಸರಗೋಡು : ಪೆರ್ಲ ಕೃಷ್ಣ ಭಟ್ಟ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಆಯೋಜಿಸುವ ಪೆರ್ಲ ಕೃಷ್ಣ ಭಟ್ಟರ ಜನ್ಮಶತಮಾನೋತ್ಸವ ಕಾರ್ಯಕ್ರಮವಾದ ‘ಪೆರ್ಲ ನೂರರ ನೆನಪು’ ಸಮಾರಂಭವು ದಿನಾಂಕ 21 ಡಿಸೆಂಬರ್ 2024ರ ಶನಿವಾರದಂದು ಅಪರಾಹ್ನ ಗಂಟೆ 2.00 ರಿಂದ ಪೆರ್ಲದ ಶ್ರೀ ಭಾರತೀ ಸದನದಲ್ಲಿ ನಡೆಯಲಿದೆ. ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗ ಇದರ ಅಧ್ಯಕ್ಷರಾದ ಡಾ. ಟಿ. ಶಾಮ್ ಭಟ್ ಐ. ಎ. ಎಸ್ (ನಿ) ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರು ಆಶೀರ್ವಾಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದರ ಅಖಿಲ ಭಾರತ ಕುಟುಂಬ ಪ್ರಬೋಧನ್ ಆಗಿರುವ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಸಂಸ್ಮರಣಾ ಭಾಷಣ ಮಾಡಲಿದ್ದು, ಬಹುಶ್ರುತ ವಿದ್ವಾಂಸರಾದ ಡಾ. ಪ್ರಭಾಕರ ಜೋಷಿ ಹಾಗೂ ಶ್ರೀಕ್ಷೇತ್ರ, ಕೊಲ್ಲೂರು ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ ಅಡ್ಯಂತಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ…

Read More

ಮಂಗಳೂರು : ಸಾಹಿತ್ಯ ಸಂಸ್ಕೃತಿ ಕಲೆ ಸಂಘಟನೆ ಸದ್ವಿಚಾರ ಎಂಬ ನೆಲೆಯಲ್ಲಿ ಕಳೆದ 25 ವರ್ಷಗಳಿಂದ ಪುಸ್ತಕ ಪ್ರಕಟನೆಯಲ್ಲಿ ಸಕ್ರಿಯವಾಗಿರುವ ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ದಿನಾಂಕ 05 ಜನವರಿ 2024ರಂದು ‘ರಜತ ರಂಗು’ ಸಮಾರಂಭದಲ್ಲಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ರಾಜ್ಯ ಮತ್ತು ಹೊರರಾಜ್ಯದ ಈ ಕೆಳಗಿನ 25 ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ಸಾಹಿತ್ಯ ಕ್ಷೇತ್ರದ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಮಡಿಕೇರಿ, ಡಾ. ಪ್ರಸನ್ನ ಕೆ. ಸಂತೇಕಡೂರು ಮೈಸೂರು, ಡಾ. ಕೊಳ್ಚಪ್ಪೆ ಗೋವಿಂದ ಭಟ್ ಮಂಗಳೂರು, ವಿಕ್ರಂ ಕಾಂತಿಕೆರೆ ಮಂಗಳೂರು, ರಾಘವೇಂದ್ರ ಅಗ್ನಿಹೋತ್ರಿ ಮಂಗಳೂರು, ಸಂಪತ್ ಸಿರಿಮನೆ ಶೃಂಗೇರಿ, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಮಂಗಳೂರು, ಹಂಝ ಮಲಾರ್ ಮಂಗಳೂರು, ಎಡ್ವರ್ಡ್ ಲೋಬೊ ತೊಕ್ಕೊಟ್ಟು, ರಾಘವೇಂದ್ರ ಬಿ. ರಾವ್ – ಅನು ಬೆಳ್ಳೆ ಕಾರ್ಕಳ, ಮಹಮ್ಮದ್ ಅಶೀರುದ್ದೀನ್ ಸಾರ್ತಬೈಲು ಮಂಗಳೂರು, ನಾರಾಯಣ ಕುಂಬ್ರ ಪುತ್ತೂರು, ಮಧುರಾ ಕರ್ಣಮ್ ಬೆಂಗಳೂರು, ಬಹುಮುಖ ಪ್ರತಿಭೆಯ ಡಾ. ಮೋನಾ ಮೆಂಡೋನ್ಸಾ ಮಂಗಳೂರು, ಪುಷ್ಪಲತಾ ಪ್ರಭು…

Read More

ಬೆಂಗಳೂರು : ರಾಷ್ಟ್ರೀಯ ಕುವೆಂಪು ಪ್ರತಿಷ್ಠಾನದ 2024ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಗುಜರಾತಿ ಭಾಷೆಯ ಹೆಸರಾಂತ ಬರಹಗಾರ್ತಿ ಡಾ. ಹಿಮಾನ್ಷಿ ಇಂದೂಲಾಲ್ ಶೆಲಾತ್ ಆಯ್ಕೆಯಾಗಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್. ಶಂಕರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಷರೀಫಾ ವಿಜಲಿವಾಲ, ಅಗ್ರಹಾರ ಕೃಷ್ಣಮೂರ್ತಿ, ಪುರುಷೋತ್ತಮ ಬಿಳಿಮಲೆ ಅವರಿದ್ದ ಪುರಸ್ಕಾರ ಆಯ್ಕೆ ಸಮಿತಿಯ ಸಭೆಯಲ್ಲಿ ಡಾ. ಹಿಮಾನ್ಷಿ ಇಂದೂಲಾಲ್ ಶೆಲಾತ್ ಇವರನ್ನು ಆಯ್ಕೆ ಮಾಡಿದೆ. ಕುವೆಂಪು ರಾಷ್ಟ್ರೀಯ ಪುರಸ್ಕಾರ 5 ಲಕ್ಷ ರೂಪಾಯಿ ನಗದು, ಬೆಳ್ಳಿಪದಕ ಒಳಗೊಂಡಿರುತ್ತದೆ. ಜನವರಿ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ನೆರವೇರಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ. ಎಲ್. ಶಂಕರ್ ತಿಳಿಸಿದ್ದಾರೆ. ಗುಜರಾತಿನ ಖ್ಯಾತ ಲೇಖಕ ಡಾ.ಶೆಲತ್ ಅವರು ತಮ್ಮ ಸೂಕ್ಷ್ಮ ಬರಹಗಳಿಗೆ ಹೆಸರುವಾಸಿಯಾಗಿದ್ದಾರೆ ಮತ್ತು ಗುಜರಾತಿ ಭಾಷೆಯಲ್ಲಿ ತಮ್ಮ ಕೃತಿಗಳ ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಇವರು ಸುಮಾರು 20 ಪುಸ್ತಕಗಳನ್ನು ಬರೆದಿದ್ದು, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Read More