Subscribe to Updates
Get the latest creative news from FooBar about art, design and business.
Author: roovari
ಪುತ್ತೂರು : ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ ಬೊಳುವಾರು ಇಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಮಹಿಳಾ ವಿಂಶತಿ ಸಂಭ್ರಮ ಅಂಗವಾಗಿ 19ನೇ ಸರಣಿ ತಾಳಮದ್ದಳೆ ‘ಸುಧನ್ವ ಮೋಕ್ಷ’ ಎಂಬ ಆಖ್ಯಾನದೊಂದಿಗೆ ದಿನಾಂಕ 14 ಡಿಸೆಂಬರ್ 2024ರಂದು ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಶಂಕರ ನಾರಾಯಣ ಭಟ್, ಅಚ್ಯುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ (ಸುಧನ್ವ), ಭಾಸ್ಕರ ಬಾರ್ಯ (ಶ್ರೀ ಕೃಷ್ಣ), ವಿ.ಕೆ. ಶರ್ಮ ಅಳಿಕೆ (ಅರ್ಜುನ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.
ಬೆಂಗಳೂರು : ಸಂಸ್ಕಾರ ಭಾರತಿ ಕರ್ನಾಟಕ (ರಿ.) ಇದರ ವತಿಯಿಂದ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಮತ್ತು ಕಾವಿ ಆರ್ಟ್ ಫೌಂಡೇಶನ್ ಇವುಗಳ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ‘ಡಿವೈನ್ ಡೈಮೆನ್ಷನ್ಸ್’ ಜನಾರ್ದನ ರಾವ್ ಹವಾಂಜೆಯವರ ಕಾವಿ ಭಿತ್ತಿಚಿತ್ರಗಳ ಕಲಾ ಪ್ರದರ್ಶನವನ್ನು ದಿನಾಂಕ 18 ಡಿಸೆಂಬರ್ 2024ರಿಂದ 29 ಡಿಸೆಂಬರ್ 2024ರವರೆಗೆ ಬೆಂಗಳೂರಿನ ಬಸವನಗುಡಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇಲ್ಲಿ ಆಯೋಜಿಸಲಾಗಿದೆ. ಈ ಕಲಾ ಪ್ರದರ್ಶನವು ದಿನಾಂಕ 18 ಡಿಸೆಂಬರ್ 2024ರಂದು ಉದ್ಘಾಟನೆಗೊಳ್ಳಲಿದೆ.
ಮಂಗಳೂರು : ಯಕ್ಷಗಾನದ ಪ್ರಥಮ ಮಹಿಳಾ ವೃತ್ತಿ ಭಾಗವತರಾಗಿದ್ದ ಲೀಲಾವತಿ ಬೈಪಡಿತ್ತಾಯ ದಿನಾಂಕ 14 ಡಿಸೆಂಬರ್ 2024 ರಂದು ನಿಧನರಾದರು. ಅವರಿಗೆ 78ವರ್ಷ ವಯಸ್ಸಾಗಿತ್ತು. ಕಾಸರಗೋಡಿನ ಮಧೂರಿನಲ್ಲಿ 1947ರ ಮೇ 23ರಂದು ಜನಿಸಿದ್ದ ಲೀಲಾವತಿ ಸಣ್ಣ ಪ್ರಾಯದಲ್ಲೇ ತಂದೆಯನ್ನು ಕಳೆದು ಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್, ಮಧೂರು ದೇವಾಲಯದಲ್ಲಿ ದೇವ ನೃತ್ಯ ಕಲಾವಿದರಾಗಿದ್ದರು. ಬಡತನದಿಂದಾಗಿ ಲೀಲಾವತಿಗೆ ವಿದ್ಯೆ ಕಲಿಯಲಾಗಲಿಲ್ಲ. ಸುಮಧುರವಾಗಿ ಹಾಡುತ್ತಿದ್ದ ಅವರು ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತರು. 23ನೇ ವರ್ಷ ಪ್ರಾಯದಲ್ಲಿ ತೆಂಕುತಿಟ್ಟಿನ ಚೆಂಡೆ-ಮದ್ದಳೆಯ ಕಲಾವಿದ ಹರಿನಾರಾಯಣ ಬೈಪಾಡಿತ್ತಾಯ ಅವರನ್ನು ಮದುವೆಯಾಗಿ ಕಡಬಕ್ಕೆ ಸ್ಥಳಾಂತರಗೊಂಡರು. ಲೀಲಾವತಿ ಅವರ ಶಾಸ್ತ್ರೀಯ ಸಂಗೀತ ಗಾಯನ ಪ್ರತಿಭೆಯನ್ನು ಅರಿತ ಪತಿ ಹರಿನಾರಾಯಣರು ಯಕ್ಷಗಾನ ಹಾಡುಗಾರಿಕೆಗೆ ಪ್ರೋತ್ಸಾಹ ನೀಡಿದರು. ಆರಂಭದಲ್ಲಿ ಕಡಬದ ಸುತ್ತಲಿನ ಶಾಲಾ ವಾರ್ಷಿಕೋತ್ಸವ, ಮದುವೆ, ಉಪನಯನ ಮತ್ತಿತರ ಕಾರ್ಯಕ್ರಮಗಳಲ್ಲಿ ಆಯೋಜಿಸುವ ತಾಳಮದ್ದಲೆಯ ಪ್ರಸಂಗಗಳಲ್ಲಿ…
ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ (ರಿ.) ಆಯೋಜಿಸುವ 2024-25ರ ಸಾಲಿನ ದತ್ತಿ ಪ್ರಶಸ್ತಿ ಮತ್ತು ಸಾಹಿತ್ಯ ಬಹುಮಾನಕ್ಕೆ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ. ಡಾ. ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ : ಸಂಘದ ಸದಸ್ಯೆಯಾಗಿದ್ದ ವೈಚಾರಿಕ ಮನೋಧರ್ಮದ ಸಂವೇದನಾಶೀಲ ಲೇಖಕಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಇವರ ಹೆಸರಿನಲ್ಲಿ ಪ್ರತಿ ವರ್ಷ ಕೊಡಮಾಡುವ ಸಾಹಿತ್ಯ ಪ್ರಶಸ್ತಿಗೆ ಈ ಬಾರಿ ‘ಲೇಖಕಿಯರಿಂದ ಅನುವಾದಿತ ಕಾದಂಬರಿ’ಗಳನ್ನು ಆಹ್ವಾನಿಸಲಾಗಿದೆ. 2022, 2023, 2024ರ ಸಾಲಿನಲ್ಲಿ ಪ್ರಕಟವಾದ ಯಾವುದೇ ಭಾಷೆಯಿಂದ ಕನ್ನಡಕ್ಕೆ ಲೇಖಕಿಯರು ಅನುವಾದಿಸಿ ಪ್ರಕಟಿಸಿದ ಕಾದಂಬರಿಯ ಮೂರು ಪ್ರತಿಗಳನ್ನು ದಿನಾಂಕ 10 ಜನವರಿ 2024ರ ಒಳಗೆ ತಲುಪುವಂತೆ ಸಂಘದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪುಸ್ತಕದ ಜೊತೆಗೆ ವೈಯಕ್ತಿಕ ಮಾಹಿತಿ ಮತ್ತು ಸಂಪರ್ಕ ಸಂಖ್ಯೆಯಿರುವ ಪ್ರವೇಶ ಪತ್ರವನ್ನು ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ 97425 38833 ಈ ಸಂಖ್ಯೆಯನ್ನು ಸಂಪರ್ಕಿಸಬಹುದು. ಚಂದ್ರಭಾಗಿ ರೈ ದತ್ತಿ ಬಹುಮಾನ…
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಯಕ್ಷಗಾನ ಕಲಾರಂಗ (ರಿ.) ಉಡುಪಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಿದ್ದ 15 ದಿನಗಳ ‘ಕಿಶೋರ ಯಕ್ಷಗಾನ ಸಂಭ್ರಮ – 2024’ ಇದರ ಸಮಾರೋಪ ಸಮಾರಂಭವು ದಿನಾಂಕ 14 ಡಿಸೆಂಬರ್ 2024ರಂದು ನಡೆಯಿತು. ಈ ಸಮಾರಂಭದಲ್ಲಿ ಸಾನಿಧ್ಯ ವಹಿಸಿದ್ದ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ “ಕಲೆ ಸಾಹಿತ್ಯದಿಂದ ಜೀವನದಲ್ಲಿ ಲವಲವಿಕೆ ಇರುತ್ತದೆ. ಯಕ್ಷಗಾನ ಪರಿಪೂರ್ಣ ಕಲಾಪ್ರಕಾರ. ಇದು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿ ಜೀವನ ಮೌಲ್ಯ ಕಲಿಸುತ್ತದೆ” ಎಂದು ನುಡಿದರು. ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು “ಮಕ್ಕಳಿಗೆ ಪುರಾಣ ಕಥೆಗಳನ್ನು ತಿಳಿಯುವುದಕ್ಕೆ ಇದು ಅತ್ಯುತ್ತಮ ಮಾರ್ಗವಾಗಿದೆ” ಎಂದರು. ಯಕ್ಷಶಿಕ್ಷಣ ಟ್ರಸ್ಟಿನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶ್ಪಾಲ್ ಸುವರ್ಣರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಶಿಕ್ಷಣ…
ಗದಗ : ಉತ್ತರ ಕರ್ನಾಟಕ ಕಲಾವಿದರ ಮತ್ತು ಕಲಾ ಪೋಷಕರ ಸಂಘಟನೆಯಾದ ಕಲಾ ವಿಕಾಸ ಪರಿಷತ್ (ರಿ), ಗದಗ ಇವರ 24ನೆಯ ವಾರ್ಷಿಕೋತ್ಸವ, ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಸಮಾರಂಭವನ್ನು ಜನವರಿ ತಿಂಗಳ ಎರಡನೇ ವಾರ ಧಾರವಾಡದಲ್ಲಿ ಹಮ್ಮಿಕೊಂಡಿದೆ. ಈ ಸಮಾರಂಭದಲ್ಲಿ ಸಂಗೀತ, ನೃತ್ಯ ಕಲಾವಿದರಿಗೆ ಸೇರಿ 24 ಮತ್ತು ಕಲಾಪೋಷಕ, ಕಲಾಪೋಷಕ ಸಂಸ್ಥೆಗಳಿಗೆ ಸೇರಿ 26 ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ. ಆಸಕ್ತ ಸಂಗೀತ ನೃತ್ಯ ಕಲಾವಿದರು, ಕಲಾ ತಂಡಗಳು, ಕಲಾ ಪೋಷಕರು ಮತ್ತು ಕಲಾ ಪೋಷಕ ಸಂಸ್ಥೆಯ ಮುಖ್ಯಸ್ಥರು ಅರ್ಜಿ ಸಲ್ಲಿಸಬಹುದಾಗಿದೆ. ಕಲಾವಿದರು ಹಾಗೂ ಕಲಾ ತಂಡಗಳು ಕಲಾ ಪ್ರದರ್ಶನದ ವಿಡಿಯೋ ಕ್ಲಿಪ್ ಸಹಿತ ಸವಿವರದೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಕಲಾ ಪೋಷಕರು ಮತ್ತು ಕಲಾ ಪೋಷಕ ಸಂಸ್ಥೆಗಳು, ಕಲಾ ಪೋಷಿಸಿಕೊಂಡು ಬಂದ ವಿವರ ನೀಡಬೇಕು. ಈ ಸಮಾರಂಭದ ಉತ್ತಮ ತಂಡಗಳಿಗೆ ಗೌರವ ಸಂಭಾವನೆ ನೀಡಿ ಗದುಗಿನ ಇನ್ನೊಂದು ಕಾರ್ಯಕ್ರಮಕ್ಕೆ ಆಹ್ವಾನಿಸಿ ವೇದಿಕೆ ನೀಡಲಾಗುವುದು. ಹೆಸರು ನೋಂದಾಯಿಸಿಕೊಳ್ಳಲು ದಿನಾಂಕ 28 ಡಿಸೆಂಬರ್…
ಉಡುಪಿ : ತೆಕ್ಕಟ್ಟೆ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ನೇತೃತ್ವದ ಅಭಿನಂದನೆ ಕಾರ್ಯಕ್ರಮ ದಿನಾಂಕ 13 ಡಿಸೆಂಬರ್ 2024ರಂದು ಗುರು ಬನ್ನಂಜೆ ಸಂಜೀವ ಸುವರ್ಣರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣರನ್ನು ಗೌರವಿಸಿದ ತೆಕ್ಕಟ್ಟೆ ಯಶಸ್ವೀ ಕಲಾವೃಂದದ ಗುರು ಲಂಬೋದರ ಹೆಗಡೆ ಮಾತನಾಡಿ “ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಸಲ್ಲಲೇಬೇಕಾದ ಪ್ರಶಸ್ತಿಗಳನೇಕವು ಅರ್ಜಿ ಸಲ್ಲಿಸದೇ ಗುರುಗಳನ್ನು ಹುಡುಕಿ ಬಂದಿದೆ. ಅದರಲ್ಲಿ ಬಹು ಪ್ರಾಮುಖ್ಯವಾದದ್ದು ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡಿದ ಪ್ರಶಸ್ತಿ. ಇಂತಹ ಗುರುಗಳನ್ನು ಅಭಿನಂದಿಸಬೇಕಾದದ್ದು ನಮ್ಮಂತಹ ಸಂಸ್ಥೆಯ ಕರ್ತವ್ಯ. ಪ್ರಶಸ್ತಿಗೆ ಭಾಜನರಾದವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನಾರೋಗ್ಯದ ಕಾರಣದಿಂದ ಗುರುಗಳಿಗೆ ಅಸಾಧ್ಯವಾಗಿತ್ತು. ಆದರೆ ಇಂದು ಗುರು ಸನ್ನಿಧಿಯಲ್ಲಿ ಗೌರವಿಸಿ, ಅಭವಂದಿಸಿದ ಭಾಗ್ಯ ನಮ್ಮ ಪಾಲಿಗೆ ಬಂದಿದೆ.”ಎಂದರು ಸಮಾರಂಭದಲ್ಲಿ ಸಂಜಿವ ಸುವರ್ಣ ದಂಪತಿಗಳು, ಉದ್ಯಮಿ ಗೋಪಾಲ ಪೂಜಾರಿ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು.
ಮೂಡುಬಿದಿರೆ : ಆಳ್ವಾಸ್ ವಿರಾಸತ್‌ನ ನಾಲ್ಕನೇ ದಿನವಾದ ಶುಕ್ರವಾರ ದಿನಾಂಕ 13 ಡಿಸೆಂಬರ್ 2024ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ವಿವಿಧ ಶೈಕ್ಷಣಿಕ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಂಸ್ಕೃತಿಕ ಸಂಚಲನ ಸೃಷ್ಟಿಸಿದರು. ಬಡಗುತಿಟ್ಟಿನ ಯಕ್ಷ ವೇಷಧಾರಿಗಳು ಕೃಷ್ಣನ ರಾಸಲೀಲೆಯನ್ನು ವೇದಿಕೆ ಮೇಲೆ ಪ್ರದರ್ಶಿಸಿದರು. ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನಿರ್ದೇಶನದಲ್ಲಿ ಮೋಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕವು ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು. ‘ರಂಗನೇತಕೆ ಬಾರನೇ..’ ‘ಕೊಳಲನೂದುತ ಬಂದ ಕೃಷ್ಣ’ ಸಾಲಿಗೆ ಮಕ್ಕಳ ನೃತ್ಯ ಗೋಕುಲವನ್ನೇ ಸೃಷ್ಟಿಸಿತು. ಚೆಂಡು, ನೀರಾಟ, ಉಯ್ಯಾಲೆ, ಕೋಲಾಟವನ್ನುಬಯಕ್ಷ ರೂಪಕದಲ್ಲಿ ಬಿಂಬಿಸಿದರು. ಕೃಷ್ಣನ ಬಾಲ ಲೀಲೆ ಸಾರುವ ಕಾಳಿಂಗ ಮರ್ಧನ, ಕಂಸ ವಧೆ, ರಾಧೆಯರು, ವಸುದೇವ, ಪೂತನಿ ಸಂಹಾರದ ದೃಶ್ಯಾವಳಿಗಳನ್ನು ಅಂತಿಮವಾಗಿ ಮೂಡಿಸಿದ್ದು, ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿತು. ನಂತರ ವೇದಿಕೆಯಲ್ಲಿ ಮೊಳಗಿದ್ದು ಡೊಳ್ಳಿನ ಸದ್ದು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ನೆಲದ ದೇಸಿ ಕಲೆಯನ್ನು ಉಳಿಸುವ…
ಕಾಸರಗೋಡು : ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೇಖಾ ಸುದೇಶ್ ರಾವ್ ಇವರು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ‘ರಜತ ಸಂಭ್ರಮ’ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮ ಹಾಗೂ ‘ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ ಪುಸ್ತಕ ನಿತ್ಯ’ ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು, ಕನ್ನಡ ಭವನದಲ್ಲಿ ಗೌರವ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವಾನುಮತದಿಂದ ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ…
ಮೂಡುಬಿದಿರೆ : ವೈಭವದಿಂದ ಅಲಂಕೃತಗೊಂಡ ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ದಿನಾಂಕ 13 ಡಿಸೆಂಬರ್ 2024ರಂದು ಕೋಲ್ಕತ್ತಾದಿಂದ ಬಂದ ನೀಲಾದ್ರಿ ಕುಮಾರ್ ಸಿತಾರ್- ಝಿತಾರ್ ತರಂಗಗಳ ಕಂಪನದ ಅಲೆ ಸೃಷ್ಟಿಸಿದರು. ನೀಲಾದ್ರಿಯ ಬೆರಳುಗಳ ಸಂಚಲನದ ಕಂಪನ-ತರಾಂಗಂತರಂಗಕ್ಕೆ ಆಳ್ವಾಸ್ ವಿರಾಸತ್‌ನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರವೇ ನಿನಾದದಲ್ಲಿ ತುಂಬಿತ್ತು. ತಾವೇ ಅಭಿವೃದ್ಧಿ ಪಡಿಸಿದ ಎಲೆಕ್ಟ್ರಿಕ್ ಸಿತಾರ್ ಕೆಂಪು ವರ್ಣದ ‘ಝಿತಾರ್’ ಮೂಲಕ ಕಛೇರಿ ಆರಂಭಿಸಿದ ನೀಲಾದ್ರಿ, ತಮ್ಮದೇ ಸಂಯೋಜನೆಯ ‘ಸಮ್ಮಿಲನ’ (ಫ್ಯೂಜನ್) ಮೂಲಕ ಕಛೇರಿಗೆ ನಾಂದಿ ಹಾಡಿದರು. ಇದು ‘ಸೌಂಡ್ ಚೆಕ್’ ಎಂದು ಹಾಸ್ಯವಾಡಿದ ನೀಲಾದ್ರಿ, ‘ರಾಗಗಳು ಇನ್ನಷ್ಟೇ ಶುರುವಾಗ ಬೇಕು’ ಎಂದು ಪ್ರೇಕ್ಷಕರಿಗೆ ಪಂಚ್ ನೀಡಿದರು. ‘ಗ್ರೇಟ್ ಗ್ಯಾಂಬ್ಲರ್’ ಸಿನಿಮಾದ ‘ದೋ ಲಬ್ಜೋ ಕೀ ಹೇ’ ನಾದದ ಮೂಲಕ ಮತ್ತೆ ಚಾಲನೆ ನೀಡಿದ ಅವರು, ಬಳಿಕ ‘ಕರ್ಜ್’ ಸಿನಿಮಾದ ‘ಏಕ್ ದಿವಾನಾ ಥಾ..’ ಸ್ವರ ನುಡಿಸಿದರು. ಮಹಾತ್ಮ ಗಾಂಧೀಜಿಯ ನೆಚ್ಚಿನ ‘ವೈಷ್ಣವ ಜನತೋ..’ ನುಡಿಸಿದರು. ಇದರ ಕನ್ನಡ ಅವತರಣಿಕೆ,…